CCB ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಸೆರೆ
Team Udayavani, Jul 29, 2023, 10:30 PM IST
ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಇಟ್ಟುಕೊಂಡಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್‌ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್‌ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಮಂಜೇಶ್ವರದ ಮಿಯಾಪದವಿನ ಅಬ್ಬಾಸ್ (61) ಹಾಗೂ ಮಂಜೇಶ್ವರದ ಪೈವಳಿಕೆಯ ಯಶವಂತ್ ಕುಮಾರ್(45)ನನ್ನು ವಶಕ್ಕೆ ಪಡೆದುಕೊಂಡು ಅವರಿಂದ 1 ಪಿಸ್ತೂಲ್, 2 ಮೊಬೈಲ್ ಪೋನ್‌ಗಳು ಹಾಗೂ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,45,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ಬಾಸ್ ವಿರುದ್ಧ ಈ ಹಿಂದೆ ಕಾಸರಗೋಡು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಯಶವಂತ ಕುಮಾರ್ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿತ್ತು.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್‌ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ, ಎಎಸ್‌ಐ ಮೋಹನ್ ಕೆ.ವಿ. ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.