ಇ.ಡಿ. ನಿರ್ದೇಶಕರ ಮುಂದುವರಿಕೆಗೆ ಮನವಿ
Team Udayavani, Jul 27, 2023, 12:21 AM IST
ಹೊಸದಿಲ್ಲಿ: ಜಾರಿ ನಿರ್ದೇಶನಾಲಯ (ಇ.ಡಿ.)ದ ಹಾಲಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಅ.15ರವರೆಗೆ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬೇಕು. ಇದರಿಂದ ದೇಶದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಗಳ ತನಿಖಾ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ವ್ಯವಹಾರಗಳ ಕಾರ್ಯಪಡೆ(ಎಫ್ಎಟಿಎಫ್)ಯ ಪರಿಶೀಲನೆಯು ಸುಗಮವಾಗಿ ನಡೆಯಲಿದೆ ಎಂದು ಕೇಂದ್ರ ಸರಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.
ಪ್ರಸ್ತುತ ಅವರನ್ನು ಬದಲಾವಣೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗುತ್ತದೆ, ದೇಶದ ಹಿತವನ್ನಿಟ್ಟುಕೊಂಡೇ ಅವರ ಅವಧಿಯನ್ನು ಮುಂದುವರಿಸಲು ಮನವಿ ಮಾಡಲಾಗಿದೆ ಎಂದು ಕೇಂದ್ರ ಹೇಳಿದೆ. ಜು.31ರೊಳಗೆ ನೂತನ ಇ.ಡಿ. ನಿರ್ದೇಶಕರನ್ನು ನೇಮಿಸಬೇಕು ಎಂದು ಜು.11ರ ವಿಚಾರಣೆಯಲ್ಲಿ ಸುಪ್ರೀಂ ಆದೇಶಿಸಿತ್ತು. ಈ ದಿನಾಂಕವನ್ನು ವಿಸ್ತರಿಸಬೇಕು ಎಂದು ಕೋರಿ ಸರಕಾರ ಬುಧವಾರ ಅರ್ಜಿ ಸಲ್ಲಿಸಿದೆ. “ಈ ಹಂತದಲ್ಲಿ ಜಾರಿ ನಿರ್ದೇಶನಾಲಯದಲ್ಲಿ ನಾಯಕತ್ವ ಬದಲಾವಣೆಯು, ಎಫ್ಎಟಿಎಫ್ ಮೌಲ್ಯಮಾಪನ ತಂಡಕ್ಕೆ ಅಗತ್ಯ ನೆರವು ಮತ್ತು ಸಹಕಾರವನ್ನು ಒದಗಿಸುವ ಇ.ಡಿ . ಯ ಸಾಮರ್ಥ್ಯವನ್ನು ಗಮನಾರ್ಹವಾಗಿ ಕುಂಠಿತಗೊಳಿಸುತ್ತದೆ, ಅವರ ಮುಂದುವರಿಕೆ ಅಗತ್ಯ’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.