ಗಣಿ ಪರಿಸರ ಪುನಃಶ್ಚೇತನ ನಿಗಮದ ಬೈಲಾ ತಿದ್ದುಪಡಿ-ಮುಖ್ಯಮಂತ್ರಿ ಸೂಚನೆ
- ಆಡಳಿತ ಮಂಡಳಿಗೆ ಮುಖ್ಯಮಂತ್ರಿಯನ್ನೇ ಅಧ್ಯಕ್ಷರಾಗಿಸಲು ಸಲಹೆ
Team Udayavani, Jul 27, 2023, 10:13 PM IST
ಬೆಂಗಳೂರು: ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಹಾಗೂ ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದ ಅವರು, ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆಯ (ಸಿಇಪಿಎಂಐಝಡ್) ಕ್ರಿಯಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸುಪ್ರೀಂಕೋರ್ಟ್ ಅನುಮೋದಿಸಿದೆ. ಇದಕ್ಕೆ ಪೂರಕವಾಗಿ ನಿಗಮದ ಬೈಲಾ ತಿದ್ದುಪಡಿ ಮಾಡಿ, ಆಡಳಿತ ಮಂಡಳಿಗೆ ಮುಖ್ಯಮಂತ್ರಿಯವರನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಸೂಚಿಸಿದರು.
7634 ಕೋಟಿ ರೂ. ಮೊತ್ತದ 317 ಪ್ರಸ್ತಾವನೆಗೆ ಅನುಮೋದನೆ
ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಈ 4 ಜಿಲ್ಲೆಗಳ 466 ಗ್ರಾಮಗಳನ್ನು ಗಣಿ ಬಾಧಿತ ಎಂದು ಘೋಷಿಸಲಾಗಿದ್ದು, ಈ ಗ್ರಾಮಗಳ ಅಭಿವೃದ್ಧಿಗೆ ಸುಪ್ರೀಂಕೋರ್ಟ್ 24,996.71 ಕೋ. ರೂ. ಅಂದಾಜು ವೆಚ್ಚದ ಕ್ರಿಯಾ ಯೋಜನೆಯನ್ನು ಅನುಮೋದಿಸಿದೆ. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾ| ಸುದರ್ಶನ ರೆಡ್ಡಿ ಅವರನ್ನು ಮೇಲುಸ್ತುವಾರಿ ಪ್ರಾಧಿಕಾರವಾಗಿ ನೇಮಕ ಮಾಡಲಾಗಿದ್ದು, ಯೋಜನೆಗಳ ಅನುಮೋದನೆ ಮತ್ತು ಅನುಷ್ಠಾನದ ಮೇಲುಸ್ತುವಾರಿಯನ್ನು ನೀಡಲಾಗಿದೆ. ಈ ಪ್ರಾಧಿಕಾರವು ಈವರೆಗೆ 4 ಜಿಲ್ಲೆಗಳಲ್ಲಿ ಒಟ್ಟು 7634.96 ಕೋ. ರೂ. ಮೊತ್ತದ 317 ಪ್ರಸ್ತಾವನೆಗಳನ್ನು ಅನುಮೋದಿಸಿದೆ.
ಕ್ರಿಯಾಯೋಜನೆ ಸಿದ್ಧಪಡಿಸಲು ಸಿಎಂ ಸೂಚನೆ
ಉಳಿದ ಪ್ರಸ್ತಾವನೆಗಳನ್ನು ತ್ವರಿತವಾಗಿ ಸಿದ್ಧಪಡಿಸಿ ಅನುಮೋದನೆ ಪಡೆಯಲು ಅನುವಾಗುವಂತೆ ಈ ನಾಲ್ಕು ಜಿಲ್ಲೆಗಳಲ್ಲಿ ಎಂಜಿನಿಯರಿಂಗ್ ಕೋಶವನ್ನು ಸ್ಥಾಪಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತ್ವರಿತವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು. ಈ ಯೋಜನೆಯನ್ನು ಸದ್ಬಳಕೆ ಮಾಡುವ ಮೂಲಕ ಗಣಿಬಾಧಿತ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ವಿಫುಲ ಅವಕಾಶವಿದ್ದು, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
2.7 ದಶಲಕ್ಷ ಟನ್ ಅದಿರು ವಿಲೇವಾರಿಗೆ ಕ್ರಮ?
ಇವಿಷ್ಟೇ ಅಲ್ಲದೆ, ಕೇಂದ್ರ ಸರಕಾರಿ ಸ್ವಾಮ್ಯದ ಕೆಐಒಸಿಎಲ್, ಎಂಇಸಿಎಲ್ ಮೂಲಕ ರಾಜ್ಯದಲ್ಲಿ ಖನಿಜಾನ್ವೇಷಣೆ ಕೈಗೊಳ್ಳಲು ಪ್ರವೇಶ್ ಪೋರ್ಟಲ್‌ನಲ್ಲಿ ಅನುಮತಿ ಕೇಳಿ ಕೇಂದ್ರ ಸರಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ. ಇದಕ್ಕೆ ಬಂದಿರುವ ಆಕ್ಷೇಪಣೆಗಳನ್ನು ಸರಿಪಡಿಸಿ ಅನುಮತಿ ಪಡೆಯಬೇಕು. ಅಕ್ರಮ ಗಣಿಗಾರಿಕೆಯಿಂದ ಜಪ್ತಿ ಮಾಡಿರುವ 2.7 ದಶಲಕ್ಷ ಟನ್ ಅದಿರು ಅರಣ್ಯ ಪ್ರದೇಶದಲ್ಲಿದ್ದು, ಇವುಗಳನ್ನು ವಿಲೇವಾರಿ ಮಾಡುವ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲು ಸಲಹೆ ನೀಡಿದರು.
ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಿಎಂ ರಾಜಕೀಯ ಕಾರ್ಯದರ್ಶಿ ಡಾ| ಕೆ. ಗೋವಿಂದರಾಜು, ನಸೀರ್ ಅಹ್ಮದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ| ರಜನೀಶ್ ಗೋಯಲ್ ಅಭಿವೃದ್ಧಿ ಆಯುಕ್ತ ಡಾ| ಇ.ವಿ. ರಮಣ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗಣಿ ಸಂಸ್ಥೆಗಳ ಸಮಸ್ಯೆ ಪರಿಹಾರಕ್ಕೆ ಏಕಗವಾಕ್ಷಿ ವ್ಯವಸ್ಥೆ
ಗಣಿ ಮತ್ತು ಭೂವಿಜ್ಞಾನ ಇಲಾಖೆ ವ್ಯಾಪ್ತಿಯ ಸಂಸ್ಥೆಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ, ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ ಮತ್ತಿತರ ಅನುಮತಿ ಪತ್ರಗಳನ್ನು ನೀಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಯ ಸಚಿವರು, ಅಧಿಕಾರಿಗಳ ಜತೆಗೆ ಪ್ರತಿ ತಿಂಗಳು ಅಥವಾ ಎರಡು ತಿಂಗಳಿಗೊಮ್ಮೆಯಾದರೂ ಸಭೆ ನಡೆಸಿ ಏಕಗವಾಕ್ಷಿ ವ್ಯವಸ್ಥೆಯ ಮಾದರಿಯಲ್ಲಿ ಇತ್ಯರ್ಥಪಡಿಸುವಂತೆ ಸೂಚಿಸಿದರು.
ಗಣಿಗಾರಿಕೆ ನಡೆಸಲು ಗುತ್ತಿಗೆ ಪಡೆದ ಸಂಸ್ಥೆಗಳು ಅರಣ್ಯೀಕರಣಕ್ಕೆ ಪರ್ಯಾಯ ಭೂಮಿ ನೀಡದೇ ಇರುವುದರಿಂದ ಬಹಳಷ್ಟು ಪ್ರಕರಣಗಳಲ್ಲಿ ಅರಣ್ಯ ಇಲಾಖೆಯಿಂದ ಗಣಿಗಾರಿಕೆಗೆ ಅನುಮತಿ ಸಿಗುತ್ತಿಲ್ಲ. ಆನೆ ಹಾವಳಿ ಸಹಿತ ವನ್ಯಜೀವಿ ಉಪಟಳದಿಂದ ಕೃಷಿ ಭೂಮಿ ಮಾರಲು ರೈತರು ನಿರ್ಧರಿಸಿದ್ದಾರೆ. ಅರಸೀಕೆರೆ ಸಹಿತ ರಾಜ್ಯದ ಹಲವೆಡೆ ಭೂಮಿ ನೀಡಲು ಮುಂದೆ ಬರುವ ರೈತರಿಂದ ಖರೀದಿಸಿ ಅರಣ್ಯೀಕರಣಕ್ಕೆ ಅನುವು ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.