ರಾಜ್ಯಕ್ಕೆ ಪ್ರತ್ಯೇಕ IT ಕಾಯ್ದೆ?

- ಸೈಬರ್‌, ಐಟಿ ಅಪರಾಧ ನಿಯಂತ್ರಣಕ್ಕೆ ಈ ಕ್ರಮ

Team Udayavani, Jul 29, 2023, 9:37 PM IST

IT LOCK

ಬೆಂಗಳೂರು: ನಿಯಂತ್ರಣ ತಪ್ಪಿ ಹಬ್ಬುತ್ತಿರುವ ಸೈಬರ್‌ ಹಾಗೂ ಮಾಹಿತಿ ತಂತ್ರಜ್ಞಾನ ಆಧರಿತ (ಐಟಿ) ಅಪರಾಧ ನಿಯಂತ್ರಣಕ್ಕೆ ತನ್ನದೇ ಆದ ಕಾಯ್ದೆ ರೂಪಿಸುವುದಕ್ಕೆ ರಾಜ್ಯ ಗೃಹ ಇಲಾಖೆ ಚಿಂತನೆ ನಡೆಸಿದೆ. ಇದು ಕೇಂದ್ರ ಸರಕಾರದ ವ್ಯಾಪ್ತಿಯದಾಗಿದ್ದಸೂ ರಾಜ್ಯದ ಪರಿಸ್ಥಿತಿಯನ್ನು ಲಕ್ಷ್ಯದಲ್ಲಿ ಇರಿಸಿಕೊಂಡು ಕಾಯ್ದೆಯ ಚೌಕಟ್ಟು ರೂಪಿಸುವ ಪ್ರಕ್ರಿಯೆ ಸದ್ದಿಲ್ಲದೆ ಪ್ರಾರಂಭವಾಗಿದೆ.

ಐಪಿಸಿ, ಸಿಆರ್‌ಪಿಸಿ ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಕೇಂದ್ರದ ಐಟಿ ಆ್ಯಕ್ಟ್ಗಳನ್ನು ಮೀರಿದ ಅಪರಾಧ ಕೃತ್ಯಗಳಿಗೆ ರಾಜ್ಯ ಸಾಕ್ಷಿಯಾಗುತ್ತಿದೆ. ಸೈಬರ್‌ ಅಪರಾಧ ನಿಯಂತ್ರಣ ಎಲ್ಲ ಸರಕಾರಗಳಿಗೂ ಸವಾಲಾಗಿ ಪರಿಣಮಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಪ್ರತ್ಯೇಕವಾದ ಐಟಿ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗೃಹ ಸಚಿವ ಡಾ| ಪರಮೇಶ್ವರ ಚಿಂತನೆ ನಡೆಸಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಪೊಲೀಸ್‌ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ, ಐಟಿ ಉದ್ಯಮದ ತಜ್ಞರು, ಸೈಬರ್‌ ಲಾ ತಜ್ಞರ ಜತೆಗೆ ಸಂವಹನ ಪ್ರಾರಂಭವಾಗಿದೆ.

ಈಗಾಗಲೇ ಅಸ್ತಿತ್ವದಲ್ಲಿರುವ ಕೇಂದ್ರ ಐಟಿ ಕಾಯ್ದೆಯ ಜತೆಗೆ ತಿಕ್ಕಾಟ ಅಥವಾ ವೈರುಧ್ಯಗಳಿಲ್ಲದ ರೀತಿಯಲ್ಲಿ ಹೊಸ ಕಾಯ್ದೆಯ ಚೌಕಟ್ಟು ರಚಿಸುವ ಪ್ರಕ್ರಿಯೆ ನಡೆಯುತ್ತಿದೆ.
ಇದು ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಆಧರಿಸಿ ನಡೆದ ಬೆಳವಣಿಗೆಯಲ್ಲ. ಒಟ್ಟಾರೆಯಾಗಿ ಡಿಜಿಟಲ್‌ ಜಾಲದ ಓತಪ್ರೋತ ಹರಿವಿನ ಯಥಾಸಾಧ್ಯ ನಿಯಂತ್ರಣಕ್ಕೆ ನಡೆಸುತ್ತಿರುವ ಪ್ರಕ್ರಿಯೆ ಎಂದು ಗೃಹ ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ.

ಯಾವ ಕಾರಣಕ್ಕಾಗಿ ?
– ಸೈಬರ್‌ ಅಪರಾಧ ನಿಯಂತ್ರಣ
ಸೈಬರ್‌ ಅಪರಾಧಗಳು ಇತ್ತೀಚೆಗಿನ ದಿನಗಳಲ್ಲಿ ಭಯಾನಕ ಸ್ವರೂಪ ಪಡೆಯುತ್ತಿವೆ. ಈ ಅಪರಾಧ ಜಗತ್ತಿನ ಆಳ ಮತ್ತು ವಿಸ್ತಾರ ಅಳೆಯುವುದಕ್ಕೆ ಹಾಗೂ ನಿಯಂತ್ರಿಸುವುದಕ್ಕೆ ಈಗಿರುವ ಕಾನೂನುಗಳು ಅಶಕ್ತವಾಗುತ್ತಿವೆ. ಇದು ದೇಶ-ಭಾಷೆಗಳ ಎಲ್ಲೆಯಿಲ್ಲದೆ ವ್ಯಾಪಿಸಿದ್ದರೂ ಅಪರಾಧ ನಿಯಂತ್ರಣಕ್ಕೆ ಪ್ರತೀ ರಾಜ್ಯವೂ ಕಟ್ಟುನಿಟ್ಟಿನ ಕಾನೂನು ಹೊಂದಿರುವುದು ಅಗತ್ಯವಾಗಿದೆ.

– ಖಾಸಗಿತನದ ಉಲ್ಲಂಘನೆ
ಐಟಿ ಯುಗದಲ್ಲಿ ವ್ಯಕ್ತಿಯ ಖಾಸಗಿತನದ ಉಲ್ಲಂಘನೆ ಹೆಚ್ಚುತ್ತಿದೆ. ಅಧಿಕಾರಸ್ಥರಿಂದ ಮೊದಲುಗೊಂಡು ಸಾಮಾನ್ಯ ವ್ಯಕ್ತಿಯವರೆಗೂ ಇದೊಂದು ಪಿಡುಗಾಗಿ ಪರಿಗಣಿಸಿದೆ. ಬೇರೆಯವರ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ವೆುàಲ್‌, ಹಣ ವಸೂಲಿ, ಅತ್ಯಾಚಾರದಂಥ ಪ್ರಕರಣಗಳು ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಇತ್ತೀಚೆಗೆ ನಡೆದ ಖಾಸಗಿತನ ಉಲ್ಲಂಘನೆ ಪ್ರಕರಣವಾಗಿದೆ.

– ನವ ಮಾಧ್ಯಮಗಳಿಗೆ ಮೂಗುದಾರ
ಸಾಮಾಜಿಕ ಜಾಲತಾಣಗಳೂ ಒಳಗೊಂಡಂತೆ ನವಮಾಧ್ಯಮಗಳು ಕೆಲವೊಮ್ಮೆ ಸೃಷ್ಟಿಸುವ ವಿವಾದಗಳು ಸಾಮಾಜಿಕ ಸಾಮರಸ್ಯಗಳನ್ನು ಕೆಡಿಸುವ ಜತೆಗೆ ಸಹ್ಯವಲ್ಲದ ಚರ್ಚೆಗಳನ್ನೂ ಹುಟ್ಟು ಹಾಕುತ್ತಿವೆ. ಇವುಗಳ ನಿಯಂತ್ರಣ ಅಸಾಧ್ಯ. ಆದರೆ ಕಡಿವಾಣಕ್ಕೆ ಗೃಹ ಇಲಾಖೆ ಮಾರ್ಗ ಹುಡುಕುತ್ತಿದೆ.

– ಸುಳ್ಳು ಸುದ್ದಿ ನಿಯಂತ್ರಣ
ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡಕ್ಕೂ ಸುಳ್ಳು ಸುದ್ದಿಗಳಿಗೆ ನಿಯಂತ್ರಣ ಹೇರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿರುವ ಕಾಯ್ದೆಗಳ ಅನ್ವಯ ದಂಡನೆಯ ಸ್ವರೂಪ ನಿರ್ಧರಿಸುವುದಕ್ಕೆ ನ್ಯಾಯಾಲಯಗಳಿಗೂ ಸಾಧ್ಯವಾಗುತ್ತಿಲ್ಲ. ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ದಕ್ಕಾಗಿ ಶಿಕ್ಷೆಗೆ ಗುರಿಯಾದ ವ್ಯಕ್ತಿಗಳ ಸಂಖ್ಯೆ ಬೆರಳೆಣಿಕೆಯಷ್ಟೂ ಇಲ್ಲ. ಹೀಗಾಗಿ ಇದಕ್ಕೊಂದು ಪ್ರತ್ಯೇಕ ಕಾಯ್ದೆ ಬೇಕೆಂಬುದು ಪೊಲೀಸ್‌ ಇಲಾಖೆಯ ಅಭಿಪ್ರಾಯ.

– ಮಕ್ಕಳ ಮಾನಸಿಕ ಆರೋಗ್ಯ
ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಅಥವಾ ಹಂಚಿಕೆಯಾಗುವ ಕೆಲವು ವೀಡಿಯೋ, ಮಾಹಿತಿ, ಮನೋರಂಜನೆಗಳು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಹದಿಹರೆಯದ ಲೈಂಗಿಕ ಸಮಸ್ಯೆ ಈಗ ಎಳೆ ಹರೆಯದವರನ್ನೂ ಕಾಡುತ್ತಿದೆ. ಲೈಂಗಿಕತೆಗೆ ಪ್ರಚೋದಿಸುವ ಸರಕುಗಳು ಮಕ್ಕಳಿಗೂ ಸುಲಭವಾಗಿ ಲಭ್ಯವಾಗುತ್ತಿದ್ದು, ಇವುಗಳಿಂದ ಪ್ರೇರಿತವಾದ ಬಾಲಾಪರಾಧಗಳ ಪ್ರಮಾಣ ಹೆಚ್ಚುತ್ತಿದೆ. ಇದೊಂದು ಸಾಮಾಜಿಕ ಪಿಡುಗಾಗಿ ಬೆಳೆಯುತ್ತಿದ್ದು, ನಿಯಂತ್ರಣ ಸರಕಾರದ ಕರ್ತವ್ಯವೂ ಆಗಿದೆ.

ಇವೆಲ್ಲವನ್ನೂ ದೃಷ್ಟಿಯಲ್ಲಿಟ್ಟುಕೊಂಡಿರುವ ರಾಜ್ಯ ಸರಕಾರವು ಹೊಸ ಐಟಿ ಕಾಯ್ದೆ ಜಾರಿಗೆ ಚಿಂತನೆ ನಡೆಸುತ್ತಿದೆ. ಒಟ್ಟಾರೆಯಾಗಿ ಸಮಾಜದ ಮೇಲೆ ಸೈಬರ್‌ ಲೋಕ ಬೀರುವ ನಕಾರಾತ್ಮಕ ಪರಿಣಾಮ ನಿಯಂತ್ರಣದ ದೃಷ್ಟಿಯಿಂದ ಕಾಯ್ದೆಯ ಚೌಕಟ್ಟು ರೂಪಿಸುವ ಪ್ರಯತ್ನ ಪ್ರಾರಂಭವಾಗಿದೆ ಎಂದು ಗೃಹ ಇಲಾಖೆ ಉನ್ನತ ಮೂಲಗಳು ತಿಳಿಸಿವೆ.

ರಾಘವೇಂದ್ರ ಭಟ್‌

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.