ಸ್ವಂತ ಖರ್ಚಿನಲ್ಲಿ ನಾಲೆ ಹೂಳು ತೆಗೆಸಿದ ರೈತರು !


Team Udayavani, Jul 23, 2023, 3:23 PM IST

tdy-14

ಯಳಂದೂರು: ಪಟ್ಟಣವೂ ಸೇರಿದಂತೆ, ತಾಲೂಕಿನಲ್ಲಿ ಮುಖ್ಯ ನಾಲೆಗಳು ಹಾಗೂ ಉಪ ಕಾಲುವೆಗಳಲ್ಲಿನ್ನು ಹೂಳುನ್ನು ತೆಗೆಯದ ಕಾರಣ ರೈತರು ತಮ್ಮ ಸ್ವಂತ ಖರ್ಚಿನಲ್ಲಿ ನಾಲೆಗಳ ಹೂಳನ್ನು ತೆಗೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಳಂದೂರು ಪಟ್ಟಣದ ರೈತರು ಇದನ್ನು ಮಾಡಿ ತೋರಿಸಿದ್ದಾರೆ!

ಸಂಬಂಧಪಟ್ಟ ಎಂಜಿನಿಯರ್‌ ವರ್ತನೆಯಿಂದ ಬೇಸತ್ತ ರೈತರು ಉಪ ಕಾಲುವೆಯಲ್ಲಿ ಬೆಳೆದು ಕೊಂಡಿರುವ ಗಿಡಗಂಟಿಗಳು ತೆಗೆಯದ ಕಾರಣ ನೀರು ಸರಾಗವಾಗಿ ಹರಿಯದೆ ರೈತರು ಪ್ರಯಾಸಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಯಳಂದೂರು ಪಟ್ಟಣದಿಂದ ಹಾದು ಹೋಗಿರುವ ಕಬಿನಿ ಕಾಲುವೆಯಲ್ಲಿ ಈಗಾಗಲೇ ಕಾಲುವೆ ತುಂಬೆಲ್ಲಾ ಜೊಂಡು ಬೆಳೆದು ಹೂಳು ತುಂಬಿದೆ. ಕಾಲುವೆ ಕೊನೆ ಕೊನೆಗೊಳ್ಳುವಲ್ಲಿ ಇರುವ ರೈತರು ನೀರಿಗಾಗಿ ಕಾಯುವಂತಾಗಿದೆ. ಕಳೆದ ವರ್ಷ ಸುರಿದ ಭಾರೀ ಮಳೆಯಿಂದ ಕಾಲುವೆ ಗಳಲ್ಲಿ ಮೆಕ್ಕಲು ಮಣ್ಣು, ಕಸಕಡ್ಡಿಗಳು ತುಂಬಿ ಮುಚ್ಚಿ ಕೊಂಡು ನೀರು ಸರಾಗವಾಗಿ ಹರಿಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧ ಪಟ್ಟ ಕೊಳ್ಳೇಗಾಲ ಕಾವೇರಿ ನೀರಾವರಿ ನಿಗಮ ಇಲಾಖೆಗೆ ಅರ್ಜಿ ಸಲ್ಲಿಸಿ ಹೂಳನ್ನು ತೆಗೆಸುವಂತೆ ತಿಳಿಸಿದರು ಕ್ರಮ ವಹಿಸಿಲ್ಲ ಎಂಬುದು ಈ ಭಾಗದ ರೈತರ ಆರೋಪವಾಗಿದೆ.

4 ವಿಭಾಗಗಳಿಗೆ ಹಂಚಿಕೆಯಾಗಿರುವ ತಾಲೂಕು: ಯಳಂ ದೂರು ತಾಲೂಕಿನಲ್ಲಿ ಕಬಿನಿ ಕಾಲುವೆ ಹಾದು ಹೋಗಿದ್ದು ಇದು ಕಾವೇರಿ ನೀರಾವರಿ ಇಲಾಖೆಯ ವ್ಯಾಪ್ತಿಯ ನಾಲ್ಕು ವಿಭಾಗಗಳಲ್ಲಿ ಹಂಚಿಹೋಗಿದೆ. ಚಾ.ನಗರ ನೀರಾವರಿ, ಸಂತೇಮರಹಳ್ಳಿ ನೀರಾವರಿ ಇಲಾಖೆ, ಕೊಳ್ಳೇ ಗಾಲದ ಎರಡು ನೀರಾವರಿ ನಿಗಮ ಗಳಿಗೆ ತಾಲೂಕು ಹರಿದು ಹಂಚಿ ಹೋಗಿರುವ ಹಿನ್ನಲೆ ಸಮ ಪರ್ಕವಾದ ಪೂರ್ಣಪ್ರಮಾಣದ ಕೆಲಸಗಳು ನಡೆ ಯುವು ದಿಲ್ಲ. ಸಮಸ್ಯೆ ಬಂದಾಗ ಈ ಬಗ್ಗೆ ಅಧಿಕಾರಿಗಳಿಗೆ ರೈತರು ದೂರು ನೀಡಿದರೆ ಇದು ನಮ್ಮ ವ್ಯಾಪ್ತಿಗೆ ಬರುವು ದಿಲ್ಲ ಎಂದು ಅಧಿಕಾರಿಗಳು ನುಣುಚಿಕೊಳ್ಳುತ್ತಾರೆ.

ಅಲ್ಲದೆ ಯಳಂದೂರು ಪಟ್ಟಣದಲ್ಲಿ ಇಲಾಖೆಯ ಕಚೇರಿಯೇ ಇಲ್ಲ! ತಾಲೂಕಿನಲ್ಲಿ ನೀರಾವರಿ ಇಲಾಖೆ ಕಚೇರಿಯನ್ನು ತೆರೆದು ರೈತರಿಗೆ ಅನುಕೂಲ ಮಾಡಬೇಕು ಎಂದು ಹಲವು ವರ್ಷಗಳಿಂದ ಇಲ್ಲಿನ ರೈತರು ಸಂಬಂಧಪಟ್ಟವರ ಗಮನಕ್ಕೆ ಈ ವಿಷಯದ ತಂದರೂ ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು, ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಇಲ್ಲಿನ ರೈತರು ದೂರದ ಚಾ.ನಗರ, ಕೊಳ್ಳೇಗಾಲ, ಸಂತೆ ಮರಹಳ್ಳಿಯಲ್ಲಿರುವ ಕೇಂದ್ರಗಳ ಕಚೇರಿಗೆ ತೆರಳಿ ತಮ್ಮ ಕಷ್ಟಗಳನ್ನು ಹೇಳಿ ಕೊಳ್ಳಬೇಕಾದ ಅನಿವಾರ್ಯತೆ ಇದೆ.

ನಮ್ಮ ವ್ಯಾಪ್ತಿಯ ಪ್ರಮುಖ ನಾಲೆಗಳಲ್ಲಿ ಹೂಳೆತ್ತಲು ಕ್ರಮ ವಹಿಸಲಾಗಿದೆ. ಈಗಾಗಲೇ ಹಲವೆಡೆ ಕಾಮಗಾರಿ ಪ್ರಗತಿಯಲ್ಲಿದೆ. ನಮಗೆ ಅನುದಾನದ ಕೊರತೆಯೂ ಇರುವುದರಿಂದ ಕಾಮಗಾರಿ ವಿಳಂಬವಾಗಿದೆ. ಯಳಂದೂರು ವ್ಯಾಪ್ತಿಯಲ್ಲಿ ಕಾಲುವೆ ಹೂಳೆತ್ತುವ ಸಂಬಂಧ ಪರಿಶೀಲಿಸಿ ಕ್ರಮ ವಹಿಸಲಾಗುವುದು. ●ಸತೀಶ್‌, ಜೆಇ ಕಾವೇರಿ ನೀರಾವರಿ ನಿಗಮ, ಕೊಳ್ಳೇಗಾಲ

ಕಾವೇರಿ ನೀರಾವರಿ ವಿಭಾಗಕ್ಕೆ 42ನೇ ವಿತರಣಾ ನಾಲೆಯಿಂದ ಉಪಕಾಲುವೆಯಲ್ಲಿ ಹೂಳನ್ನು ತೆಗೆಯುವಂತೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಸಂಬಂಧಪಟ್ಟ ಕೊಳ್ಳೇಗಾಲ ಉಪವಿಭಾಗದ ಅಧಿಕಾರಿಗಳು ತಲೆಕೆಡೆಸಿಕೊಂಡಿಲ್ಲ. ಈಗ ಕಾಲುವೆಯಲ್ಲಿ ನೀರು ಹರಿಸುವ ಸಮಯವಾಗಿದ್ದು ನಮ್ಮ ಜಮೀನಿಗೆ ನೀರು ಬರುವಂತೆ ಮಾಡಲು ಈ ಭಾಗದ ರೈತರೇ ಹಣವನ್ನು ಸಂಗ್ರಹಿಸಿ ಜೆಸಿಬಿ ಯಂತ್ರದ ಮೂಲಕ ಹೂಳು ತೆಗೆಯಿಸುತ್ತಿದ್ದೇವೆ. – ಜೆ.ಶ್ರೀನಿವಾಸ್‌, ರೈತ, ಯಳಂದೂರು

– ಫೈರೋಜ್‌ ಖಾನ್‌

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.