ಸಂಸದ ರಮೇಶ ಜಿಗಜಿಣಗಿ ಹೆಸರಿನಲ್ಲಿ ಅನಾಮಧೇಯ ಕರೆ
Team Udayavani, Jul 22, 2023, 5:54 PM IST
ವಿಜಯಪುರ: ಅನಾಮಧೇಯ ವ್ಯಕ್ತಿಗಳು ತಮ್ಮ ಹೆಸರಿನಲ್ಲಿ ಮೊಬೈಲ್ ಕರೆ ಮಾಡಿ ಸಮೀಕ್ಷೆ ಹೆಸರಿನಲ್ಲಿ ಅಪಪ್ರಚಾರ ನಡೆಸಿದ್ದಾರೆ ಎಂದು ವಿಜಯಪುರ ಲೋಕಸಭೆ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ರಾಜಕೀಯವಾಗಿ ನನ್ನನ್ನು ನೇರವಾಗಿ ಎದುರಿಸಲಾಗದ ಕೆಲವರು 9606016039 ಸೇರಿದಂತೆ ಇತರೆ ಕೆಲವು ಮೊಬೈಲ್ ನಂಬರ್ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಗ್ರಾ.ಪಂ. ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಕರೆ ಮಾಡಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸುತ್ತಿದ್ದಾರೆ. ಇಂಥ ಕರೆಗಳು ಬರುತ್ತಿರುವ ಕುರಿತು ಬಿಜೆಪಿ ಪ್ರಮುಖರು, ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ನನ್ನ ಗಮನಕ್ಕೆ ತಂದಿದ್ದಾರೆ ಎಂದು ವಿವರಿಸಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ನನ್ನ ಹೆಸರಿಗೆ ಮಸಿ ಬಳಿಯುವ ಇವರ ಪ್ರಯತ್ನ ಎಂದಿಗೂ ಸಫಲವಾಗದು. ಇಂಥ ಕುತಂತ್ರಗಳಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ಇಷ್ಟಕ್ಕೂ ಇಂಥ ಸವಾಲುಗಳು ನನಗೆ ಹೊಸದಲ್ಲ. ಹೀಗಾಗಿ ಇಂಥ ಕಿಡಿಗೇಡಿಗಳ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.