ಮಗುಚಿ ಬಿದ್ದ ಲಾರಿ: ರಾಶಿ ಬಿದ್ದು ಟೊಮ್ಯಾಟೋ ಹೆಕ್ಕಿದ ಜನ
Team Udayavani, Jul 27, 2023, 11:23 AM IST
ರಾಮನಗರ: ತಾಲೂಕಿನ ಸಂಕಲಗೆರೆ ಗೇಟ್ ಬಳಿ ಮಧ್ಯರಾತ್ರಿಯಲ್ಲಿ ಟೊಮ್ಯಾಟೋ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.
ರಸ್ತೆಯಲ್ಲಿ ಚೆಲ್ಲಾಡುತ್ತಿದ್ದ ಟಮೋಟೊವನ್ನು ಸಿಕ್ಕ ಸಿಕ್ಕವರು ತುಂಬಿಕೊಂಡು ಹೋಗುತ್ತಿದ್ದು, ತಕ್ಷಣ ಬೇರೊಂದು ವಾಹನಕ್ಕೆ ತುಂಬಿ ಸಾಗಿಸಲಾಗಿದೆ.
ಕಾಡಾನೆ ದಾಳಿ
ಕಾಡಾನೆಗಳ ದಾಳಿಗೆ ರೈತರು ಬೆಳೆದ ಟೊಮ್ಯಾಟೋ ಬೆಳೆಗೆ ಹಾನಿಯಾಗಿರುವ ಘಟನೆ ಚನ್ನಪಟ್ಟಣದ ತಗಚಗೆರೆ, ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನವೀನ್ ಮರಿಸ್ವಾಮಿ ಎಂಬುವರಿಗೆ ಸೇರಿದ್ದ ಟೊಮ್ಯಾಟೋ ಬೆಳೆಯ ಮೇಲೆ ದಾಳಿ ಮಾಡಿದ ಕಾಡಾನೆಗಳ ಹಿಂಡು ಲಕ್ಷಾಂತರ ಮೌಲ್ಯದ ಬೆಳೆ ಹಾನಿ ಮಾಡಿದೆ.
ಟೊಮ್ಯಾಟೋಗೆ ಬಂಪರ್ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ರೈತರು ಒಳ್ಳೆಯ ಆದಾಯ ಪಡೆಯುವ ನಿರೀಕ್ಷೆ ಹೊಂದಿದ್ದರು. ಆದರೆ ಇದೀಗ ಕಾಡಾನೆ ಹಾವಳಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ತಗಚಗೆರೆ ಗ್ರಾಮದ ಶಶಿಧರ ಎಂಬುವರಿಗೆ ಸೇರಿದ ತೆಂಗಿನ ಮರಗಳು ಕಾಡಾನೆ ದಾಳಿಗೆ ನಾಶವಾಗಿವೆ. ದೊಡ್ಡದಾದ ಐದು ತೆಂಗಿನ ಮರಗಳು, 10 ಕ್ಕೂ ಹೆಚ್ಚು ಸಸಿಗಳಿಗೆ ಹಾನಿಯಾಗಿದೆ. ಪಕ್ಕದ ತೋಟದಲ್ಲಿಯೂ ತೆಂಗು, ಟೊಮ್ಯಾಟೊ ಬೆಳೆ ನಾಶವಾಗಿದೆ.
ಕಳೆದೊಂದು ತಿಂಗಳಿನಿಂದ ಈ ಭಾಗದಲ್ಲಿ ನಿರಂತರ ಕಾಡಾನೆ ದಾಳಿಯಾಗುತ್ತಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಅಸಹಾಯಕರಾಗಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.