ಶಾಸಕಾಂಗ ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆದದ್ದು ನಿಜ: ಬಿ.ಆರ್ ಪಾಟೀಲ್


Team Udayavani, Jul 25, 2023, 7:03 PM IST

ಶಾಸಕಾಂಗ ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆದದ್ದು ನಿಜ: ಬಿ.ಆರ್ ಪಾಟೀಲ್

ಕಲಬುರಗಿ: ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೇವೆ. ಆದರೆ ಕಾರಣಾಂತರಗಳಿಂದ ಸಭೆ ರದ್ದಾಗಿದೆ. ಹೀಗಾಗಿ ತದನಂತರ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಸಿಎಂ ಅವರಿಗೆ ಪತ್ರ ಬರೆದು ವಿನಂತಿ ಮಾಡಿಕೊಂಡಿದ್ದೇವೆ ಎಂದು ಆಳಂದ ಕ್ಷೇ ಶಾಸಕ ಬಿ.ಆರ್ ಪಾಟೀಲ್ ಹೇಳಿದರು.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಅವರಿಗೆ ಪತ್ರ ಬರೆದಿದ್ದು ನಿಜ, ಮತ್ತೆ ಬೇರೆಯವರು ಸಹಿ ಮಾಡಿರಬಹುದು. ಶಾಸಕಾಂಗ ಸಭೆ ಕರೆಯುವಂತೆ ಕೇಳುವುದು ನಮ್ಮ ಹಕ್ಕು ಎಂದರು.

ವರ್ಗಾವಣೆ ಸಂಬಂಧ ಪತ್ರ ಬರೆದಿಲ್ಲ: ಬಿಜೆಪಿಯಿಂದ ಸೃಷ್ಟಿ ಶಂಕೆ: ಮಾಧ್ಯಮದಲ್ಲಿ ಊಹಾ ಪೋಹ ಸುದ್ದಿ ಹರಿದಾಡುತ್ತಿದೆ. ವರ್ಗಾವಣೆ ವಿಚಾರಕ್ಕೆ ಸಂಬಂಧ ಪಟ್ಟಂತೆ ನಾವು ಯಾವುದೇ ಪತ್ರ ಸಿಎಂಗೆ ಬರೆದಿಲ್ಲ. ಸಿಎಂ ಗೆ ಪತ್ರ ಬರೆದಿದ್ದಾರೆ ಅಂತ ಹೇಳಲಾಗುತ್ತಿರೋ ಪತ್ರ ನಕಲಿಯಾಗಿದೆ. ಯಾರೋ ನನ್ನ ನಕಲಿ ಲೆಟರ್ ಹೆಡ್ ನ್ನು ಬಳಸಿ ಪತ್ರ ವೈರಲ್ ಮಾಡಿದ್ದಾರೆ. ನನ್ನ ಲೆಟರ್ ಹೆಡ್ ನಲ್ಲಿ ಸೀರಿಯಲ್ ನಂಬರ್ ಇದೆ.‌ ನಾನು ಈ ಹಿಂದೆ ಶಾಸಕನಾಗಿದ್ದಾಗ ಇದ್ದಿದ್ದ ಲೆಟರ್ ಪ್ಯಾಡ್ ನ ಪ್ರತಿಯಾಗಿದೆ.‌ ಅದರಲ್ಲಿ ಶಾಂತಿ ನಗರ ಮನೆ ವಿಳಾಸವಿದೆ. ಹೊಸ ಲೆಟರ್ ಹೆಡ್ ನಲ್ಲಿ ಅಕ್ಕ ಮಹಾದೇವಿ ಕಾಲೋನಿ ನಿವಾಸದ ವಿಳಾಸವಿದೆ. ತಮ್ಮ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಬೇದ ಮೂಡಿಸಲು ಈ ಪತ್ರ ಸೃಷ್ಟಿ ಮಾಡಿದ್ದಾರೆ. ಈ ಬಗ್ಗೆ ಎಸ್ಪಿ ಅವರಿಗೆ ದೂರು ನೀಡುತ್ತೇನೆ. ಬಿಜೆಪಿಯವರು ಈ ರೀತಿ ಮಾಡಿರಬಹುದು ಎಂದು ಬಿ.ಆರ್.‌ಪಾಟೀಲ್ ಗಂಭೀರ ಆರೋಪ ಮಾಡಿದರು.‌

ಸರ್ಕಾರ ಅಸ್ಥಿರಗೋಳಿಸುವ ತಂತ್ರ ನಡೆಯುತ್ತಿದೆ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ  ಅನೇಕ ಮಟ್ಟದ ಮಾಹಿತಿ ಕಲೆ ಹಾಕಿ ಹೇಳಿದ್ದಾರೆ.‌ ಡಿಕೆಶಿ ಅವರು ಹೇಳಿರುವುದು ನಿಜ ಇದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಯಾರು ನಂಬುವುದಿಲ್ಲ ಎಂದರು.

ನಾವು ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡಿದ್ದೇವೆ. ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ನಾವು ಮೋದಿ ಅವರನ್ನ ಸೋಲಿಸಲು ಪಣ ತೊಟ್ಟಿದ್ದೇವೆ. ಇವತ್ತಿನ ಸಂದರ್ಭದಲ್ಲಿ ಈ ಸರ್ಕಾರ ಅಸ್ಥಿರಗೊಳಿಸುವ ಶಕ್ತಿ ಯಾರಿಗೂ ಇಲ್ಲ. ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಬಿ.ಆರ್.‌ಸ್ಪಷ್ಟಪಡಿಸಿದರು.

ಅಸಮಾಧಾನ ಮೊದಲು ನನಗೆ ಗೊತ್ತಾಗುತ್ತದೆ:  ಮತ್ತೊಂದೆಡೆ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಾಸಕರಾದ ಬಿ.ಆರ್ ಪಾಟೀಲ್ , ಬಸವರಾಜ ರಾಯರೆಡ್ಡಿ ನನ್ನ ಆತ್ಮೀಯ ಸ್ನೇಹಿತರು ಅವರಿಗೆ ಅಸಮಾಧಾನ ಇದ್ದರೆ ಮೊದಲು ನನಗೆ ಗೊತ್ತಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಸಮಾಜದ ಸಭೆಯಲ್ಲಿ ಮಾತನಾಡಿದ್ದಾರೆ.‌ ನಮ್ಮೆಲ್ಲರಿಗಿಂತ ಹರಿಪ್ರಸಾದ ಶಿಸ್ತಿನ ಸಿಪಾಯಿ ಇದ್ದಾರೆ.

ಸರ್ಕಾರ ಕೆಡವಲು ಸಿಂಗಾಪುರದಲ್ಲಿ ಪ್ಲ್ಯಾನ್ ಮಾಡುತ್ತಿದ್ದಾರೆ ಎನ್ನುವ ಡಿ.ಕೆ ಶಿವಕುಮಾರ್ ಹೇಳಿಕೆಯನ್ನು ತಾವು ಒಪ್ಪುವುದಲ್ಲಾ, ಅಲ್ಲಗಳೆಯುವುದೂ ಇಲ್ಲ‌ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.