ಶುದ್ಧ ಕುಡಿವ ನೀರಿಗಾಗಿ ಜನರ ಪರದಾಟ
Team Udayavani, Jul 24, 2023, 1:21 PM IST
ದೇವನಹಳ್ಳಿ: ಸರ್ಕಾರ ಗ್ರಾಮೀಣ ಮತ್ತು ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಜನ ಆರೋಗ್ಯವಂ ತರಾಗಲು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೋಟ್ಯಂತರ ರೂ. ವ್ಯಯ ಮಾಡುತ್ತಿದ್ದಾರೆ. ಆದರೆ, ದೇವನಹಳ್ಳಿ ಪಟ್ಟಣದ ಪುರಸಭೆ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಶುದ್ಧ ಕುಡಿಯುವ ನೀರಿಗಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣದಲ್ಲಿ ಅಂರ್ತಜಲ ಕುಸಿತ ಹೆಚ್ಚಳದಿಂದಾಗಿ ಫ್ಲೋರೈಡ್ ಯುಕ್ತ ನೀರು ಮಾರಕ ರೋಗಗಳಿಗೆ ಕಾರಣವಾಗಲಿದೆ ಎಂಬುವ ದೃಷ್ಟಿದಿಂದ ಅಸ್ತಿತ್ವಕ್ಕೆ ತರಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ಶುದ್ಧ ಕುಡಿಯುವ ನೀರಿಗಾಗಿ ಫ್ಲೋರೈಡ್ ಯುಕ್ತ ನೀರು ಬಳಕೆ ಮಾಡುವುದು ಅನಿವಾರ್ಯವಾಗಿದೆ. ಕುಡಿಯುವ ನೀರಿಗಾಗಿ ಪರದಾಟ: ಪಟ್ಟಣದ ಪುರಸಭೆ ಆವರಣದಲ್ಲಿರುವ ಶುದ್ಧಕುಡಿಯುವ ನೀರಿನ ಘಟಕ ಸ್ಥಗಿತಗೊಂಡು ಸುತ್ತಮುತ್ತಲಿನ ಜನ ಕುಡಿಯುವ ನೀರಿಗಾಗಿ ಪರದಾಡು ವಂತಾಗಿದ್ದು, ಪುರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ.
ಕುಡಿಯುವ ನೀರು ಪೂರೈಕೆಗೆ ಆಗ್ರಹ: ಸಾರ್ವಜನಿಕರು ಆರೋಗ್ಯ ವಂತರಾಗಿರ ಬೇಕಾದರೆ ಶುದ್ಧ ಕುಡಿಯುವ ನೀರಿಗೆ ಹೆಚ್ಚಿನ ಮಹತ್ವವನ್ನು ಸರ್ಕಾರ ನೀಡಬೇಕು. ಸರ್ವರಿಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಆಶಯದೊಂದಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ಮಾಣವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಗಳು ನಿಂತು ಹೋದರೆ ತಕ್ಷಣ ಅಧಿಕಾರಿಗಳು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಫ್ಲೋರೈಡ್ ಅಂಶ ಪತ್ತೆ: ಅಂತರ್ಜಲ ಕುಸಿದಿರುವ ಪರಿಣಾಮ ಕುಡಿಯುವ ನೀರಿನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಫ್ಲೋರೈಡ್ ಅಂಶ ಕಾಣಿಸಿಕೊಳ್ಳುತ್ತದೆ. ಕೊಳವೆ ಬಾವಿಯಲ್ಲಿ ನೀರು 1200 ರಿಂದ 1500 ಅಡಿಗಳ ವರೆಗೆ ಆಳಕ್ಕೆ ಇಳಿದ ಕಾರಣದಿಂದಾಗಿ ಲಭ್ಯ ನೀರಿನಲ್ಲಿ ಅಪಾಯಕಾರಿ ಫ್ಲೋರೈಡ್ ಅಂಶ ಪತ್ತೆಯಾಗುತ್ತದೆ. ಪಟ್ಟಣದ ಪುರಸಭೆ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವು ಉದ್ಘಾಟನೆಯಾಗಿ ಸುಮಾರು ವರ್ಷಗಳು ಚಾಲ್ತಿಯಲ್ಲಿದ್ದು, ನಿರ್ವಹಣೆ ಕೊರತೆ ಯಿಂದಾಗಿ ಇದೀಗ ಕಳೆದ ವರ್ಷಗಳಿಂದ ಸ್ಥಗಿತಗೊಂಡಿದ್ದು, ಈ ಭಾಗದ ಸಾಕಷ್ಟು ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ.
ಘಟಕ ದುರಸ್ತಿಗೆ ಒತ್ತಾಯ: ಪುರಸಭೆ ಆವರಣದ ನೀರಿನ ಘಟಕವು ಸುಮಾರು 10 ವಾರ್ಡ್‌ಗಳ ಕೇಂದ್ರ ದಲ್ಲಿರುವುದರಿಂದ ಶುದ್ಧ ಕುಡಿಯುವ ನೀರನ್ನು ಬಳಕೆಗೆ ಹೆಚ್ಚು ಪ್ರಚಲಿತವಾಗಿತ್ತು. ಆದರೆ, ಪುರಸಭೆ ನಿರ್ವಹಣೆ ಬೇಜವಾಬ್ದಾರಿಯಿಂದಾಗಿ, ನಿರ್ವಹಣೆ ಕೊರತೆಯಿಂದ ಕಟ್ಟಡ ಮತ್ತು ಯಂತ್ರಗಳು ಶಿಥಿಲಾವಸ್ಥೆಗೆ ತಲುಪಿದ್ದು, ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸ ದಿರುವುದು ಬೇಸರದ ಸಂಗತಿಯಾಗಿದೆ. ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವ ಪುರಸಭಾಧಿಕಾರಿಗಳು ಶೀಘ್ರದಲ್ಲಿಯೇ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಡಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ದೇವನಹಳ್ಳಿಯ ಹೃದಯಭಾಗದಲ್ಲಿರುವ ಪುರಸಭೆಯು ಪ್ರತಿ ಜನರು ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿಗೆ ಬಂದು ತೆಗೆದುಕೊಂಡು ಹೋಗುತ್ತಾರೆ. ಸ್ಥಗಿತ ಗೊಂಡಿರುವುದರಿಂದ ಬೇರೆ ಕಡೆ ಹೋಗಿ ನೀರನ್ನು ತೆಗೆದುಕೊಂಡು ಬರುವ ಸ್ಥಿತಿ ಬಂದಿದೆ. ಇನ್ನಾದರು ಅಧಿಕಾರಿಗಳು ಎಚ್ಚೆತ್ತುಗೊಂಡು ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಬೇಕು. ● ಶ್ರೀನಿವಾಸ್, ನಾಗರೀಕ
ಶುದ್ಧ ಕುಡಿಯುವ ನೀರಿನ ಘಟಕ ಸುಮಾರು ಕಳೆದ ವರ್ಷಗಳಿಂದ ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿದೆ. ಇದರ ದುರಸ್ತಿ ಬಗ್ಗೆ ಇಂಜಿನೀಯರ್ ಅವರೊಂದಿಗೆ ಚರ್ಚಿಸಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ದುರಸ್ತಿಗೊಳಿಸಲು ಕ್ರಮ ವಹಿಸಲಾಗುತ್ತದೆ. ● ದೊಡ್ಡಮಲವಯ್ಯ ಮುಖ್ಯಾಧಿಕಾರಿ, ದೇವನಹಳ್ಳಿ ಪುರಸಭೆ
ಕುಡಿಯುವ ನೀರಿನ ಘಟಕವನ್ನು 15-20 ದಿನಗಳಲ್ಲಿ ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಿಕೊಡಲಾಗುತ್ತದೆ. ● ಗಜೇಂದ್ರ | ಇಂಜಿನೀಯರ್, ಪುರಸಭಾ ಕಾರ್ಯಾಲಯ
– ಎಸ್.ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.