ಕಸ ಸಾಗಾಟ ವಾಹನ-ರಿಕ್ಷಾ ಢಿಕ್ಕಿ; ಇಬ್ಬರಿಗೆ ಗಾಯ
Team Udayavani, Jul 24, 2023, 11:56 PM IST
ಬಂಟ್ವಾಳ: ಬಂಟ್ವಾಳ ಪುರಸಭೆಗೆ ಸೇರಿದ ಕಸ ಸಾಗಾಟದ ವಾಹನ ಹಾಗೂ ಆಟೋ ರಿಕ್ಷಾಗಳ ಮಧ್ಯೆ ಸೋಮವಾರ ಢಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಪುರಸಭಾ ಕಚೇರಿಯ ಭಾಗದಿಂದ ಹೊರ ಬರುತ್ತಿದ್ದ ಕಸ ಸಾಗಾಟದ ವಾಹನ ಹಾಗೂ ಬಿ.ಸಿ.ರೋಡಿನಿಂದ ಬಂಟ್ವಾಳ ಪೇಟೆಗೆ ತೆರಳುತ್ತಿದ್ದ ಆಟೋ ರಿಕ್ಷಾಗಳ ಮಧ್ಯೆ ಢಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಮಹಿಳೆಯರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ಸಂಚಾರ ಪೊಲೀಸರು ವಾಹನವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಫಿಟ್ನೆಸ್ ಇಲ್ಲದ ಪುರಸಭೆ ವಾಹನ!
ಪೊಲೀಸ್ ತನಿಖೆಯ ವೇಳೆ ಕಸ ಸಾಗಾಟದ ವಾಹನದಲ್ಲಿ (ಫಿಟ್ನೆಸ್ ಪ್ರಮಾಣಪತ್ರ) ಎಫ್‌ಸಿ ನವೀಕರಣ ಆಗದೇ ಇರುವುದು ಬೆಳಕಿಗೆ ಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪುರಸಭಾ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪುರಸಭೆಯಲ್ಲೇ ಈ ರೀತಿ ಸ್ಪಷ್ಟವಾಗಿ ಕಾನೂನು ಉಲ್ಲಂಘನೆಯಾಗುತ್ತಿರುವುದು ವ್ಯವಸ್ಥೆಯ ಲೋಪಕ್ಕೆ ಕನ್ನಡಿಯಾಗಿದೆ ಎಂದು ಜನರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.