ನಕಲು,ಅಕ್ರಮ ಮುಕ್ತ ಪರೀಕ್ಷೆಗೆ ಕ್ರಿಯಾಯೋಜನೆ- SSLC, PUC ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕ್ರಮ
- ಎಲ್ಲ ಜಿಲ್ಲೆಗಳಿಂದ ಯೋಜನೆ ಸಿದ್ಧಪಡಿಸಿ ಸಲಹೆ ಸಂಗ್ರಹ
Team Udayavani, Jul 23, 2023, 6:07 AM IST
ದಾವಣಗೆರೆ: ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ನಡೆಯುವ ನಕಲು ಹಾಗೂ ಅಕ್ರಮ ತಡೆಯಲು ಶಾಲಾ ಶಿಕ್ಷಣ ಇಲಾಖೆ ಕ್ರಿಯಾಯೋಜನೆ ತಯಾರಿಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ.
ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮ ತಡೆಯಲು ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರು (ಆಡಳಿತ) ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿ ಕ್ರಿಯಾಯೋಜನೆ ಸಿದ್ಧಪಡಿಸಬೇಕು. ಪಿಯುಸಿ ಪರೀಕ್ಷೆಗೆ ಸಂಬಂಧಿಸಿ ಜಿಲ್ಲಾ ಹಂತದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಭೆ ಆಯೋಜಿಸಿ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಲು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯಿಂದ ನಡೆಸುವ ಪರೀಕ್ಷೆಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿ ಇತ್ತೀಚೆಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ಕುರಿತು ಸೂಚನೆ ನೀಡಿದ್ದಾರೆ. ಎಸೆಸೆಲ್ಸಿ ಪರೀಕ್ಷೆಯಲ್ಲಿ ನಕಲು ಹಾಗೂ ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದ್ದು, ಇದಕ್ಕೆ ಸಹಕರಿಸಿದ ಆರೋಪದಲ್ಲಿ 38 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಈಗ ಪರೀಕ್ಷಾ ಅಕ್ರಮ ತಡೆಗೆ ಯೋಜನೆ ರೂಪಿಸಲು ಸಜ್ಜಾಗಿದೆ.
ವಿಜಯಪುರ, ಯಾದಗಿರಿ, ಬೆಳಗಾವಿ, ಬೀದರ್, ಚಿಕ್ಕೋಡಿ ಸಹಿತ ಉತ್ತರ ಕರ್ನಾಟಕ ಭಾಗದಲ್ಲಿ ಪರೀಕ್ಷಾ ನಕಲು ಹಾಗೂ ಅಕ್ರಮ ಅವ್ಯಾಹತವಾಗಿ ನಡೆಯುತ್ತಿರುವುದನ್ನು ಉಲ್ಲೇಖೀಸಿರುವ ಇಲಾಖೆ, ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ, ಸಭೆಯನ್ನೂ ನಡೆಸಿದೆ. ಜತೆಗೆ ಈಗ ಜಿಲ್ಲಾ ಹಂತದಿಂದ ಕ್ರಿಯಾ ಯೋಜನೆ ಮೂಲಕ ಸಲಹೆ ಪಡೆಯಲು ಮುಂದಾಗಿದೆ.
ಪರೀಕ್ಷೆ ಮಂಡಳಿ ಸಲಹೆ
ಪ್ರಶ್ನೆ ಪತ್ರಿಕೆಗಳಲ್ಲಿ ಎ, ಬಿ, ಸಿ, ಡಿ ವರ್ಷನ್ ಹಾಗೂ ಕ್ಯೂಆರ್ ಕೋಡ್‌ಗಳನ್ನು ಅಳವಡಿಸಬೇಕು. ನೀಟ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆ ಜಾರಿಗೊಳಿಸಿ, ವಿದ್ಯಾರ್ಥಿಗಳು ಶೂ ಧರಿಸದೆ ಪರೀಕ್ಷೆ ಬರೆಯುವ ಮಾರ್ಗಸೂಚಿ ಹೊರಡಿಸಬೇಕು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಹಾಗೂ ಡಿವಿಆರ್ ಅಳವಡಿಸಿ ದೃಶ್ಯಾವಳಿಗಳನ್ನು ಡಯಟ್ ಅಧಿಕಾರಿಗಳಿಂದ ಪರಿಶೀಲಿಸುವ ವ್ಯವಸ್ಥೆ ಮಾಡಬೇಕು.
ಪ್ರಶ್ನೆಪತ್ರಿಕೆ ಬಂಡಲ್ ತೆರೆಯುವುದನ್ನು ಮತ್ತು ಕೊನೆಯಲ್ಲಿ ಸೀಲ್ ಮಾಡುವುದನ್ನು ವೆಬ್ ಕಾಸ್ಟಿಂಗ್ ಮಾಡಬೇಕು. ಬಾಡಿಗೆ ಆಧಾರದಲ್ಲಿ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಡ್ರೋನ್ ಕೆಮರಾ ಮೂಲಕ ಪರೀಕ್ಷಾ ಕಾರ್ಯ ಸೆರೆ ಹಿಡಿಯಬೇಕು. ಶಾಲಾ ಆರಂಭದ ದಿನಗಳಿಂದಲೇ ಪರೀಕ್ಷಾ ಅಕ್ರಮ ತಡೆಗೆ ವಿದ್ಯಾರ್ಥಿ, ಶಿಕ್ಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ಮಾಪನ ಮಂಡಳಿ ಅಧ್ಯಕ್ಷ ಎಸ್.ರಾಮಚಂದ್ರ ಸಲಹೆ ನೀಡಿದ್ದಾರೆ.
ಪರೀಕ್ಷೆಯಲ್ಲಿ ನಕಲು, ಅಕ್ರಮ ನಡೆಯುತ್ತಿರುವುದಕ್ಕೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ದೂಷಿಸದೆ ಮೇಲಿನ ಹಂತದ ಅಧಿಕಾರಿಗಳಾದ ನಾವೇ ಇದರ ಜವಾಬ್ದಾರಿ ಹೊರಬೇಕು. ಇದಕ್ಕಾಗಿ ಎಲ್ಲ ಜಿಲ್ಲೆಗಳಿಂದ ಕ್ರಿಯಾಯೋಜನೆ ತರಿಸಿಕೊಂಡು ನಕಲು ಹಾಗೂ ಅಕ್ರಮ ಮುಕ್ತ ಪರೀಕ್ಷೆ ನಡೆಸಲು ಅಂತಿಮ ಯೋಜನೆ ರೂಪಿಸಲಾಗುವುದು.
– ರಿತೇಶ್‌ಕುಮಾರ್ ಸಿಂಗ್, ಸರಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಬೆಂಗಳೂರು
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.