ಆಧಾರ್‌ ತಿದ್ದುಪಡಿಗೆ ಮುಗಿಬಿದ್ದ ಜನ


Team Udayavani, Jul 25, 2023, 4:18 PM IST

ಆಧಾರ್‌ ತಿದ್ದುಪಡಿಗೆ ಮುಗಿಬಿದ್ದ ಜನ

ಬಂಗಾರಪೇಟೆ: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಆಧಾರ್‌ ಕಾರ್ಡ್‌ದ್ದೇ ದೊಡ್ಡ ಸಮಸ್ಯೆಯಾಗಿದ್ದು, ಆಧಾರ್‌ ಕಾರ್ಡ್‌ಗಳ ಅಪ್ಡೇಟ್ ಗಳಿಗಾಗಿ ನಾಡ ಕಚೇರಿಗಳಿಗೆ ನಿತ್ಯ ಅಲೆದಾಡುತ್ತಿರುವುದರಿಂದ ಜನರನ್ನು ನಿಯಂತ್ರಿಸಲು ಸಿಬ್ಬಂದಿಗೆ ತಲೆ ನೋವಾಗಿ ಪರಿಣಮಿಸಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ. ಆದರೆ, ಅವುಗಳನ್ನು ದಕ್ಕಿಸಿಕೊಳ್ಳಲು ಜನಸಾಮಾನ್ಯರಿಗೆ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದೆ.

ಮೊಬೈಲ್‌ ಸಂಖ್ಯೆ ಲಿಂಕ್‌ ಕಡ್ಡಾಯ: ಇದರಲ್ಲಿ ಬಹುಮುಖ್ಯವಾಗಿ ಆಧಾರ್‌ ಅಪ್ಡೆàಟ್‌ ಮಾಡುವುದೇ ದೊಡ್ಡ ತಲೆನೋವಾಗಿದೆ. ಈ ಹಿಂದೆ ಆಧಾರ್‌ ಕಾರ್ಡ್‌ ಗಳನ್ನು ಮಾಡಿಸುವ ಸಮಯದಲ್ಲಿ ಸೇವಾ ಪ್ರತಿನಿಧಿ ಗಳು ಜನ್ಮ ದಿನಾಂಕ, ಮೊಬೈಲ್‌ ಸಂಖ್ಯೆ, ಹೆಸರು ಇತ್ಯಾದಿಗಳನ್ನು ತಮ್ಮ ಇಷ್ಟಕ್ಕೆ ಬಂದಂತೆ ನಮೂದಿಸಿದ್ದಾರೆ. ಇಷ್ಟು ದಿನ ಅದರ ಸಮಸ್ಯೆ ಅಷ್ಟಾಗಿ ಗೊತ್ತಾ ಗಿರಲಿಲ್ಲ. ಆದರೆ, ಈಗ ಪಂಚ ಗ್ಯಾರಂಟಿಗಳನ್ನು ಪಡೆಯಲು ಹೋದಾಗ ಅದರ ಅರಿವು ಈಗ ಆಗುತ್ತಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸೇವಾಸಿಂಧು, ಗ್ರಾಮಒನ್‌ ಕೇಂದ್ರಗಳಿಗೆ ಹೋದಾಗ ಮೊಬೈಲ್‌ಗೆ ಒಟಿಪಿ ಬರದೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಲು ಆಧಾರ್‌ ಸಂಖ್ಯೆಗೆ ಲಿಂಕ್‌ ಆಗಿರುವ ಮೊಬೈಲ್‌ಗೆ ಬರುವಂತಹ ಒಟಿಪಿ ಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕಿದೆ.

ಸರ್ಕಾರದ ಎರಡನೇ ಯೋಜನೆ ಯಾದ 5 ಕೆಜಿ ಅಕ್ಕಿ ಬದಲಿಗೆ ನಗದು ನೇರವಾಗಿ ಫ‌ಲಾನುಭವಿಯ ಬ್ಯಾಂಕ್‌ ಖಾತೆಗೆ ಜಮೆ ಆಗಲಿದೆ. ಇದಕ್ಕೂ ಸಹ ಬ್ಯಾಂಕಿನಲ್ಲಿ ಖಾತೆಗೆ ಆಧಾರ್‌ ಸಂಖ್ಯೆ ಜೋಡಣೆ ಆಗಿರಲೇಬೇಕು. ಇಲ್ಲವಾದರೆ ಸರ್ಕಾರ ದಿಂದ ಡಿಬಿಟಿ ಮೂಲಕ ಬರುವ ಹಣಖಾತೆಗೆ ಜಮೆ ಆಗುವುದಿಲ್ಲ. ಸರಿಯಾಗಿ ಕೆವೈಸಿ ಆಗದ ಕಾರಣ ಬಹಳಷ್ಟು ಜನರು ಅಕ್ಕಿ ಬದಲಾಗಿ ಹಣ ಪಡೆಯಲು ಸಾಧ್ಯವಾಗಿಲ್ಲ.

ಸೈಬರ್‌ ಕೇಂದ್ರಗಳತ್ತ ಜನರ ದಂಡು: ಇನ್ನು ಮೂರನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೂ ಸಹ ಕಡ್ಡಾಯವಾಗಿ ಆಧಾರ್‌ ಸಂಖ್ಯೆಬೇಕಾಗಿದೆ. ಆಧಾರ್‌ ಕಾರ್ಡ್‌ನಲ್ಲಿ ಮೊಬೈಲ್‌ ನಂಬರ್‌ ತಪ್ಪಾಗಿದ್ದರೆ ಅಥವಾ ಆಧಾರ್‌ನಲ್ಲಿ ನಮೂದಾಗಿರುವ ಮೊಬೈಲ್‌ ಸಂಖ್ಯೆ ಕಳೆದು ಹೋಗಿದ್ದರೆ ಯೋಜನೆ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಲು ಜನ ಆಧಾರ್‌ ಸೇವಾ ಕೇಂದ್ರಗಳು ಮತ್ತು ನಾಡ ಕಚೇರಿಗಳ ಮೊರೆ ಹೋಗಿದ್ದಾರೆ.

ಸರ್ವರ್‌ ಕಾಟ: ಕೇಂದ್ರಗಳಲ್ಲಿ ನಿತ್ಯ ಹೆಚ್ಚು ಜನ ಬರುತ್ತಿರುವ ಕಾರಣ ತಿದ್ದುಪಡಿಗಾಗಿ ಕೆಲಸ ಕಾರ್ಯ ಬಿಟ್ಟು ದಿನ ಪೂರ್ತಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದ್ದು, ಇತ್ತ ಆಧಾರ್‌ ಕೇಂದ್ರಗಳಲ್ಲಿ ಸಹ ಆಗಾಗ ಸರ್ವರ್‌ ಸೇರಿ ಇತರೆ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆಧಾರ್‌ ತಿದ್ದುಪಡಿ ಮಾಡಿಸಿದರೂ ಅಪ್ಡೇಟ್‌ ಆಗಲಿಕ್ಕೆ ನಾಲ್ಕೈದು ದಿನಗಳಿಗೂ ಮೇಲ್ಪಟ್ಟು ಸಮಯ ಬೇಕಾಗಿದೆ. ಅದು ಅಪ್ಡೇಟ್‌ ಆಗುವ ತನಕ ಯೋಜನೆ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಿಲ್ಲದೆ ವಿಧಿಯಿಲ್ಲದೆ ಕಾಯಬೇಕಿದೆ. ಆಧಾರ್‌ ಕಾರ್ಡ್‌ಗಳ ತಿದ್ದುಪಡಿಗೆ ಹೆಚ್ಚು ಹೆಚ್ಚು ಜನ ಬರುತ್ತಿರುವ ಕಾರಣದಿಂದ ಹೋಬಳಿಯ ನಾಡಕಚೇರಿ ಮತ್ತು ಪಟ್ಟಣಗಳಲ್ಲಿ ಜನರು ನೂಕುನುಗ್ಗಲು ಮಾಡುತ್ತಿರುವುದರಿಂದ ಸಿಬ್ಬಂದಿಗೆ ಅವರನ್ನು ನಿಯಂತ್ರಿಸುವುದು ಕಷ್ಟವಾಗಿದೆ.

ಕಳೆದ ಒಂದು ತಿಂಗಳಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನಸಾಮಾನ್ಯರು ತಮ್ಮ ಆಧಾರ್‌ ಕಾರ್ಡ್‌ಗಳಲ್ಲಿನ ಹೆಬ್ಬಟ್ಟು ಸರಿಪಡಿಸಲು, ಆಧಾರ್‌ ಕಾರ್ಡ್‌ ಅಪ್ಡೇಟ್‌ ಮಾಡಿಸಲು, ಮೊಬೈಲ್‌ ನಂಬರ್‌ ನಮೂದಿಸಲು ಪ್ರತಿ ದಿನ ಬರುತ್ತಿದ್ದಾರೆ.

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿಗಳಿಗೆ ಮುಖ್ಯವಾಗಿ ಆಧಾರ್‌ ಕಾರ್ಡ್‌ ಅವಶ್ಯಕತೆ ಇರುವುದರಿಂದ ಸರಿಪಡಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಟೋಕನ್‌ ನೀಡಿ ಪ್ರತಿ ದಿನ ನೂರಕ್ಕೂ ಹೆಚ್ಚು ಜನರಿಗೆ ಸರ್ವರ್‌ ಸಮಸ್ಯೆ ನಡುವೆ ತಿದ್ದುಪಡಿ ಮಾಡಲಾಗುತ್ತಿದೆ. – ರಾಮೇಗೌಡ, ಆಧಾರ್‌ ತಿದ್ದುಪಡಿ ಗುಮಾಸ್ತ

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.