ಹರಿಪ್ರಸಾದ್ ಅಸಮಾಧಾನ ತಾತ್ಕಾಲಿಕ ಶಮನ
-ಡಿಕೆಶಿ ಸಹಿತ ಪ್ರಮುಖರಿಂದ ಮನವೊಲಿಕೆ, ರಾಜೀನಾಮೆ ಕೈಬಿಟ್ಟ ಹರಿಪ್ರಸಾದ್
Team Udayavani, Jul 27, 2023, 9:10 PM IST
ಬೆಂಗಳೂರು: ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ವಿಧಾನ ಪರಿಷತ್ತಿನ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದ ಬಿ.ಕೆ.ಹರಿಪ್ರಸಾದ್ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದು, ಇದರೊಂದಿಗೆ ಅಸಮಾಧಾನದ ಹೊಗೆ ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ.
ರಾಜ್ಯ ಸರಕಾರದಲ್ಲಿ ಹರಿಪ್ರಸಾದ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಸಂಪುಟಕ್ಕೆ ಸೇರಿಸಿಕೊಳ್ಳದ ಕಾರಣ ಅವರು ಅಸಮಾಧಾನಗೊಂಡಿದ್ದರು. ಸರಕಾರದ ಮೊದಲ ಅಧಿವೇಶನದಲ್ಲೂ ಭಾಗವಹಿಸದೆ ದೂರ ಉಳಿದಿದ್ದರು. ಈ ನಡುವೆ “ಮುಖ್ಯಮಂತ್ರಿ ಮಾಡುವುದೂ ಗೊತ್ತು, ಕೆಳಗಿಳಿಸುವುದೂ ಗೊತ್ತು’ ಎಂದು ಹೇಳಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಇದರ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ ಡಿ.ಕೆ.ಶಿವಕುಮಾರ್ ಸಹಿತ ಹಿರಿಯ ನಾಯಕರು ಅವರ ಮನವೊಲಿಸಿದರು.
ಪರಮೇಶ್ವರ್ ಭೇಟಿ
ಹರಿಪ್ರಸಾದ್ ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಗೃಹ ಸಚಿವ ಡಾ| ಜಿ. ಪರಮೇಶ್ವರ ಮತ್ತು ಅತಿ ಹಿಂದುಳಿದ ಸಮುದಾಯಗಳ ಜಾಗೃತ ವೇದಿಕೆ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್ ಅವರು ಹರಿಪ್ರಸಾದ್ ಮನೆಗೆ ದೌಡಾಯಿಸಿ ಮನವೊಲಿಕೆ ಕಸರತ್ತು ನಡೆಸಿದರು. ಸುದೀರ್ಘ ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ಸಚಿವ ಸ್ಥಾನ ದೊರೆಯದಿರುವ ಕುರಿತು ತಮಗೂ ಬೇಸರವಿದೆ. ಆದರೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಖಂಡಿತ ಸಿಗಲಿದೆ. ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದು ಮನ್ನಣೆ ನೀಡುವ ಪ್ರಯತ್ನ ಮಾಡುವುದಾಗಿ ಹೇಳುವ ಮೂಲಕ ಸಮಾಧಾನಪಡಿಸಲಾಯಿತು.
ರಾಜ್ಯ ಅತಿವೃಷ್ಟಿ ಮತ್ತು ಪ್ರವಾಹದ ಸಂಕಷ್ಟಕರ ಪರಿಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಜನತೆಯ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡಬೇಕಿದೆ. ಯಾವುದೇ ಅಸಮಾಧಾನಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳೋಣ. ರಾಜ್ಯದ ಪ್ರಜೆಗಳು ಕಾಂಗ್ರೆಸ್ ಮೇಲೆ ಅಪಾರ ನಂಬಿಕೆಯಿಂದ ದೊಡ್ಡ ಮಟ್ಟದ ಜನಾದೇಶ ನೀಡಿದ್ದು, ಪಕ್ಷದ ಎಲ್ಲ ನಾಯಕರೂ ಒಗ್ಗೂಡಿ ಕೆಲಸ ಮಾಡಬೇಕಿರುವ ಅಗತ್ಯವಿದೆ ಎಂದು ಪರಮೇಶ್ವರ್ ತಿಳಿಸಿದರು. ಇದರೊಂದಿಗೆ ಹರಿಪ್ರಸಾದ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.