ಕಬಿನಿ ಜಲಾಶಯದಿಂದ ಹರಿದ ನೀರು; ಮೈತುಂಬಿದ ಕಪಿಲೆ

Team Udayavani, Jul 27, 2023, 3:19 PM IST

ಕಬಿನಿ ಜಲಾಶಯದಿಂದ ಹರಿದ ನೀರು; ಮೈತುಂಬಿದ ಕಪಿಲೆ

ನಂಜನಗೂಡು: ನೆರೆಯ ರಾಜ್ಯ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಬಿನಿ ಜಲಾಶಯ ಭರ್ತಿಯಾಗಿ, 20,000 ಸಾವಿರ ಕ್ಯೂಸೆಕ್‌ ನೀರು ಹೊರಬಿಡಲಾಗುತ್ತಿದೆ. ಇದರಿಂದ ಕಪಿಲೆ ಮೈದುಂಬಿ ಹರಿಯುತ್ತಿದೆ. ಇದರಿಂದ ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರನ ಸ್ನಾನ ಘಟ್ಟದಲ್ಲಿ ನೀರಿನ ಬರ ಎದುರಿಸುತ್ತಿದ್ದ ಭಕ್ತರಲ್ಲಿ ಈಗ ಸಂತಸ ತರಿಸಿದೆ.

ಮುಂಗಾರು ಮಳೆ ವಿಳಂಬವಾದ ಹಿನ್ನೆಲೆಯಲ್ಲಿ ಒಳ ಹರಿವು ಇಲ್ಲದೆ ಕಬಿನಿ ಜಲಾಶಯ ಡೆಡ್‌ ಸ್ಟೋರೇಜ್‌ಗೆ ತಲುಪಿತ್ತು. ಹೀಗಾಗಿ ನದಿಗೆ ಹರಿಯುತ್ತಿದ್ದ ನೀರು ಸಂಪೂರ್ಣ ನಿಲ್ಲಿಸಲಾಗಿತ್ತು. ಬೆಂಗಳೂರಿಗೆ ಕುಡಿಯುಲು ಮಾತ್ರ ಅಲ್ಪ ಪ್ರಮಾಣದ ನೀರು ಹರಿಸಲಾಗುತ್ತಿತ್ತು. ಅದನ್ನು ಕಂಡು ಪತ್ರ ಸ್ನಾನಕ್ಕೆಂದು ಬಂದವರು ಕಪಿಲೆಯಲ್ಲಿ ಸ್ನಾನಕ್ಕೆ ನೀರಿಲ್ಲ ಎಂದು ಹೇಳುತ್ತಿದ್ದರು.

ಜಲಾನಯನ ಪ್ರದೇಶದಲ್ಲಿ ಮಳೆ: ಕೇರಳದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿ ಕಬಿನಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ನಿಧಾನವಾಗಿ ಹದಿನಾರು ಕಾಲು ಮಂಟಪ ಆವರಿಸುತ್ತಿದ್ದು, ತಾಲೂಕಿನ ಕಪಿಲಾ ನದಿಯ ಎಡ, ಬಲ ದಂಡೆ ಗ್ರಾಮಗಳ ಜನರಲ್ಲಿ ಪ್ರವಾಹದ ಆತಂಕ ಕಾಡತೊಡಗಿದೆ.

20 ಸಾವಿರ ಕ್ಯೂಸೆಕ್‌ ನೀರು: ಕಪಿಲಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್‌ ನೀರು ಮಾತ್ರ ಹೊರಬರುತ್ತಿದೆ. ಸದ್ಯ ಪ್ರವಾಹದ ಭಯ ಇಲ್ಲ. ಆದರೂ, ಹಿಂದಿನ ಅನುಭವದೊಂದಿಗೆ ಕಂದಾಯ ಇಲಾಖೆ, ಶಾಸಕರ ಮಾರ್ಗದರ್ಶನದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆಡಳಿತ ವರ್ಗ ಸರ್ವ ಸನ್ನಧವಾಗಿದೆ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕ್ಯಾಸನೂರು ಹೇಳಿದರು.

ಪ್ರವಾಹ ಬಂದರೆ ತಡೆಯಲಂತೂ ಸಾಧ್ಯವಿಲ್ಲ. ಅದಕ್ಕಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈಗಾಗಲೇ ತಹಶೀಲ್ದಾರ್‌ ಶಿವಕುಮಾರ್‌, ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದಕ್ಕಾಗಿಯೇ ಹುಲ್ಲಹಳ್ಳಿಯಲ್ಲಿ ನೀರಾವರಿ, ಕಂದಾಯ, ಕೃಷಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಇಲ್ಲಿನ ಮಾಹಿತಿಯನ್ನು ಸಿಎಂ, ಜಿಲ್ಲಾ ಉಸ್ತುವಾರಿ ಸಚಿವರಿಗೆ ತಿಳಿಸಿದ್ದೇನೆ. ನಾಲೆಗಳಿಗೆ ನೀರು ಬಿಡಲು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ. – ದರ್ಶನ್‌ ಧ್ರುವನಾರಾಯಣ, ಶಾಸಕ.

ಕಬಿನಿ ಜಲಾಶಯ ತುಂಬಿದ್ದು, ಹೆಚ್ಚುವರಿ ನೀರು ನದಿಗೆ ಹರಿಬಿಡಲಾಗಿದೆ. ಹೀಗಾಗಿ, ರೈತರು ಭತ್ತದ ಬೆಳೆ ಬೆಳೆಯಲು ಕಪಿಲಾ ಎಡ, ಬಲ ಹಾಗೂ ಹುಲ್ಲಹಳ್ಳಿ, ರಾಂಪುರ ನಾಲೆಗಳಿಗೆ ನೀರು ಹರಿಸಲು ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕು. ● ವಿದ್ಯಾಸಾಗರ್‌, ಜಿಲ್ಲಾಧ್ಯಕ್ಷ, ರೈತ ಸಂಘ.

ಆಷಾಢ ಕಳೆದು ಶ್ರಾವಣ ಬಂದರೂ ನೀರಾವರಿ ಸಲಹಾ ಸಮಿತಿ ಸಭೆ ಕರೆದಿಲ್ಲ. ಇನ್ನು ಸಭೆ ನಡೆಯುವವರಿಗೆ ಕಾಯದೇ ನದಿಗೆ ಬಿಡುವ ನೀರನ್ನು ನಾಲೆಗೆ ಹರಿಸಬೇಕು. ● ಶಿರಮಳ್ಳಿ ಸಿದ್ದಪ್ಪ, ಅಧ್ಯಕ್ಷ, ತಾಲೂಕು ರೈತ ಸಂಘ.

– ಶ್ರೀಧರ್‌ ಆರ್‌.ಭಟ್‌

ಟಾಪ್ ನ್ಯೂಸ್

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.