Karnataka: ರಾಹುಲ್ ಸಭೆಗೆ ಸಚಿವರಿಂದ ಪೂರ್ವ ತಯಾರಿ
- 2 ತಿಂಗಳ ವರದಿಯೊಂದಿಗೆ ದಿಲ್ಲಿಗೆ ಹಾರಲು ಸಜ್ಜು
Team Udayavani, Jul 29, 2023, 9:15 PM IST
ಬೆಂಗಳೂರು: ದಿಲ್ಲಿಯಲ್ಲಿ ಆಗಸ್ಟ್ 2ರಂದು ನಡೆಯಲಿರುವ ಕಾಂಗ್ರೆಸ್‌ನ ಉನ್ನತ ಮಟ್ಟದ ಸಭೆಗೆ ಎರಡು ತಿಂಗಳ ರಿಪೋರ್ಟ್ ಕಾರ್ಡ್‌ನೊಂದಿಗೆ ಹಾಜರಾಗಲು ರಾಜ್ಯದ ಸಚಿವರು ಪೂರ್ವ ತಯಾರಿಯಲ್ಲಿ ಮಗ್ನರಾಗಿದ್ದಾರೆ.
ಲೋಕಸಭಾ ಚುನಾವಣೆ ಸಿದ್ಧತೆ ಜತೆಗೆ ಮುಂದಿನ 5 ವರ್ಷಗಳ ಅವಧಿಗೆ ರಾಜ್ಯ ಸರಕಾರದ ಕಾರ್ಯವೈಖರಿ ಹಾಗೂ ಸಚಿವರ ನಡೆ-ನುಡಿ ಹೇಗಿರಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮುಂದಿನ ವಾರ ಕರೆದಿರುವ ಸಭೆ ಎಲ್ಲರ ಗಮನ ಸೆಳೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದೆ ಬರಿಗೈಯಲ್ಲಿ ಹೋಗುವ ಬದಲಿಗೆ “ಪ್ರಗತಿ ವರದಿ’ ಕೊಂಡೊಯ್ಯುವುದು ಒಳಿತು ಎಂಬ ತೀರ್ಮಾನಕ್ಕೆ ಬಂದಿರುವ ಸಚಿವರು ಈಗ ತಮ್ಮ ಇಲಾಖೆಗಳಲ್ಲಿ 2 ತಿಂಗಳಲ್ಲಿ ಆಗಿರುವ ಅಭಿವೃದ್ಧಿ ಕುರಿತ ವರದಿ ಸಿದ್ಧಪಡಿಸುತ್ತಿದ್ದಾರೆ.
ಕೆಲವು ಸಚಿವರು ತಮ್ಮ ಆಪ್ತ ಕಾರ್ಯದರ್ಶಿಗಳಿಗೆ ಪ್ರಗತಿಯ ಪಕ್ಷಿನೋಟದ ಪವರ್ ಪಾಯಿಂಟ್ ಪ್ರಸೆಂಟೇಷನ್ ಸಿದ್ಧಪಡಿಸುವಂತೆಯೂ ಸೂಚಿಸಿದ್ಧಾರೆ. ಈ ಅಲ್ಪ ಅವಧಿಯಲ್ಲಿ ಯಾರು ಹೆಚ್ಚಿನ ಪ್ರಗತಿ ತೋರಿಸುತ್ತಾರೋ ಅವರಿಗೆ ಹೈಕಮಾಂಡ್ ಶಹಬ್ಟಾಸ್‌ಗಿರಿ ದೊರಕಬಹುದೆಂಬ ನಿರೀಕ್ಷೆ ಇದೆ.
ರಾಹುಲ್ ನೀತಿಪಾಠ ಖಚಿತ
ಸರಕಾರದ ಕಾರ್ಯವೈಖರಿ ಬಗ್ಗೆ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್‌ನಿಂದ ನಿರಂತರ ದಾಳಿ, ಅದರಲ್ಲೂ ವಿಶೇಷವಾಗಿ ವರ್ಗಾವಣೆ ವಿಷಯ ಇರಿಸಿಕೊಂಡು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿದ ಗಂಭೀರ ಆರೋಪ ಸರಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದೆ. ಜತೆಗೆ ಕೆಲವು ಸಚಿವರ ವಿವಾದಾತ್ಮಕ ಹೇಳಿಕೆಗಳು ಸಾರ್ವಜನಿಕರಲ್ಲಿ ಸರಕಾರದ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿದೆ. ಈ ಮಧ್ಯೆ ಸ್ವಪಕ್ಷೀಯ ಶಾಸಕರೇ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿ ಕಾಂಗ್ರೆಸ್ ಪಾಳಯದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕಮಾಂಡ್ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲೇ ಸಚಿವರ ಸಭೆ ನಡೆಸಲು ನಿರ್ಧರಿಸಿದೆ. ಈ ಸಭೆಯಲ್ಲಿ ಖರ್ಗೆ, ರಾಹುಲ್ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುಜೇìವಾಲ ಕೂಡ ಉಪಸ್ಥಿತರಿರುತ್ತಾರೆ. ವಿಶೇಷವಾಗಿ ಸಚಿವರ ಸಭೆಗೆ ಹೆಚ್ಚಿನ ಸಮಯ ನಿಗದಿಪಡಿಸಬೇಕೆಂದು ರಾಹುಲ್ ಗಾಂಧಿ ಎಐಸಿಸಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಹೀಗಾಗಿ ಸಚಿವರಿಗೆ ರಾಹುಲ್ ಗಾಂಧಿ ಅವರು ನೀತಿಪಾಠ ಹೇಳುವುದು ಗ್ಯಾರಂಟಿ ಆಗಿದೆ.
ಉಸ್ತುವಾರಿ ಸಚಿವರಿಗೆ ಗುರಿ
ಮುಂಬರುವ ಲೋಕಸಭಾ, ಜಿಲ್ಲಾ ಹಾಗೂ ತಾ.ಪಂ. ಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಹೈಕಮಾಂಡ್ ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಹೊಣೆಗಾರರನ್ನಾಗಿ ಮಾಡಲಿದೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ, ಕಾರ್ಯಕರ್ತರ ಜತೆ ನಿರಂತರ ಸಂಪರ್ಕ-ಸಂಬಂಧ ಇರಿಸಿಕೊಂಡು ಅಭಿವೃದ್ಧಿ ಕೆಲಸಗಳ ಬಗ್ಗೆ ಸಾರ್ವಜನಿಕರಲ್ಲಿ ಒಳ್ಳೆಯ ಅಭಿಪ್ರಾಯ ಮೂಡಿಸುವುದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರ ಜವಾಬ್ದಾರಿ ಆಗಿದೆ ಎಂಬ ತೀರ್ಮಾನಕ್ಕೆ ಹೈಕಮಾಂಡ್ ಬಂದಿದೆ. ಒಂದು ವೇಳೆ ಇದರಲ್ಲಿ ಯಾವುದೇ ಲೋಪಗಳಾದರೂ ಉಸ್ತುವಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಎಂ.ಎನ್. ಗುರುಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.