![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 28, 2023, 11:43 PM IST
ಕೊಲ್ಲೂರು/ ಕುಂದಾಪುರ: ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಕಳೆದ ರವಿವಾರ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿಯ ಶರತ್ ಕುಮಾರ್ (23) ಅವರ ಪತ್ತೆಗಾಗಿ 5ನೇ ದಿನವೂ ಹುಡುಕಾಟ ನಡೆಯಿತು. ಆದರೆ ಯಾವುದೇ ಸುಳಿವು ಲಭ್ಯವಾಗಿಲ್ಲ.
ಕಳೆದ 5 ದಿನಗಳಿಂದಲೂ ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸುತ್ತಿದ್ದಾರೆ.
ಮತ್ತೆ ಡ್ರೋಣ್ ಬಳಕೆ
ಶುಕ್ರವಾರವೂ ಶರತ್ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಯಿತು. ಗುರುವಾರವು ಡ್ರೋನ್ ಕೆಮರಾ ಮೂಲಕ ಪತ್ತೆಗಾಗಿ ಪ್ರಯತ್ನಿಸಲಾಗಿತ್ತು.
ಯುವಕನ ಸುಳಿವು ಸಿಕ್ಕಿಲ್ಲ
ಜು. 23ರಂದು ಮನೆಯಿಂದ ಹೊರಟು ನಾಪತ್ತೆಯಾಗಿರುವ ಜಡ್ಕಲ್ ಗ್ರಾಮದ ಮೆಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ (28) ಅವರ ಬಗ್ಗೆಯೂ ಈವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಲವು ಆಯಾಮಗಳಲ್ಲಿ ಪೊಲೀಸರು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.