BJP ಹೇಳಿದಂತೆ ಸರಕಾರ ನಡೆಸಲಾಗದು: ಎಂ.ಬಿ.ಪಾಟೀಲ್
Team Udayavani, Jul 29, 2023, 11:02 PM IST
ವಿಜಯಪುರ: ಚುನಾವಣೆಯಲ್ಲಿ ರಾಜ್ಯದ ಜನರಿಂದ ತಿರಸ್ಕೃತರಾದ ಬಿಜೆಪಿ ಹೇಳಿದಂತೆ ಸರಕಾರ ನಡೆಸಲಾಗದು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಮುದಾಯದ ಪರ ಆಡಳಿತ ನಡೆಯುತ್ತಿದೆ ಎಂಬ ಆರೋಪದಲ್ಲಿ ಅರ್ಥವಿಲ್ಲ. ಜನರಿಂದ ತಿರಸ್ಕೃತ ರಾದವರ ಕುರಿತು ನನ್ನೆದುರು ಪ್ರಸ್ತಾವಿಸಬೇಡಿ ಎಂದರು.
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿ ಯರ ವೀಡಿಯೋ ಚಿತ್ರೀಕರಣ ನಡೆದಿದೆ ಎಂಬ ಆರೋಪ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ದೇಶದ ಕಾನೂನಿಗೆ ಶಕ್ತಿ ಇದೆ. ಅದು ತನ್ನ ಕೆಲಸ ಮಾಡುತ್ತದೆ. ಈ ಪ್ರಕರಣದಲ್ಲಿ ನಿರಪರಾಧಿಗಳು ಬಲಿಪಶು ಆಗಬಾರದು ಎಂದು ಹೇಳಿದರು.
ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಸಂಪೂರ್ಣ ಭರ್ತಿಯಾಗಿಲ್ಲ. ಕಳೆದ ವಾರದಿಂದ ಜಲಾಶಯಕ್ಕಿದ್ದ ಒಳಹರಿವು ಈಗ ಕಡಿಮೆಯಾಗಿದೆ. ಜಲಾಶಯ ಭರ್ತಿಯಾಗುತ್ತಲೇ ಸರಕಾರದಿಂದ ಕೃಷ್ಣೆಗೆ ಬಾಗಿನ ಅರ್ಪಿಸಲಾಗುವುದು ಎಂದು ಹೇಳಿದರು.
ಕೆರೆ ತುಂಬಿಸಲು ಆದ್ಯತೆ
ಬಾಗಿನ ಅರ್ಪಿಸುವುದಕ್ಕಿಂತ ಮೊದಲು ಜಿಲ್ಲೆಯ ಜನರ ಆಶಯದಂತೆ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕಿದೆ. ಬಾಗಿನ ಅರ್ಪಿಸುವುದಕ್ಕೆ ಆತುರ ತೋರದೆ ಕೆರೆಗೆ ನೀರು ತುಂಬಿಸಲು ಆದ್ಯತೆ ನೀಡಲಾಗುತ್ತಿದೆ. ನೀರಿನ ವಿಷಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕಿದ್ದು, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.