ಪ್ರವಾಸಿ ತಾಣಗಳಲ್ಲಿ ಜವಾಬ್ದಾರಿಯುತ ವರ್ತನೆ ಇರಲಿ

Team Udayavani, Jul 26, 2023, 5:06 AM IST

SCENERY

ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಬಹುತೇಕ ಜಲಾಶಯಗಳು, ಜಲಪಾತಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಅದರಲ್ಲೂ ಮಲೆನಾಡಿನ ಸೆರಗಿನಲ್ಲಿರುವ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಾಗಿದ್ದು, ಮಳೆಯ ನಡುವೆಯೂ ಪ್ರವಾಸಿಗರು ದಾಂಗುಡಿ ಇಡುತ್ತಿದ್ದಾರೆ. ಆದರೆ ಕೆಲವೊಂದು ಪ್ರದೇಶಗಳಲ್ಲಿ ಪ್ರವಾಸಿಗರ ಅತಿರೇಕದ ವರ್ತನೆಯಿಂದಾಗಿ ಸಾವು ಸಂಭವಿಸುತ್ತಿದ್ದು, ಬೇಜವಾಬ್ದಾರಿ ವರ್ತನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ.

ಜು.23ರಂದು ಕರಾವಳಿಯ ಕೊಲ್ಲೂರು ಸಮೀಪ ಜಲಪಾತವೊಂದರ ಬಳಿಯಲ್ಲಿ ಭದ್ರಾವತಿಯ ಯುವಕನೊಬ್ಬ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಜತೆಗೆ ಇದ್ದ ಆತನ ಸ್ನೇಹಿತನೇ ಈ ದೃಶ್ಯವನ್ನು ವೀಡಿಯೋ ಮಾಡಿದ್ದು ವೈರಲ್‌ ಆಗಿದೆ. ಈ ಸಂದರ್ಭದಲ್ಲಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅನುಸರಿಸಬೇಕಾದ ಕನಿಷ್ಠ ನಿಯಮಗಳ ಬಗ್ಗೆ ಚರ್ಚೆಯಾಗುತ್ತಿದೆ. ಏಕೆಂದರೆ ಆ ಯುವಕ ಒಂಚೂರು ಎಚ್ಚರಿಕೆ ವಹಿಸಿದ್ದರೂ ಕಾಲು ಜಾರಿ ಬೀಳುತ್ತಿರಲಿಲ್ಲ. ಅಲ್ಲದೆ ಅಷ್ಟು ಮುಂದಕ್ಕೆ ಹೋಗಿ ನಿಲ್ಲುವ ಅಗತ್ಯವೂ ಇರಲಿಲ್ಲ.

ಹಾಗೆಯೇ ಮುಂಬಯಿಯ ಬೀಚ್‌ನ ಬಂಡೆಯೊಂದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಜೋಡಿಯೊಂದಕ್ಕೂ ನೀರಿನ ಅಲೆ ಪೆಟ್ಟು ನೀಡಿತ್ತು. ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಬಂದ ಭಾರೀ ಅಲೆಗೆ ಪತ್ನಿ ಕೊಚ್ಚಿ ಹೋಗಿದ್ದಳು. ಅಲ್ಲದೆ ಹಿಂದೆಯೇ ಇದ್ದ ಮಕ್ಕಳು ಈ ಘಟನೆಗೆ ಸಾಕ್ಷಿಯಾಗಿ ಕಣ್ಣೆದುರಲ್ಲೇ ತಮ್ಮ ಅಮ್ಮನ ಕಳೆದುಕೊಂಡಿದ್ದರು. ಈ ಘಟನೆ ಜೂನ್‌ 9ರಂದು ನಡೆದಿದ್ದು, ಕಳೆದ ವಾರವಷ್ಟೇ ವೀಡಿಯೋ ಬಹಿರಂಗವಾಗಿ ವೈರಲ್‌ ಆಗಿತ್ತು.

ಅಷ್ಟೇ ಅಲ್ಲ ಎಲ್ಲಕ್ಕಿಂತ ಪ್ರಮುಖವಾಗಿ ಬೆಳಗಾವಿ ಬಳಿ ಇರುವ ದೂಧ್‌ಸಾಗರ ಜಲಾಶಯದ ಬಳಿ ಬರಬೇಡಿ. ಸದ್ಯ ಭಾರೀ ಮಳೆಯಾಗುತ್ತಿರುವುದರಿಂದ ಅಪಾಯದ ಸ್ಥಿತಿ ಇದೆ ಎಂದು ಅಧಿಕಾರಿಗಳು ಹೇಳಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹೋಗಿದ್ದರು. ಈ ಸಂದರ್ಭದಲ್ಲಿ ಕೆಲವರನ್ನು ಅಧಿಕಾರಿಗಳು ಬಸ್ಕಿ ಹೊಡೆಸಿ ಶಿಕ್ಷೆ ನೀಡಿ ವಾಪಸ್‌ ಕಳುಹಿಸಿದ್ದರು. ಮಳೆಗಾಲದಲ್ಲಿ ಅಪಾಯದ ಎಚ್ಚರಿಕೆ ನೀಡಿದರೂ, ಅದನ್ನು ಕಡೆಗಣಿಸಿ ಅಂಥ ಸ್ಥಳಗಳಿಗೆ ಹೋಗುವ ಅಪಾಯವನ್ನು ಪ್ರವಾಸಿಗರು ಮೈಮೇಲೆ ಎಳೆದುಕೊಳ್ಳದಿರುವುದು ವಾಸಿ.

ಇವು ಕೆಲವೇ ಕೆಲವು ಉದಾಹರಣೆಗಳಷ್ಟೇ. ಪ್ರತೀ ಬಾರಿಯ ಮಳೆಗಾಲದಲ್ಲೂ ಇಂಥ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ತುಂಬಿ ಹರಿಯುವ ಸೇತುವೆಗಳ ಮೇಲೆ ಬೈಕ್‌ ಮತ್ತು ಕಾರುಗಳಲ್ಲಿ ಪ್ರಯಾಣ ಮಾಡಲು ಯತ್ನಿಸುವುದು ಅಷ್ಟೇ ಅಲ್ಲ, ಬಸ್‌ಗಳನ್ನೇ ತೆಗೆದುಕೊಂಡು ಹೋಗಿ ಅದರಲ್ಲಿರುವ ಜನರನ್ನು ಅಪಾಯಕ್ಕೆ ತಳ್ಳುವಂಥ ಘಟನೆಗಳು ಕಾಣಸಿಗುತ್ತಿವೆ. ಜೋರಾಗಿ ಹರಿಯುವ ನೀರಿನ ಮುಂದೆ ಶಕ್ತಿ ಪ್ರದರ್ಶನ ಮಾಡುವ ಇಂಥ ಹುಡುಗಾಟಿಕೆಗಳನ್ನು ಕೈಬಿಡದಿದ್ದರೆ ಜೀವಕ್ಕೆ ಅಪಾಯ ಎಂಬುದನ್ನು ಮನಗಾಣಬೇಕು.

ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕೇವಲ ಸಣ್ಣ ಪುಟ್ಟ ಹುಡುಗರು, ಕಾಲೇಜಿನ ಯುವಕರೇ ಗುಂಪುಕಟ್ಟಿಕೊಂಡು ಪ್ರವಾಸ ಹೋಗುತ್ತಾರೆ. ಇಂಥವರಿಗೂ ಪ್ರವಾಸಿ ತಾಣಗಳಲ್ಲಿ ಅನುಸರಿಸಬೇಕಾದ ಕನಿಷ್ಠ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು. ಒಂದು ಸಣ್ಣ ತಪ್ಪು ನಡೆ ಜೀವಕ್ಕೆ ಎರವಾದೀತು ಎಂಬುದನ್ನು ಎಲ್ಲರೂ ಮನಗಂಡು ಜವಾಬ್ದಾರಿಯಿಂದ ವರ್ತಿಸಬೇಕು. ಸರಕಾರವೂ ಈ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಬೇಕು.

ಟಾಪ್ ನ್ಯೂಸ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.