ಹೋಟೆಲ್ಗಳಲ್ಲಿ ಜೇಬು ಸುಡಲಿದೆ ಕಾಫಿ, ಟೀ
Team Udayavani, Jul 23, 2023, 2:57 PM IST
ಬೆಂಗಳೂರು: ಟೊಮಾಟೊ ಆಯ್ತು ಇನ್ನು ಮುಂದೆ ಹೋಟೆಲ್ಗಳಲ್ಲಿ ಕಾಫಿ, ಟೀ ಸೇರಿದಂತೆ ಇನ್ನಿತರ ತಿಂಡಿ-ತಿನಿಸುಗಳ ಬೆಲೆ ಗ್ರಾಹಕರ ಜೇಬು ಸುಡಲಿದೆ. ರಾಜ್ಯ ಸರ್ಕಾರ ಈಗಾಗಲೇ ಹಾಲಿನ ದರ ಹೆಚ್ಚಳಕ್ಕೆ ಸಮ್ಮತಿಸಿರುವುದರ ಜತೆಗೆ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಹೆಚ್ಚಳವಾಗುತ್ತಿರುವುದು ಕೂಡ ಹೋಟೆಲ್ ಉದ್ಯಮಿಗಳನ್ನು ಚಿಂತೆಗೀಡು ಮಾಡಿದೆ.
ಹೀಗಾಗಿ ಹೋಟೆಲ್ ಉದ್ಯಮ ಮುಂದಿನ ತಿಂಗಳಿಂದ ಟೀ, ಕಾಫಿ ಸೇರಿದಂತೆ ಇನ್ನಿತರ ಕೆಲವು ಆಹಾರ ಪದಾರ್ಥಗಳ ಬೆಲೆ ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ. ಕೋವಿಡ್ ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಂಡಿರುವ ಹೋಟೆಲ್ ಉದ್ಯಮಕ್ಕೆ ಇದೀಗ ಆಹಾರ ಪದಾರ್ಥಗಳ ಬೆಲೆ ಹೆಚ್ಚಳ ಇಕ್ಕಟ್ಟಿಗೆ ಸಿಲುಕಿಸಿದೆ.
ಜತೆಗೆ ಟೊಮಾಟೊ ಬೆಲೆ ಏರಿಕೆ ಆಗಿರುವುದರಿಂದ ಕೆಲವು ಮೆನುಗಳನ್ನು ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿರುವುದರಿಂದ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಕಾಫಿ, ಟೀ ಸೇರಿದಂತೆ ಮತ್ತಿತರ ಆಹಾರ ಪದಾರ್ಥಗಳ ಬೆಲೆಯಲ್ಲಿ ಶೇ.10ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಹೋಟೆಲ್ಗಳ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್, ಕೋವಿಡ್ ಬಳಿಕ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಈಡಾಗಿತ್ತು. ಹೀಗಾಗಿ ಆ ವೇಳೆ ಶೇ.10 ಬೆಲೆ ಏರಿಸಲಾಗಿತ್ತು. ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆ ಜತೆಗೆ ಹಾಲಿನ ದರವೂ ಹೆಚ್ಚಳವಾಗಿದೆ. ಶೀಘ್ರದಲ್ಲೇ ಕಾಫಿ, ಟೀ ಮತ್ತಿತರ ಆಹಾರ ಪದಾರ್ಥಗಳ ದರ ಹೆಚ್ಚಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.
ಹೋಟೆಲ್ ಮಾಲೀಕರ ಸಭೆ: ಬೆಲೆ ಏರಿಕೆ ಸೇರಿದಂತೆ ಹೋಟೆಲ್ ಉದ್ಯಮದ ಇನ್ನಿತರ ವಿಚಾರಗಳ ಕುರಿತಂತೆ ಚರ್ಚಿಸಲು ಜು.25 ರಂದು ನಗರದಲ್ಲಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಯಲಿದೆ. ಆ ಸಭೆಯಲ್ಲಿ ಬೆಲೆ ಏರಿಕೆ ಬಗ್ಗ ನಿರ್ಧಾರವಾಗಲಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ. ಈಗಾಗಲೇ ಕೆಲವರು ಶೇ.10ರಷ್ಟು ಬೆಲೆ ಏರಿಸಬೇಕು ಎನ್ನುತ್ತಿದ್ದಾರೆ. ಇನ್ನೂ ಕೆಲವು ಹೋಟೆಲ್ ಮಾಲೀಕರು ಶೇ.20ರಷ್ಟು ಹೆಚ್ಚಿಸಬೇಕು ಎಂದು ಕೋರಿದ್ದಾರೆ. ಇದೆಲ್ಲವೂ ಅಂದು ಚರ್ಚೆಗೆ ಬರಲಿದೆ ಎಂದು ಸಂಘ ಸ್ಪಷ್ಟಪಡಿಸಿದೆ.
ನಾವಂತೂ ಬೆಲೆ ಏರಿಕೆ ಮಾಡೋದಿಲ್ಲ : ಕೋವಿಡ್ ಆರ್ಥಿಕ ಸಂಕಷ್ಟದಿಂದ ಹೋಟೆಲ್ ಉದ್ಯಮ ಇದೀಗ ಸರಿದಾರಿಗೆ ಬಂದಿದೆ. ಹಾಲಿ ಬೆಲೆ ಏರಿಕೆ ನೆಪ ಇಟ್ಟುಕೊಂಡು ನಾವಂತೂ ಬೆಲೆ ಏರಿಸುವುದಿಲ್ಲ. ಈಗಾಗಲೇ ಹಲವು ವಸ್ತುಗಳ ಬೆಲೆ ಏರಿಕೆಯಿಂದ ಜನರು ರೋಸಿ ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕಾಫಿ, ಟೀ ಬೆಲೆ ಏರಿಸಿದರೆ ಗ್ರಾಹಕರನ್ನು ಹಿಡಿದಿಡುವುದು ಕಷ್ಟ ಸಾಧ್ಯ. ಹೀಗಾಗಿ ಬೆಲೆ ಏರಿಕೆಗೆ ನಮ್ಮ ಸಹ ಮತವಿಲ್ಲ ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳುತ್ತಾರೆ.
“ಉದಯವಾಣಿ’ ಜತೆ ಮಾತನಾಡಿದ ಅವರು, ಈ ಹಿಂದೆಯೇ ಕೆಲವು ಆಹಾರಗಳ ಬೆಲೆ ಏರಿಸಲಾಗಿದೆ. ಈಗ ಮತ್ತೆ ದರ ಹೆಚ್ಚಿಸಿದರೆ ಗ್ರಾಹಕರು ಫುಟ್ಪಾತ್ ಅಂಗಡಿಗಳತ್ತ ಮುಖ ಮಾಡುತ್ತಾರೆ. ಈ ಬಗ್ಗೆ ಆಲೋಚಿಸಬೇಕಾಗಿದೆ. ಹೀಗಾಗಿ ರಾಜ್ಯ ಹೋಟೆಲ್ಗಳ ಸಂಘ ಬೆಲೆ ಏರಿಕೆಗೆ ಸಮ್ಮತಿ ನೀಡುವುದಿಲ್ಲ. ಬೆಲೆ ಏರಿಕೆ ಮಾಡುವವರು ಮಾಡಿಕೊಳ್ಳಲಿದೆ ಎನ್ನುತ್ತಾರೆ.
ಆ.1ರಿಂದ ಏರಿಕೆ, ಈ ಬಗ್ಗೆ ಸಭೆ: ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಜತೆಗೆ ಹಾಲಿನ ದರವೂ ಹೆಚ್ಚಳವಾಗಿದೆ. ಹೀಗಾಗಿ ಆಗಸ್ಟ್ 1ರಿಂದ ಟೀ, ಕಾಫಿ ಸೇರಿದಂತೆ ಆಹಾರ ಪದಾರ್ಥಗಳ ಬೆಲೆಯಲ್ಲಿ ಹೆಚ್ಚಳವಾಗಲಿದೆ. ಎಷ್ಟು ದರ ಹೆಚ್ಚಿಸಬೇಬೇಕು ಎಂಬುವುದರ ಕುರಿತು ಜು.25 ರಂದು ಬೆಂಗಳೂರಿನಲ್ಲಿ ನಡೆಯುವ ಹೋಟೆಲ್ ಮಾಲೀಕರ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಬೆಂಗಳೂರು ಹೋಟೆಲ್ಗಳ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.
-ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.