![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 24, 2023, 6:26 AM IST
ಬೆಂಗಳೂರು: ದಲ್ಲಾಳಿಗಳ ಜತೆಗೆ ಕೈ ಜೋಡಿಸುವ ಅಧಿಕಾರಿ ಮತ್ತು ಸಿಬಂದಿ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ್ ಎಚ್ಚರಿಸಿದ್ದಾರೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಅಥವಾ ಮಧ್ಯವರ್ತಿಗಳ ಜತೆ ಕೈಜೋಡಿಸುವ ಅಧಿಕಾರಿ/ಸಿಬಂದಿ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು.
ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕೆ ನಿವೇಶನಗಳು ಮಂಜೂರಾಗಿರುವ ಉದ್ಯಮಿಗಳ ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಠಳಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಸಹಿಸಲಾಗದು. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು ಇಲ್ಲವೆ ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ, ಅಹವಾಲು ಸಲ್ಲಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.