ಮುಂದುವರಿದ ಮಳೆ, ನಿಯಂತ್ರಣದಲ್ಲಿ ಸ್ಥಿತಿ
-ಮಹಾರಾಷ್ಟ್ರದಲ್ಲಿ ಮಳೆಗೆ ನಾಲ್ವರು ಬಲಿ -ವಾರಂಗಲ್‌ನಲ್ಲಿ ದೋಣಿ ಮೂಲಕ ಜನರ ಸ್ಥಳಾಂತರ
Team Udayavani, Jul 29, 2023, 7:35 AM IST
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಶುಕ್ರವಾರವೂ ಭಾರೀ ಮಳೆಯಾಗಿದೆ. ಮಹಾರಾಷ್ಟ್ರದಲ್ಲಿ ಗುರುವಾರದಿಂದ ಶುಕ್ರವಾರದವರೆಗೆ ಮಳೆಯಿಂದ ಆದ ಅನಾಹುತಗಳಲ್ಲಿ ನಾಲ್ವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಮುಂದಿನ ವಾರವೂ ದೇಶಾದ್ಯಂತ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ.
ವಿದ್ಯುತ್ ತಗುಲಿ ಬಾಲಕ ಸಾವು: ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಳೆ ನಡುವೆ ವಿದ್ಯುತ್ ತಂತಿ ತಗುಲಿ 16 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಥಾಣೆಯ ನ್ಯೂ ಶಿವಾಜಿನಗರ ಪ್ರದೇಶದಲ್ಲಿ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತರಿಗೆ ಶಾಶ್ವತ ಮನೆ: “ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲ್‌ವಾಡಿಯಲ್ಲಿ ನಡೆದ ಭೂಕುಸಿತದಲ್ಲಿ ಬದುಕುಳಿದ ಸಂತ್ರಸ್ತರಿಗೆ ನಗರ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ(ಸಿಡ್ಕೊ)ದ ವತಿಯಿಂದ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಲಾಗುವುದು’ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತಿಳಿಸಿದ್ದಾರೆ. ರಾಯಗಢದಲ್ಲಿ ಜು.19ರಂದು ನಡೆದ ಭೂಕುಸಿತದಲ್ಲಿ 27 ಮಂದಿ ಮೃತಪಟ್ಟಿದ್ದು, 57 ಮಂದಿ ಕಾಣೆಯಾಗಿದ್ದಾರೆ.
200 ಮಿ.ಮೀ. ಮಳೆ: ರಾಯಗಢ ಜಿಲ್ಲೆಯ ಐದು ತಾಲೂಕುಗಳಾದ ಉರಾನ್, ಅಲಿಬಾಗ್, ಪೆನ್, ಪನ್ವೇಲ್ ಮತ್ತು ಮುರುದ್‌ನಲ್ಲಿ ಗುರುವಾರದಿಂದ ಶುಕ್ರವಾರದವರೆಗೆ 24 ಗಂಟೆಗಳಲ್ಲಿ 200 ಮಿ.ಮೀ.ಗೂ ಅಧಿಕ ಮಳೆಯಾಗಿದೆ. ಕುಂಡಲಿಕಾ, ಅಂಬಾ ಮತ್ತು ಪಾತಾಳಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೋಣಿಗಳಲ್ಲಿ ರಕ್ಷಣೆ: ತೆಲಂಗಾಣದ ವಾರಂಗಲ್‌ನಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ಜಲಾವೃತವಾಗಿವೆ. ಮಳೆಯಲ್ಲಿ ಸಿಲುಕಿರುವ ಜನರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್)ಯ ಸಿಬ್ಬಂದಿ ದೋಣಿ ಬಳಸಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ರಾಜ್ಯದಲ್ಲಿ ತೀವ್ರ ಮಳೆ ಹಾಗೂ ಬೆಳೆ ಹಾನಿ ಕುರಿತು ಚರ್ಚಿಸಲು ಜು.31ರಂದು ಸಿಎಂ ಕೆ.ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಿಮಾಚಲದಲ್ಲಿ ತೀವ್ರ ಮಳೆ:
ಹಿಮಾಚಲ ಪ್ರದೇಶದಲ್ಲಿ ಶನಿವಾರದವರೆಗೆ ತೀವ್ರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇದರಿಂದ ಪ್ರವಾಹ, ಭೂಕುಸಿತ, ನದಿಯ ನೀರಿನ ಮಟ್ಟದಲ್ಲಿ ಏರಿಕೆ ಆಗಲಿದೆ. ಶುಕ್ರವಾರ ಭೋರಂಗ್‌ನಲ್ಲಿ 127 ಮಿ.ಮೀ., ಕತುವಾದಲ್ಲಿ 118 ಮಿ.ಮೀ. ಮಳೆಯಾಗಿದೆ ಎಂದು ತಿಳಿಸಿದೆ.
12 ಗಂಟೆ ಮರದಲ್ಲಿ ನೇತಾಡುತ್ತಿದ್ದವನ ರಕ್ಷಣೆ
ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಯ ಗಡಿಯ ವರನಾ ನದಿಯಲ್ಲಿ ಕೊಚ್ಚಿ ಹೋದ 50 ವರ್ಷದ ವ್ಯಕ್ತಿ, ಮರದ ಆಸರೆಯಿಂದ ಬದುಕಿದ್ದು, ಸುಮಾರು 12 ಗಂಟೆಗಳ ಕಾಲ ಮರದ ಕೊಂಬೆಯನ್ನು ಹಿಡಿದು ನೇತಾಡಿದ್ದಾರೆ. ಶುಕ್ರವಾರ ಬೆಳಗ್ಗೆ ಅವರನ್ನು ಕೊಲ್ಹಾಪುರ ವಿಪತ್ತು ನಿರ್ವಹಣಾ ಪಡೆ(ಕೆಡಿಆರ್‌ಎಫ್) ರಕ್ಷಿಸಿದೆ. ಅವರನ್ನು ಸಾಂಗ್ಲಿಯ ಲಖೇವಾಡಿ ಗ್ರಾಮದ ಭಜರಂಗ್ ಕಾಮ್ಕರ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.