ರಸಗೊಬ್ಬರ ಅಂಗಡಿ ಮೇಲೆ ದಾಳಿ: ಪರವಾನಗಿ ಇಲ್ಲದ ಕೀಟನಾಶಕ ವಶ
Team Udayavani, Jul 24, 2023, 9:28 PM IST
ಕೊರಟಗೆರೆ: ಪರವಾನಗಿ ಪಡೆಯದೆ ಅನಧಿಕೃತವಾಗಿ ಕೀಟನಾಶಕ ಮಾರಾಟ ಮಾಡುತ್ತಿದ್ದ ಹಾಗೂ ಬಿಲ್ ಇಲ್ಲದೆ ರಸಗೊಬ್ಬರ ದಾಸ್ತಾನು ಮಾಡಿದ್ದ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆಯ ಜಾರಿ ದಳ ಅಧಿಕಾರಿ ಪುಟ್ಟರಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಪರವಾನಗಿ ಇಲ್ಲದ ಕೀಟನಾಶಕಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
ಕೊರಟಗೆರೆ ತಾಲೂಕು ಜೋನಿಗರಹಳ್ಳಿಯ ಸಿದ್ದೇಶ್ವರಸ್ವಾಮಿ ಫರ್ಟಿಲ್ಯೆಸರ್ಸ್ ಅಂಗಡಿಯಲ್ಲಿ ಆಕ್ರಮವಾಗಿ ಕೀಟನಾಶಕ ಹಾಗೂ ಬಿಲ್ ಇಲ್ಲದೆ ರಸಗೊಬ್ಬರ ಸಾಗಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಕೇಳಿ ಬಂದ ದೂರಿನ ಮೇರೆಗೆ ಕೃಷಿ ಇಲಾಖೆಯ ಜಾರಿದಳದ ಸಹಾಯಕ ನಿರ್ದೇಶಕ ಹಾಗೂ ರಸಗೊಬ್ಬರ ಪರಿವೀಕ್ಷಕ ಪುಟ್ಟರಂಗಪ್ಪ ನೇತೃತ್ವದಲ್ಲಿ ಕೊರಟಗೆರೆ ಕೃಷಿ ಸಹಾಯಕ ನಿರ್ದೇಶಕ ನಾಗರಾಜು, ತೋವಿನಕೆರೆ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಜಿ.ಎಂ.ನರಸಿಂಹಮೂರ್ತಿ ಅವರು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಬಿಲ್ ಹಾಕದೆ 60 ಚೀಲ ಯೂರಿಯಾ ಕಳುಹಿಸಿರುವ ಬಗ್ಗೆ, ರಸಗೊಬ್ಬರ ದರಪಟ್ಟಿ ಪ್ರದರ್ಶಿಸದಿರುವ ಬಗ್ಗೆ, ವಿವಿಧ ರಸಗೊಬ್ಬರಗಳ ಹಾಲಿ ದಾಸ್ತಾನು ವ್ಯತ್ಯಾಸ ಹಾಗೂ ಪರವಾನಗಿ ಪಡೆಯದೇ ವಿವಿಧ ಸರಬರಾಜುದಾರರಿಂದ ಅನಧಿಕೃತವಾಗಿ ಕೀಟನಾಶಕಗಳನ್ನು ಖರೀದಿಸಿ ದಾಸ್ತಾನುಮಾಡಿ ದಾಖಲೆ ಇಲ್ಲದೆ ವ್ಯಾಪಾರ ಮಡುತ್ತಿರುವುದು ಪತ್ತೆಯಾಗಿದ್ದು, ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದ ಸುಮಾರು ೨೦ ಸಾವಿರಕ್ಕೂ ಅಧಿಕ ಮೌಲ್ಯದ ವಿವಿಧ ಕೀಟನಾಶಕಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸದರಿ ಅಂಗಡಿಯವರ ಬಗ್ಗೆ ಕೇಳಿದ ದೂರಿನ ಹಿನ್ನೆಲೆಯಲ್ಲಿ ನೋಟಿಸ್ ಸಹ ಜಾರಿ ಮಾಡಿದ್ದು, ಅವರು ನೀಡಿರುವ ಲಿಖಿತ ಸಮಜಾಯಿಷಿ, ಸಮಂಜಸವಾಗಿಲ್ಲದ ಕಾರಣ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಾರಿದಳ ಅಧಿಕಾರಿ ಪುಟ್ಟರಂಗಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.