ನಾವಿಕನಿಲ್ಲದ ದೋಣಿಯಂತಾದ ಬಿಜೆಪಿ: ಆಯನೂರು ಮಂಜುನಾಥ್
Team Udayavani, Jul 25, 2023, 5:40 AM IST
ಶಿವಮೊಗ್ಗ: ಬಿಜೆಪಿ ನಾವಿಕನಿಲ್ಲದ ದೋಣಿಯಂತಾಗಿದೆ. ಅಲೆಗಳಿಗೆ ಸಿಲುಕಿ ದಿಕ್ಕು ದೆಸೆಯಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಯಾವ ಪರಂಪರೆಯೂ ಇಲ್ಲ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದನಕ್ಕೆ ತನ್ನದೇ ಆದ ಗೌರವ, ಸಿದ್ಧಾಂತ, ನಿಯಮಗಳಿವೆ. ಹಾಗೆಯೇ ಸಭಾಪತಿಗಳ ಪೀಠಕ್ಕೆ ತನ್ನದೇ ಆದ ಗೌರವವಿದೆ. ಸದನದಲ್ಲಿ ಸಭಾಪತಿಗಳು ತೆಗೆದುಕೊಂಡ ನಿರ್ಧಾರವೇ ಅಂತಿಮ. ರಾಜ್ಯಪಾಲರು ಕೂಡ ಅದನ್ನು ಪ್ರಶ್ನಿಸುವಂತಿಲ್ಲ.
ನ್ಯಾಯಾಲಯಗಳು ಕೂಡ ಅದನ್ನು ಗೌರವಿಸುತ್ತವೆ. ಆದರೆ ಬಿಜೆಪಿ ನಾಯಕರು ಅಲ್ಲಿ ತೆಗೆದುಕೊಂಡ ನಿರ್ಧಾರದ ವಿರುದ್ಧ ಸದನದ ಹೊರಗೆ ಪ್ರಶ್ನೆ ಮಾಡುವಂತಿಲ್ಲ. ಆದರೂ ಕೂಡ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ. ಅವರು ತಪ್ಪು ಮಾಡಿದ್ದಾರೆ ಎಂದು ವಿಪಕ್ಷ ನಾಯಕನೇ ಇಲ್ಲದ ಬಿಜೆಪಿಯವರು ತಮ್ಮ ಮನಸ್ಸಿಗೆ ಬಂದಂತೆ ನಿರ್ಧಾರ ತೆಗೆದುಕೊಂಡಿದ್ದಾರೆ.
ರಾಜ್ಯಪಾಲರ ಬಳಿ ಹೋಗಿದ್ದಾರೆ. ಆದರೆ ಅಲ್ಲಿ ಸಭಾಧ್ಯಕ್ಷರ ವಿರುದ್ಧ ಮಾತನಾಡಿಲ್ಲ. ಬೇರೆ ವಿಷಯ ಮಾತನಾಡಿಕೊಂಡು ಹೊರಗೆ ಬಂದು ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.