Kushtagi: ಮೊಬೈಲ್ ಅಂಗಡಿಯಲ್ಲಿ ಕಳ್ಳತನ
ಸಿಸಿ ಕ್ಯಾಮರಾ ಗೋಡೆಗೆ ತಿರುಗಿಸಿ ಚಾಲಕಿತನ ಮೆರೆದ ಕಳ್ಳರು
Team Udayavani, Jul 24, 2023, 9:52 AM IST
ಕುಷ್ಟಗಿ: ಪಟ್ಟಣದ ಮಾರುತಿ ವೃತ್ತದಲ್ಲಿರುವ ಮೊಬೈಲ್ ಅಂಗಡಿವೊಂದರಲ್ಲಿ ಕಳ್ಳತನವಾದ ಪ್ರಕರಣ ಜು.23ರ ಭಾನುವಾರ ರಾತ್ರಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಮಾರುತಿ ವೃತ್ತದ ತಾಲೂಕು ಪಂಚಾಯತ್ ಕಾಂಪ್ಲೆಕ್ಸ್ ನಲ್ಲಿರುವ ಅವಿನಾಶ್ ಕೋರಾ ಅವರಿಗೆ ಸೇರಿದ ವಾಣಿಜ್ಯ ಮಳಿಗೆಯಲ್ಲಿ ಸಿಸಿ ಕ್ಯಾಮರಾ ಗೋಡೆಗೆ ತಿರುಗಿಸಿ, ಬೆಲೆ ಬಾಳುವ ಮೊಬೈಲ್ಗಳನ್ನು ಕದ್ದಿರುವ ಪ್ರಕರಣ ನಡೆದಿದೆ.
ಮೊಬೈಲ್ ಶಾಪ್ ಗೆ ಸಿಸಿ ಕ್ಯಾಮರಾಗಳಿದ್ದರೂ ಚಾಲಕಿ ಕಳ್ಳರು, ಕ್ಯಾಮರಾವನ್ನು ಗೋಡೆಗೆ ತಿರುಗಿಸಿ ಕಳ್ಳತನ ಮಾಡಿದ್ದಾರೆ. ನಿನ್ನೆ ರಾತ್ರಿ ಜಿಟಿ ಜಿಟಿ ಮಳೆಯ ಸಂದರ್ಭದಲ್ಲಿ ಈ ಕಳ್ಳರು ಅಂಗಡಿ ಶಟರ್ ಬಳಿ ಪ್ಲಾಸ್ಟಿಕ್ ಹಾಳೆ ಹೊದ್ದು ಮಲಗಿರುವ ಸ್ಥಿತಿಯಲ್ಲಿ ಯಾರಿಗೂ ಅನುಮಾನ ಬಾರದಂತೆ ಶಟರ್ ಹಾರೆಯಿಂದ ಎಬ್ಬಿಸಿ ಕಳ್ಳತನ ಮಾಡಿದ್ದಾರೆ.
ಸಿಸಿಟಿವಿ ಫುಟೇಜ್ ಪರಿಶೀಲಿಸಿದಾಗ ಕಳ್ಳನೋರ್ವ ಮಿಲಿಟರಿ ಡ್ರೆಸ್ ನಲ್ಲಿ ಟೋಪಿ, ಮಾಸ್ಕ್ ಧರಿಸಿರುವುದು ದಾಖಲಾಗಿದೆ. ಈ ವಾಣಿಜ್ಯ ಮಳಿಗೆಯ ಕಳ್ಳತನ ಹಿನ್ನೆಲೆ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಲಿದ್ದು, ನಿಜ ಸ್ಥಿತಿ ಗೊತ್ತಾಗಲಿದೆ.
ಕುಷ್ಟಗಿ ಪಟ್ಟಣದ ಪ್ರಮುಖ ಸ್ಥಳದಲ್ಲಿ ಕೋರಾ ಮೊಬೈಲ್ ಅಂಗಡಿಯಲ್ಲಿ ಕಳವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.