Anju: ಇಸ್ಲಾಂಗೆ ಮತಾಂತರವಾಗಿ ಪಾಕಿಸ್ತಾನದ ನಸ್ರುಲ್ಲಾ ಜೊತೆ ಮದುವೆಯಾದ ಭಾರತದ ಅಂಜು; ವರದಿ
ಫೇಸ್ ಬುಕ್ ನಿಂದ ಪರಿಚಯವಾಗಿದ್ದ ಗೆಳೆಯನನ್ನು ನೋಡಲು ಪಾಕ್ ಗೆ ತೆರಳಿದ್ದ ಅಂಜು
Team Udayavani, Jul 25, 2023, 4:57 PM IST
ನವದೆಹಲಿ: ಫೇಸ್‌ಬುಕ್‌ನಿಂದ ಪರಿಚಯವಾದ ವ್ಯಕ್ತಿಯನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತಲುಪಿದ್ದ ಭಾರತೀಯ ವಿವಾಹಿತ ಮಹಿಳೆ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ವಿವಾಹವಾಗಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮ ವರದಿ ಮಾಡಿರುವುದಾಗಿ “ಇಂಡಿಯಾ ಟುಡೇ” ವರದಿ ಹೇಳಿದೆ.
ಘಟನೆ ಹಿನ್ನೆಲೆ: ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿರುವ ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತಲುಪಿದ್ದರು. ಆಕೆ ಪ್ರಯಾಣದ ಎಲ್ಲಾ ದಾಖಲೆಗಳನ್ನು ಹಿಡಿದುಕೊಂಡು ಪಾಕಿಸ್ತಾನಕ್ಕೆ ತಲುಪಿದ್ದಾಳೆ. ಅಂಜು ವಾಟ್ಸಾಪ್ ಮೂಲಕ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ಹೇಳಿದ್ದಳು ಎಂದು ಆಕೆಯ ಪತಿ ಅರವಿಂದ್ ಮಾಧ್ಯಮಕ್ಕೆ ತಿಳಿಸಿದ್ದರು.
ಇದಾದ ಬಳಿಕ ಅಂಜು ಶೀಘ್ರದಲ್ಲಿ ಭಾರತಕ್ಕೆ ಬರುತ್ತೇನೆ. ಇಲ್ಲಿ ಮದುವೆಯೊಂದರಲ್ಲಿ ಭಾಗಿಯಾಗಲು ಬಂದಿದ್ದೇನೆ ಎಂದು ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿತ್ತು.
ಆದರೆ ಇದೀಗ ಪಾಕ್ ಗೆ ತೆರಳಿದ್ದ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ “ಫಾತಿಮಾ” ಎಂದು ಬದಲಾಯಿಸಿಕೊಂಡು ನಸ್ರುಲ್ಲಾ ಅವರೊಂದಿಗೆ ವಿವಾಹವಾಗಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನದ ಅಪ್ಪರ್ ದಿರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಇಬ್ಬರ ನಿಕಾಹ್ ಕುಟುಂಬದ ಸಮ್ಮುಖದಲ್ಲಿ ನಡೆದಿದೆ. ಮದುವೆಯ ಬಳಿಕ ನವ ಜೋಡಿಯು’ಅಂಜು ವೆಡ್ಸ್ ನಸ್ರುಲ್ಲಾ’ ಶೀರ್ಷಿಕೆಯ ವಿಡಿಯೋವನ್ನು ಮಾಡಿದೆ. ಈ ವಿಡಿಯೋ ಟ್ವಿಟರ್ ನಲ್ಲಿ ಹರಿದಾಡುತ್ತಿದ್ದು ಭಾರೀ ವೈರಲ್ ಆಗುತ್ತಿದೆ. ಇದರಲ್ಲಿ ಅಂಜು ಹಾಗೂ ನಸ್ರುಲ್ಲಾ ಪತಿ – ಪತ್ನಿಯರಾಗಿ ಪರ್ವತ ತಾಣಗಳಲ್ಲಿ ಸುತ್ತಾಡುವ ದೃಶ್ಯವಿದೆ.
ಮಲಕಂದ್ ವಿಭಾಗದ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ನಾಸಿರ್ ಮೆಹಮೂದ್ ಸತ್ತಿ ಅವರು ಅಂಜು (35) ಮತ್ತು ನಸ್ರುಲ್ಲಾ (29) ಅವರ ನಿಕಾಹ್ ಆಗಿದ್ದು ನಿಜವೆಂದಿದ್ದಾರೆ. ಅಂಜು ಇಸ್ಲಾಂಗೆ ಮತಾಂತರಗೊಂಡ ನಂತರ ಫಾತಿಮಾ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೋರ್ಟ್ ನಲ್ಲಿ ಮದುವೆಯಾದ ಬಳಿಕ ಪೊಲೀಸ್ ಭದ್ರತೆಯಲ್ಲಿ ಅಂಜು ಅವರನ್ನು ಗಂಡನ ಮನೆಗೆ ಕರೆದುಕೊಂಡು ಹೋಗಲಾಯಿತೆಂದು ವರದಿ ತಿಳಿಸಿದೆ.
ವೀಸಾ ಅವಧಿ ಮುಗಿದ ಬಳಿಕ ಆಗಸ್ಟ್ 20 ರ ರಂದು ನಾನು ಭಾರತಕ್ಕೆ ಬರುತ್ತೇನೆ. ನಸ್ರುಲ್ಲಾ ಅವರೊಂದಿಗೆ ವಿವಾಹವಾಗುವ ಯೋಜನೆ ಇಲ್ಲವೆಂದು ಮಾಧ್ಯಮಗಳಿಗೆ ಅಂಜು ಹೇಳಿದ್ದರು.
ನಸ್ರುಲ್ಲಾ ಅವರು ಕೂಡ ಅಂಜು ಜೊತೆ ವಿವಾಹವಾಗುವ ವಿಚಾರ ಸುಳ್ಳು. ನಾವು ಇಬ್ಬರು 2019 ರಿಂದ ಫೇಸ್ ಬುಕ್ ಸ್ನೇಹಿತರು ಅಷ್ಟೇ. ಅವರು ಶೀಘ್ರದಲ್ಲಿ ಅವರ ದೇಶಕ್ಕೆ ಹೋಗಲಿದ್ದಾರೆ. ನನ್ನ ಕುಟುಂಬದ ಇತರ ಮಹಿಳಾ ಸದಸ್ಯರೊಂದಿಗೆ ಅಂಜು ಅವರ ಮನೆಯ ಪ್ರತ್ಯೇಕ ಕೋಣೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಫೋನಿನ ಮೂಲಕ ಪಿಟಿಐಗೆ ಹೇಳಿದ್ದರು.
Video: Indian girl #Anju with her Pakistani friend Nasrullah Khan in his home district Dir pic.twitter.com/jJJaCmxq1U
— Naimat Khan (@NKMalazai) July 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.