Ullal; ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ-ವೀಡಿಯೋ ವೈರಲ್
Team Udayavani, Jul 23, 2023, 9:41 PM IST
ಉಳ್ಳಾಲ : ಸ್ಟೇಟ್ ಬ್ಯಾಂಕ್ -ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ವೈರಲ್ ಆಗಿದೆ. ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.
42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ , ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತ ವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ.
ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
117 (ಐಎಂವಿ) ಮೋಟಾರ್ ಆಕ್ಟ್ ನಡಿ ಸಿಟಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಪ್ರಸ್ತುತ ಕಾಯಿದೆಯಡಿ ಲೈಸನ್ಸ್ ರದ್ದುಗೊಳಿಸುವುದು ಹಾಗೂ ದಂಡ ವಿಧಿಸಲಾಗುವುದು. ಸಾರ್ವಜನಿಕವಾಗಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಇಲಾಖೆ ಪ್ರಕರಣ ದಾಖಲಿಸಲಾಗುವುದು’ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ತಿಳಿಸಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.