12 ಮಂದಿ ಖದೀಮರ ಸೆರೆ, 50 ಬೈಕ್ ಜಪ್ತಿ
Team Udayavani, Jul 22, 2023, 9:46 AM IST
ನಗರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 12 ಮಂದಿ ಕಳ್ಳರನ್ನು ಬಂಧಿಸಿ, ಬೈಕ್, ಆಟೋರಿಕ್ಷಾ, ಮೊಬೈಲ್‌ಗಳು, ಚಿನ್ನಾಭರಣ, ನಕಲಿ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದಿದ್ದಾರೆ. ವಿವಿಧ ಪ್ರದೇಶಗಳಲ್ಲಿ ಕಳವು ಮಾಡಿದ್ದ 50ಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಬೈಕ್, ಮೊಬೈಲ್ ಕದ್ದಿದ್ದ ಪ್ರಕರಣವನ್ನು ಬಾಣಸವಾಡಿ ಪೊಲೀಸರು ಭೇದಿಸಿದ್ದಾರೆ. ಮತ್ತೂಂದು ಘಟನೆಯಲ್ಲಿ ಅವಧಿ ಮೀರಿದ ವಸ್ತುಗಳನ್ನು ಅರ್ಧ ಬೆಲೆಗೆ ಮಾರುತ್ತಿದ್ದ ಆರೋಪಿಯನ್ನು ಸೆರೆಹಿಡಿದು 50 ಲಕ್ಷ ರೂ.ಮೌಲ್ಯದ ದಿನಬಳಕೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಉತ್ತರ ವಿಭಾಗ ಮತ್ತು ದಕ್ಷಿಣ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ಬೈಕ್ ಕಳವು ಮತ್ತು ಮೊಬೈಲ್ ಸುಲಿಗೆ ಮಾಡುತ್ತಿದ್ದ ಮೂರು ಪ್ರತ್ಯೇಕ ಪ್ರಕರಣಗ ಳಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 24 ದ್ವಿಚಕ್ರವಾಹನ ಗಳನ್ನು ವಶಕ್ಕೆ ಪಡೆಯಲಾಗಿದೆ.
ಬಸವನಗುಡಿ ಠಾಣೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬೈಕ್ ಮತ್ತು ಮೊಬೈಲ್ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಮಿಥುನ್ (21), ಜಮೀರ್(24), ಅರ್ಫನ್(26) ಹಾಗೂ ಸಾಗರ್ ಅಲಿಯಾಸ್ ಶಕ್ತಿ ವೇಲು( 27) ಬಂಧಿತರು.
ಆರೋಪಿಗಳಿಂದ 11 ಲಕ್ಷ ರೂ. ಮೌಲ್ಯದ 11 ದ್ವಿಚಕ್ರ ವಾಹನಗಳು, 24 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯ ಎಸಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಠಾಣಾಧಿಕಾರಿ ಎಂ.ಎಲ್. ಸುಬ್ರಹ್ಮಣ್ಯಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಬೈಕ್ ಕಳ್ಳನ ಬಂಧನ: ಮತ್ತೂಂದು ಪ್ರಕರಣದಲ್ಲಿ ಲಗ್ಗೆರೆಯ ಚೌಡೇಶ್ವರಿನಗರದಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದ ಮಲ್ಲತ್ತಹಳ್ಳಿ ನಿವಾಸಿ ಚಂದ್ರಕಾಂತ್ ಅಲಿಯಾಸ್ ಗುಂಡ(32) ಎಂಬಾತನನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆತನಿಂದ 8.5 ಲಕ್ಷ ರೂ. ಮೌಲ್ಯದ 13 ಬೈಕ್ ಹಾಗೂ 1 ಆಟೋರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ. ಆತನ ಬಂಧನದಿಂದ ಚಂದ್ರಾ ಲೇಔಟ್, ಆಡುಗೋಡಿ, ಜ್ಞಾನಭಾರತಿ, ನಂದಿನಿ ಲೇಔಟ್, ಕಗ್ಗಲೀಪುರ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ವೆಂಕಟೇಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಚಿನ್ನ ದ ಸರ ಸುಲಿಗೆಗೆ ಯತ್ನ :
ಬೆಂಗಳೂರು: ರಸ್ತೆಯಲ್ಲಿ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ನೀಲಸಂದ್ರದ ವಿಜಿತ್ (30) ಬಂಧಿತ ಆರೋಪಿ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಸುಲಿಗೆ ಹಾಗೂ ಕಳವು ಪ್ರಕರಣ ಗಳು ದಾಖಲಾಗಿವೆ.
ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಸರ ಕಳವು ಮಾಡಲು ಯತ್ನಿಸಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿ ಯನ್ನು ಬಂಧಿಸಲಾಗಿದೆ. ಆರೋಪಿಯಿಂದ 5.5 ಲಕ್ಷ ರೂ. ಮೌಲ್ಯದ 8 ವಿವಿಧ ಕಂಪನಿಯ ದ್ವಿಚಕ್ರ ವಾಹನಗಳು ಹಾಗೂ 8 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ಮಾಹಿತಿ ಮೆರೆಗೆ ಹೆಬ್ಟಾಳ ಪೊಲೀಸ್ ಠಾಣೆಯ 1 ಹಾಗೂ ಬಾಣಸವಾಡಿ ಪೊಲೀಸ್ ಠಾಣೆಯ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಕು ತೋರಿಸಿ ಬೈಕ್ ಕಸಿದಿದ್ದವರ ಸೆರೆ
ಬೆಂಗಳೂರು: ಮಾರಕಾಸ್ತ್ರಗಳನ್ನು ತೋರಿಸಿ ಸಾರ್ವಜನಿಕರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಠಾಣೆ ವ್ಯಾಪ್ತಿಯ ಜೈ ಭಾರತ್‌ನಗರ ಬಸ್ ನಿಲ್ದಾಣ ಸಮೀಪದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡುತ್ತಿದ್ದ ಕಮ್ಮನಹಳ್ಳಿಯ ಪ್ರಕಾಶ್(32), ಬೈಯಪ್ಪನಹಳ್ಳಿಯ ರವೀಂದ್ರ(30) ಮತ್ತು ಸತ್ಯನಗರದ ವಿಜಯ್(29)ನನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 1 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ 2 ಬೈಕ್ ಗಳು, 1 ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜುಲೈ 15ರಂದು ಬಾಣಸವಾಡಿ ವ್ಯಾಪ್ತಿಯ ಜೈಭಾರತ್ ನಗರ ಬಸ್ ನಿಲ್ದಾಣ ಮತ್ತು ಮುಕುಂದ ಚಿತ್ರಮಂದಿರದ ಬಳಿ ರಸ್ತೆಯಲ್ಲಿ ಈ ಮೂವರು ಆರೋಪಿಗಳು ಇಬ್ಬರನ್ನು ಅಡ್ಡಗಟ್ಟಿ ಚಾಕು ತೋರಿಸಿ, ಅವರಿಂದ 2 ದ್ವಿಚಕ್ರ ವಾಹನಗಳು ಮತ್ತು 1 ಮೊಬೈಲ್ ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranji Trophy: ಭಾರತ ಕ್ರಿಕೆಟ್ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?
Bigg Boss: ಟಾಸ್ಕ್ ಮೂಲಕ ನಡೆಯಿತು ಮಿಡ್ ವೀಕ್ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್
Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ
Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ
Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.