UPA ದುರಾಸೆಯಿಂದ ಬ್ಯಾಂಕಿಂಗ್‌ಗೆ ಹಾನಿ: ಮೋದಿ
Team Udayavani, Jul 23, 2023, 7:06 AM IST
ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಹಿತಾಸಕ್ತಿಯನ್ನು ಕಡೆಗಣಿಸಿದ್ದು, ಅಧಿಕಾರದ ದುರಾಸೆಯಿಂದಾಗಿ, ಬ್ಯಾಂಕಿಂಗ್ ಕ್ಷೇತ್ರ ವಿನಾಶದತ್ತ ಸಾಗಿತ್ತು. ಆದರೆ, ಎನ್‌ಡಿಎ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರವನ್ನು ಉತ್ತಮ ಆರ್ಥಿಕಸ್ಥಿತಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಉದ್ಯೋಗ ಮೇಳದಲ್ಲಿ ಹೊಸದಾಗಿ ನೇಮಕವಾದ 70 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕ ಪತ್ರ ವಿತರಿಸಿ ಮಾತನಾಡಿದ ಅವರು, “ಕೆಲವು ಪ್ರಭಾವಿ ನಾಯಕರು ಮತ್ತು ಕುಟುಂಬಗಳ ಆತ್ಮೀಯರಿಗೆ ಸಾವಿರಾರು ಕೋಟಿ ರೂ. ಸಾಲ ನೀಡಲಾಯಿತು ಮತ್ತು ಪಡೆದವರಿಗೆ ಆ ಸಾಲಗಳನ್ನು ಹಿಂತಿರುಗಿಸುವ ಉದ್ದೇಶವೇ ಇರಲಿಲ್ಲ’ ಎಂದರು. “ಹಿಂದಿನ ಸರ್ಕಾರದ ಅತಿದೊಡ್ಡ ಹಗರಣಗಳಲ್ಲಿ “ಫೋನ್ ಬ್ಯಾಂಕಿಂಗ್’ ಒಂದಾಗಿದೆ. ಇದು ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಹಾಳು ಮಾಡಿತು. ಬಿಜೆಪಿ ನೇತೃತ್ವದ ಸರ್ಕಾರ ಕೈಗೊಂಡ ಕ್ರಮಗಳ ಪರಿಣಾಮ ಇಂದು ಭಾರತ ಪ್ರಬಲ ಬ್ಯಾಂಕಿಂಗ್ ಕ್ಷೇತ್ರಗಳನ್ನು ಹೊಂದಿರುವ ರಾಷ್ಟ್ರಗಳ ಪೈಕಿ ಒಂದಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.