ಉತ್ತಮ ಮಳೆ: ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆಯಾಗುವ ನಿರೀಕ್ಷೆ
Team Udayavani, Jul 26, 2023, 2:47 PM IST
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದರು.
ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ: ಪರಿಶೀಲನೆ:
ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ:
ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದರು.
ಅಮಾಯಕ ಮೇಲಿನ ಕೇಸ್ ವಾಪಸ್:
ಡಿ.ಜೆ.ಹಳ್ಳಿ ಹಾಗೂ ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಅಮಾಯಕರ ಮೇಲಿನ ಕೇಸ್ ಹಿಂಪಡೆಯುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಏಕೆ ಹಿಂಪಡೆಯಲಿಲ್ಲ ಎಂದರು.
ಶಾಸಕರ ಹೆಸರಿನಲ್ಲಿ ನಕಲಿ ಪತ್ರ:
ಶಾಸಕರು ಸಚಿವರ ಮೇಲೆ ದೂರು ನೀಡಿ ಮುಖ್ಯ ಮಂತ್ರಿಗಳಿಗೆ ಬರೆದಿದ್ದಾಈ ಎನ್ನಲಾದ ಪತ್ರವನ್ನು ಶಾಸಕ ಬಿ.ಆರ್.ಪಾಟೀಲ್ ಅವರೇ ನಕಲಿ ಪತ್ರ ಎಂದು ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ. ಇಂಥ ಮಂತ್ರಿ ಎಂದು ಹೆಸರಿಸಿಲ್ಲ ಎಂದರು.
ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ:
ಕಾರ್ಗಿಲ್ ಯುದ್ಧದಲ್ಲಿ ಸುಮಾರು 524 ಯೋಧರು ದುರ್ಗಮ ಸ್ಥಳದಲ್ಲಿ ಹೋರಾಡಿ ದೇಶವನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ತ್ಯಾಗ, ಬಲಿದಾನ ಮಾಡಿದ ಎಲ್ಲರ ಆತ್ಮಕ್ಕೆ ಶಾಂತಿ ಕೋರಿ ಸ್ಮರಿಸುವುದು ನಮ್ಮ ಕರ್ತವ್ಯ. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನ ನೀಡುವಂಥದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.