ರಾಜ್ಯದ ಮೊದಲ ಕೃಷಿ ಮ್ಯೂಸಿಯಂ ಉದ್ಘಾಟನೆಗೆ ಸಿದ್ಧ

ಒಂದೇ ಸೂರಿನಡಿ ಸಮ್ರಗ ಕೃಷಿ ಮಾಹಿತಿ - ಬೆಂಗಳೂರಿನ ಕೃಷಿ ವಿವಿ ಆವರಣದಲ್ಲಿ ಆ.3ರಂದು ಆರಂಭ

Team Udayavani, Jul 31, 2023, 6:28 AM IST

farm house

ಬೆಂಗಳೂರು: ಕೃಷಿ ಕುರಿತ ಸಮಗ್ರ ಮಾಹಿತಿಯನ್ನು ಒಂದೇ ಸೂರಿನಡಿ ಶ್ರವಣ ಹಾಗೂ ದೃಶ್ಯ ಮಾದರಿಗಳ ಮೂಲಕ ಪಡೆಯಬಹುದಾದ ರಾಜ್ಯದ ಮೊದಲ “ಕೃಷಿ ಮ್ಯೂಸಿಯಂ” ಸಿದ್ಧತೆ ಕೆಲಸಗಳು ಪೂರ್ಣಗೊಂಡಿದ್ದು, ಸಾರ್ವಜನಿಕರ ವೀಕ್ಷಣೆಗೆ ಶೀಘ್ರವೇ ಲಭ್ಯವಾಗಲಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ 923 ಚದರ ಅಡಿ ವಿಸ್ತೀರ್ಣದಲ್ಲಿ ವೃತ್ತಾಕಾರದಲ್ಲಿ ನಿರ್ಮಾಣವಾದ ಕೃಷಿ ಮ್ಯೂಸಿಯಂ ಆ.3ರಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಸಮಗ್ರ ಕೃಷಿ ಪರಿಕಲ್ಪನೆಯಡಿ ಸೂಕ್ತ ಮಾದರಿ ಅಳವಡಿಸಿಕೊಂಡು ರೈತರಿಗೆ, ಶಾಲಾ ಮಕ್ಕಳಿಗೆ, ಪ್ರವಾಸಿಗರಿಗೆ, ಕೃಷಿ ಆಸಕ್ತರಿಗೆ ಕೃಷಿಯ ಸಂಪೂರ್ಣ ಮಾಹಿತಿ ಇಲ್ಲಿ ಸಿಗಲಿದೆ.

ಸುಂದರ ಟ್ಯಾಬ್ಲೋ ಆಕೃತಿ
ಮ್ಯೂಸಿಯಂನಲ್ಲಿ ಕೃಷಿ ಕುರಿತ ಸಮಗ್ರ ಮಾಹಿತಿಯನ್ನು 5 ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ವಿಭಾಗದಲ್ಲಿ ಅನಾದಿಕಾಲದಿಂದ ಇಂದಿನವರೆಗೆ ರಾಜ್ಯದಲ್ಲಿ ಅನುಸರಿಸುತ್ತಿದ್ದ ಕೃಷಿ ಪದ್ಧತಿಗಳನ್ನು ಸುಂದರವಾದ ಟ್ಯಾಬ್ಲೋ ಆಕೃತಿಗಳ ಮೂಲಕ ಪ್ರಸ್ತುತಪಡಿಸಲಾಗಿದೆ. ಜತೆಗೆ ಕೃಷಿ ಇತಿಹಾಸ, ಅಭಿವೃದ್ಧಿ, ಕೃಷಿ ವಿವಿ ಸ್ಥಾಪನೆ ಹಾಗೂ ಬೆಳೆದು ಬಂದಿರುವ ಹಾದಿ ಕುರಿತು ಭಿತ್ತಿ ಚಿತ್ರಗಳ ಮೂಲಕ ಸಂಪೂರ್ಣ ಮಾಹಿತಿ ನೀಡಲಿದೆ.

ಕೃಷಿ ತಳಿ-ಯಂತ್ರಜ್ಞಾನ
ಮಣ್ಣಿನ ರಚನೆ, ಬೆಳೆಗಳ ಪದ್ಧತಿ, ಬೆಳೆ ರೋಗ, ಸಾವಯವ ಕೃಷಿ, ಬೀಜ ಬಿತ್ತನೆ ಯಾಂತ್ರೀಕರಣ, ಜೈವಿಕ ತಾಂತ್ರಿಕತೆ, ಜೈವಿಕ ತಂತ್ರಜ್ಞಾನ, ಆನುವಂಶೀಯ ಮತ್ತು ಸಸ್ಯ ತಳಿಯ ಅಭಿವೃದ್ಧಿ ಹಾಗೂ ರೇಷ್ಮೆ, ಜೇನು ಕೃಷಿ ಕುರಿತ ಮಾಹಿತಿ ಲಭ್ಯವಾಗಲಿದೆ. ಜತೆಗೆ ಸಾಂಪ್ರದಾಯಿಕ ಹಾಗೂ ಆಧುನಿಕ ಕೃಷಿಗೆ ಬಳಸಲ್ಪಡುವ ಯಂತ್ರಗಳು ವಸ್ತು ಸಂಗ್ರಹಾಲಯದಲ್ಲಿವೆ.

ಹೈನುಗಾರಿಕೆ ಮಾಹಿತಿ
ಹೈನುಗಾರಿಕೆ ಹಾಗೂ ಕೃಷಿ ಉತ್ಪನ್ನಗಳು ಯಾವ ರೀತಿ ಮಾರುಕಟ್ಟೆ ತಲುಪುತ್ತದೆ ಎನ್ನುವ ಮಾಹಿತಿ ಇಲ್ಲಿದೆ. ಕೃಷಿ, ಅರಣ್ಯ, ಆಧುನಿಕ ಕೃಷಿ ಮಾರುಕಟ್ಟೆ, ವಿಸ್ತರಣೆ ತಂತ್ರಜ್ಞಾನ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಮುಂತಾದವುಗಳ ಕಲಾಕೃತಿಗಳಿವೆ. ಜತೆಗೆ ವಿವಿಧ ಪಕ್ಷಿಗಳ ಧ್ವನಿಯನ್ನೂ ಇಲ್ಲಿ ಕೇಳಬಹುದಾಗಿದೆ.

ಆಕರ್ಷಕ ಪ್ರಾಂಗಣ
ಮ್ಯೂಸಿಯಂ ಪ್ರಾಂಗಣವು ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದು, ಇಲ್ಲಿ ಸಾಂಪ್ರದಾಯಿಕ ಹಾಗೂ ಯಾಂತ್ರಿಕ ಕೃಷಿಯನ್ನು ಬಿಂಬಿಸುವ ಟ್ಯಾಬ್ಲೋಗಳಿವೆ. ಪ್ರಾಂಗಣದಲ್ಲಿ ಕೃಷಿ ಬಗ್ಗೆ ಮಾಹಿತಿ ನೀಡಿದ ಬಳಿಕ ಮ್ಯೂಸಿಯಂ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಏಕಕಾಲಕ್ಕೆ 700ಕ್ಕೂ ಅಧಿಕ ಮಂದಿ ಮ್ಯೂಸಿಯಂ ಅನ್ನು ವೀಕ್ಷಿಸಬಹುದು.

ಉಚಿತ ಪ್ರವೇಶ
ಪ್ರಸ್ತುತ ಉಚಿತ ಪ್ರವೇಶ ಕಲ್ಪಿಸಿದ್ದು, ಕಚೇರಿ ದಿನಗಳಲ್ಲಿ ಬೆಳಗ್ಗೆ 9ರಿಂದ 4ರ ವರೆಗೆ ಹಾಗೂ ಶನಿವಾರ 9ರಿಂದ 12.30ರ ವರೆಗೆ ಸಾರ್ವಜನಿಕರು ಭೇಟಿ ನೀಡಬಹುದು. ಮ್ಯೂಸಿಯಂ ಸಮೀಪ ಸಿರಿಧಾನ್ಯ ಉತ್ಪನ್ನಗಳ ಮಾರಾಟ ಕೇಂದ್ರವೂ ಇದೆ. ಆಧುನಿಕ ಕೃಷಿ ಯಂತ್ರ, ಬೀಜ ಹಾಗೂ ಸಸಿಗಳ ಮಾರಾಟ ವ್ಯವಸ್ಥೆಯೂ ಇದೆ.

ಮುಂಬರುವ ದಿನದಲ್ಲಿ ಕೃಷಿ ಮ್ಯೂಸಿಯಂ ಒಂದು ಪ್ರವಾಸಿ ತಾಣವಾಗಿ ಪರಿವರ್ತನೆಯಾಗಲಿದೆ. ಇದು ಯುವಜನರನ್ನು ಕೃಷಿಯತ್ತ ಸೆಳೆಯುವಲ್ಲಿ ಯಶಸ್ವಿಯಾಗಲಿದೆ. ಶಾಲಾ ಮಕ್ಕಳು ಮ್ಯೂಸಿಯಂಗೆ ಭೇಟಿ ನೀಡುವ ಮೂಲಕ ಕೃಷಿ ಸಂಬಂಧಿಸಿದ ಮಾಹಿತಿ ಸಿಗಲಿದೆ.
-ಡಾ| ಎಸ್‌.ವಿ. ಸುರೇಶ್‌, ಕುಲಪತಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು.

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.