Gyanvapi survey ಸುಪ್ರೀಂ ಕೋರ್ಟ್ ನ ಆದೇಶಕ್ಕೆ ವಿರುದ್ಧವಾಗಿದೆ: ಮುಸ್ಲಿಂ ಅರ್ಜಿದಾರರು
Team Udayavani, Jul 24, 2023, 11:25 AM IST
ಹೊಸದಿಲ್ಲಿ: ವಾರಣಾಸಿಯಲ್ಲಿನ ಜ್ಞಾನವಾಪಿ ಕಟ್ಟಡದ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸೋಮವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
30 ಸದಸ್ಯರ ಎಎಸ್ ಐ ತಂಡವು ಇಂದು ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಯನ್ನು ಪ್ರಾರಂಭಿಸಿದೆ. ಮಸೀದಿಯನ್ನು ಪ್ರಾಚೀನ ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಗುರಿಯನ್ನು ಅವರು ಹೊಂದಿದ್ದಾರೆ. ಇದರ ನಡುವೆ ತಡೆಯಾಜ್ಞೆ ನೀಡುವಂತೆ ಅರ್ಜಿ ಸಲ್ಲಿಸಲಾಗಿದೆ.
ತಮ್ಮ ಅರ್ಜಿಯಲ್ಲಿ, ಮುಸ್ಲಿಂ ಅರ್ಜಿದಾರರು ಎಎಸ್ ಐ ಸಮೀಕ್ಷೆಗೆ ಇದೇ ರೀತಿಯ ನಿರ್ದೇಶನಗಳನ್ನು ಈ ಹಿಂದೆ ಸುಪ್ರೀಂ ಕೋರ್ಟ್ ಮುಂದೂಡಿದೆ ಎಂದು ಹೇಳಿದರು.
ಇಡೀ ಆವರಣದ ಉತ್ಖನನ ಸೇರಿದಂತೆ ಸಮೀಕ್ಷೆಯ ಆದೇಶವು ಮಸೀದಿಗೆ ಮುಸ್ಲಿಮರ ಪ್ರವೇಶಕ್ಕೆ ಅಡ್ಡಿಯಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:cardiac arrest: ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ 20 ವರ್ಷದ ಯುವಕ ಹೃದಯ ಸ್ಥಂಭನದಿಂದ ಸಾವು
ಜ್ಞಾನವಾಪಿ ಮಸೀದಿ ಆವರಣದಲ್ಲಿ ಎಎಸ್‌ಐ ಸಮೀಕ್ಷೆ ನಡೆಸುವಂತೆ ಜಿಲ್ಲಾ ನ್ಯಾಯಾಲಯವು ಇತ್ತೀಚೆಗೆ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಮುಸ್ಲಿಂ ಕಡೆಯವರು ಅರ್ಜಿಯ ತುರ್ತು ಪಟ್ಟಿಯನ್ನು ಕೋರುತ್ತಿದ್ದಾರೆ.
ಜ್ಞಾನವಾಪಿ ಮಸೀದಿಯೊಳಗೆ ಐವರು ಹಿಂದೂ ಮಹಿಳೆಯರಿಗೆ ಪೂಜೆ ಸಲ್ಲಿಸುವ ಹಕ್ಕನ್ನು ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಅರ್ಜಿಯು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.