ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲವಾದರೂ ಮೊಹರಂ ಆಚರಣೆ

Team Udayavani, Jul 28, 2023, 10:11 PM IST

1-sada-dasdsad

ಕುಷ್ಟಗಿ: ತಾಲೂಕಿನ ಕುರಬನಾಳ ಗ್ರಾಮದಲ್ಲಿ ಮೋಹರಂ ಹಬ್ಬದ ಹಿನ್ನೆಲೆ ಹಲವು ವೈಶಿಷ್ಟತೆಗಳಿಂದ ಗಮನ ಸೆಳೆದಿದೆ. ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬಗಳಿಲ್ಲ. ಆದರೂ ಕಳೆದ ನಾಲ್ಕು ದಶಕಗಳಿಂದ ಮೊಹರಂ ಹಬ್ಬ ಆಚರಿಸಲಾಗುತ್ತಿರುವುದು ಗಮನಾರ್ಹ ಎನಿಸಿದೆ.

ಕುರಬನಾಳ ಗ್ರಾಮದಲ್ಲಿ ಮುಸ್ಲಿಂ ಸಮುದಾಯ ಹೊರತುಪಡಿಸಿ ಎಲ್ಲಾ ಸಮುದಾಯದವರು ಇದ್ದಾರೆ. ಆದಾಗ್ಯೂ ಪ್ರತಿ ವರ್ಷ ಮೊಹರಂ ಹಬ್ಬವನ್ನು ಹಿಂದೂ ಗಳು ತಮ್ಮ ಹಬ್ಬದಂತೆ ಆಚರಿಸಲಾಗುತ್ತಿದ್ದು, ಮೋಹರಂ ಸಂಧರ್ಬದಲ್ಲಿ ಅಲಾಯಿ ದೇವರುಗಳನ್ನು ಹಿಂದೂಗಳೇ ಹಿಡಿದು ದೇವರ ಸವಾರಿ ಮಾಡುತ್ತಾರೆ. ಆದರೆ ಈ ಹಬ್ಬದಲ್ಲಿ ಅಲಾಯಿ ದೇವರಿಗೆ ಕೆಂಪು ಸಕ್ಕರೆ, ಗುಗ್ಗಳ ದೂಪ ಓದಿಸುವವರು ಮುಸ್ಲಿಂ ಸಮುದಾಯದವರಾಗಿದ್ದು, ಅವರು ಪಕ್ಕದ ಕಂದಕೂರ ಗ್ರಾಮದ ರಾಜೇಸಾಬ್ ದೋಟಿಹಾಳ ಅವರು ಹತ್ತು ದಿನಗಳ ಹಬ್ಬದ ಅಲಾಯಿ ದೇವರ ಓದಿಕೆ ಓದಿಸುವ ಸಂಪ್ರದಾಯ ಮುಂದುವರಿಸಿದ್ದಾರೆ.

ಅಲಾಯಿ ದೇವರುಗಳಾದ ಹಸನ್, ಹುಸೇನ್, ಯಮನೂರು, ಬೀಬಿ ಪಾತಿಮಾ, ದಾವಲ್ ಮಲಿಕ್, ಹುಸೇನ ಭಾಷಾ ಈ ದೇವರುಗಳನ್ನು ಬಸವರಾಜ್ ಬಿ ಬಡಿಗೇರ, ಯಮನೂರಪ್ಪ ತೆಮ್ಮಿನಾಳ, ಮೌನೇಶ ವಿಶ್ವಕರ್ಮ,ಬಸವರಾಜ್ ತರಲಕಟ್ಟಿ, ಶ್ರೀ ಶೈಲ ತರಲಕಟ್ಟಿ, ರಮೇಶ ಜೋಲಕಟ್ಟಿ ಇವರುಗಳು ಹಿಡಿದು ಸವಾರಿಯ ನೇತೃತ್ವ ವಹಿಸುವರು. ಮೊಹರಂ ಆರಂಭದ ಅಲಾಯಿ ಕುಣಿಗೆ ಗುದ್ದಲಿ ಬೀಳುವ ದಿನದಿಂದ ಕತಲ್ ರಾತ್ರಿ ಆಚರಣೆ ಹಾಗೂ ಮೊಹರಂ ಕಡೆಯ ದಿನದ ದೇವರು ಹೊಳೆ ಹೋಗುವವರೆಗೂ ಹಿಂದೂಗಳೇ ಸಾಮರಸ್ಯದಿಂದ ಆಚರಿಸಿಕೊಂಡು ಬಂದಿದ್ದಾರೆ.

ಗ್ರಾಮದ ರಮೇಶ ಕುರ್ನಾಳ ಮಾತನಾಡಿ, ಕಳೆದ ನಾಲ್ಕು ದಶಕಗಳ ಹಿಂದೆ ಕುರಬನಾಳ ಸೀಮಾದ ಹಳ್ಳದಲ್ಲಿ ಅಲಾಯಿ ದೇವರ ಪಂಜಾ ಸಿಕ್ಕಿತ್ತು. ಆಗಿನಿಂದ ಮುಸ್ಲಿಂ ಸಮುದಾಯ ಇಲ್ಲದ ಈ ಊರಿನಲ್ಲಿ ನಮ್ಮೂರ ಮೊಹರಂ ಹಬ್ಬದಂತೆ ಸರ್ವ ಸಮುದಾಯದವರು ಶ್ರದ್ದಾ ಭಕ್ತಿಯಿಂದ ಆಚರಿಸಿಕೊಂಡು ಬಂದಿದ್ದಾರೆ. ಮುಸ್ಲಿಂ ಸಮುದಾಯ ಇಲ್ಲದ ನಮ್ಮೂರಲ್ಲಿ ಹಿಂದೂಗಳೇ ಮುಂದೆ ನಿಂತು ಮಸೀದಿ ನಿರ್ಮಿಸಿದ್ದಾರೆ. ಮೊಹರಂ ನಮ್ಮೂರ ಹಬ್ಬವಾಗಿದ್ದು ಭಕ್ತಾದಿಗಳು ಅಲಾಯಿ ದೇವರಿಗೆ ಬೆಳ್ಳಿ ಪಂಜಾ, ಬೆಳ್ಳಿ ಕುದರೆ ಸಮರ್ಪಿಸುತ್ತಾರೆ. ಅಲಾಯಿ ದೇವರ ಓದಿಕಿ ಓದಿಸುವ ಮುಸ್ಲಿಂ ಕುಟುಂಬಕ್ಕೆ ಬೆಳೆಯ ರಾಶಿ ಸಂದರ್ಭದಲ್ಲಿ ರಾಶಿ ಖಣದಲ್ಲಿ ಧಾನ್ಯಗಳನ್ನು ಸಮರ್ಪಿಸುವ ಸಂಪ್ರದಾಯ ಮುಂದುವರೆದಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.