ಆಗುಂಬೆ ಘಾಟಿಯಲ್ಲಿ ಘನ ವಾಹನಗಳಿಗೆ ನಿಷೇಧ: ಪರ್ಯಾಯ ಮಾರ್ಗ ಬಳಸಿ
ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ...
Team Udayavani, Jul 26, 2023, 7:01 PM IST
ಉಡುಪಿ: ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ಸೆಪ್ಟೆಂಬರ್ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆ ಮತ್ತು ಭಾರೀ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ಧಾರಿ 169 A ಯ ಆಗುಂಬೆ ಘಾಟಿಯ 6,7 ಮತ್ತು 11 ನೇ ತಿರುವಿನಲ್ಲಿ ಸಣ್ಣ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಆತಂಕ ಉಂಟಾಗಿದೆ. ಹೀಗಾಗಿ ಜುಲೈ 27 ರಿಂದ ಸೆಪ್ಟೆಂಬರ್ 15 ರ ವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿರುವುದರಿಂದ ತೀರ್ಥಹಳ್ಳಿ – ಉಡುಪಿ ಮಧ್ಯೆ ಸಂಚರಿಸುವ ಭಾರೀ ವಾಹನಗಳು ಈ ಕೆಳಗಿನ ಬದಲಿ ಮಾರ್ಗವನ್ನು ಆಯ್ದುಕೊಳ್ಳಬಹುದು ಎಂದು ಪ್ರಕಟನೆ ಹೊರಡಿಸಿದ್ದಾರೆ.
ಮಾರ್ಗ 1. ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಘಾಟ್- ಕಾರ್ಕಳ- ಉಡುಪಿ
ಮಾರ್ಗ 2. ತೀರ್ಥಹಳ್ಳಿ- ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ- ಉಡುಪಿ
ಇದನ್ನೂ ಓದಿ: VVIP Tree;ಇದು ಭಾರತದ ಮೊದಲ VVIP ಮರ…ಈ ಪವಿತ್ರ ಮರದ ಭದ್ರತೆಗೆ ವರ್ಷಕ್ಕೆ 12 ಲಕ್ಷ ಖರ್ಚು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.