ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿಟ್ಲರ್ ಮಾದರಿ ಸರಕಾರ: ಸುನಿಲ್
Team Udayavani, Jul 28, 2023, 11:18 PM IST
ಬೆಂಗಳೂರು: ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹಿಟ್ಲರ್ ಸರಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ. ಇದು ತುರ್ತು ಪರಿಸ್ಥಿತಿಯ ದಿನಗಳನ್ನೂ ಮೀರಿಸುವಂತಿದೆ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿ ಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರಕಾರ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುತ್ತಿದೆ. ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು ತಪ್ಪು ಎಂದಾದರೆ ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರ ಹಕ್ಕು, ಮಾನ-ಸಮ್ಮಾನದ ಬಗ್ಗೆ ಗೌರವ ಇಲ್ಲವೆಂದು ಅರ್ಥವಲ್ಲವೇ? ನಿಮ್ಮ ಮನೆಯ ಹೆಣ್ಮಕ್ಕಳಿಗೂ ಅಪಮಾನ ವಾದರೆ ಸಹಿಸುತ್ತೀರಾ ಎಂದು ಶಕುಂತಲಾ ಪ್ರಶ್ನಿಸಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ ಎಂದಿದ್ದಾರೆ.
ಹಿಟ್ಲರ್, ಮುಸಲೋನಿ ಯಂಥವರನ್ನು ಮೀರಿಸುವ ಸರ್ವಾಧಿಕಾರಿ ನೀವು. ಅಭಿವ್ಯಕ್ತಿ ಸ್ವಾತಂತ್ರ್ಯ, ಸ್ತ್ರೀ ಸಮಾನತೆ, ಸಂವಿಧಾನದ ಆಶಯ ಎಂಬ ಶಬ್ದಗಳನ್ನು ಬಳಸುವುದಕ್ಕೆ ನೀವು ಅನರ್ಹ ಎಂದು ಕಿಡಿಕಾರಿ¨ªಾರೆ.
ಗೃಹ ಸಚಿವ ಡಾ| ಜಿ.ಪರಮೇಶ್ವರ್ ಅವರೇ, ಹ್ಯಾಂಡ್ ಗ್ರೆನೇಡ್ ಹಾಗೂ ಸ್ಫೋಟಕಗಳನ್ನು ಮನೆಯಲ್ಲಿಟ್ಟುಕೊಂಡ ವರನ್ನು ಉಗ್ರರು ಎನ್ನುವುದಕ್ಕೆ ನಿಮಗೆ ಶಕ್ತಿಯಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ನಿಮ್ಮ ದೃಷ್ಟಿಯಲ್ಲಿ ಅಮಾಯಕರು. ಆದರೆ ಉಡುಪಿ ಕಾಲೇಜಿನಲ್ಲಿ ನಡೆದಿದ್ದು ತಮಾಷೆ ಪ್ರಕರಣ, ಮಕ್ಕಳಾಟ. ನೀವು ಕರ್ನಾಟಕದ ಗೃಹ ಸಚಿವರೋ ಅಥವಾ ಒಂದು ವರ್ಗಕ್ಕೋ ಎಂದು ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.