ಸಿಎಂ ಸಿದ್ದರಾಮಯ್ಯ ಕುಟುಂಬದ ಕುರಿತು ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಶಕ್ಕೆ
Team Udayavani, Jul 28, 2023, 5:28 PM IST
ಬೆಂಗಳೂರು: ಉಡುಪಿ ಖಾಸಗಿ ಕಾಲೇಜಿ ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎನ್ನುವವರನ್ನು ಪೊಲೀಸರು ಶುಕ್ರವಾರ (ಜುಲೈ 28) ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಕುಂತಲಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಮಾಡಿದ್ದ ”ವಿದ್ಯಾರ್ಥಿಗಳ ಮಕ್ಕಳಾಟವನ್ನು ರಾಜಕೀಯದ ಕಳ್ಳಾಟಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ” ಎಂಬ ಟ್ವೀಟ್ ಗೆ ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕೆಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ.. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡತಿಯ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?” ಎಂದು ಟ್ವೀಟ್ ಮಾಡಿದ್ದರು.
ಶಕುಂತಲಾ ಅವರನ್ನು ವಶಕ್ಕೆ ಪಡೆದಿರುವ ಕುರಿತು ಬಿಜೆಪಿ ಆಕ್ರೋಶ ಹೊರ ಹಾಕಿದೆ. ಶಕುಂತಲಾ ತುಮಕೂರಿನ ಬಿಜೆಪಿ ಸಾಮಾಜಿಕ ತಾಣದಲ್ಲಿ ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.