“ಕೆಂಗಣ್ಣು” ಹೆಚ್ಚಳ!- ಹವಾಮಾನ ವೈಪರೀತ್ಯದ ಪರಿಣಾಮ; ಅವಧಿಗೆ ಮುನ್ನವೇ ಸೋಂಕು ಆರಂಭ
ಪ್ರಮುಖ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು?
Team Udayavani, Jul 31, 2023, 7:42 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸಹಿತ ರಾಜ್ಯಾದ್ಯಂತ ಮುಂಗಾರಿನ ಜತೆಗೆ ಡೆಂಗ್ಯೂ, ಮಲೇರಿಯಾ ಜತೆಗೆ “ಮದ್ರಾಸ್ ಐ’ ಅಥವಾ ಕೆಂಗಣ್ಣು ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.
ಮದ್ರಾಸ್ ಐ ಪ್ರಕರಣಗಳು ಮಕ್ಕಳು ಹಾಗೂ ಯುವ ಜನರಲ್ಲಿ ಹಬ್ಬುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅವಧಿಗೆ ಮುನ್ನವೇ ಕಾಣಿಸಿಕೊಂಡಿದ್ದು, ಪ್ರಸ್ತುತ ಕಣ್ಣಿನ ಆಸ್ಪತ್ರೆಗಳಿಗೆ ಬರುವ 10 ರೋಗಿಗಳಲ್ಲಿ 5 ರೋಗಿಗಳು ಮದ್ರಾಸ್ ಐಯಿಂದ ಬಳಲುತ್ತಿದ್ದಾರೆ. ವಯಸ್ಕರಿಗಿಂತ ಮಕ್ಕಳಲ್ಲಿ ಈ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.
ಪ್ರಮುಖ ಲಕ್ಷಣ
ಕಣ್ಣು ವಿಪರೀತ ಕೆಂಪಾಗುವುದು, ದೃಷ್ಟಿ ಅಸ್ಪಷ್ಟವಾಗುವುದು, ವಿಪರೀತ ಜ್ವರ ಹಾಗೂ ಮೈ-ಕೈ ನೋವು ಮದ್ರಾಸ್ ಐಯ ಪ್ರಮುಖ ಲಕ್ಷಣ. ಈ ವೈರಾಣುವಿನಿಂದ ಕಣ್ಣಿನ ಕಾರ್ನಿಯಾ ಸೋಂಕಿಗೆ ತುತ್ತಾಗುವುದರ ಜತೆಗೆ ದೃಷ್ಟಿ ಸ್ವಲ್ಪ ಮಂಕಾಗಬಹುದು.
ಕಾರಣವೇನು?
ಹವಾಮಾನ ವೈಪರೀತ್ಯ ಹಾಗೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮದ್ರಾಸ್ ಐ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ಸಾಮಾನ್ಯವಾಗಿ ಈ ಸೋಂಕು ಚಳಿಗಾಲದಲ್ಲಿ ಹೆಚ್ಚಾಗಿರುತ್ತದೆ. ಪ್ರಸ್ತುತ ಸುರಿಯುತ್ತಿರುವ ಮಳೆ ಹಾಗೂ ಮೋಡ ಕವಿದ ವಾತಾವರಣ ಈ ಸೋಂಕು ಹರಡಲು ಪೂರಕ ವಾತಾವರಣ ನಿರ್ಮಿಸಿದೆ. ಪರಿಸರದಲ್ಲಿ ತೇವಾಂಶ ಹೆಚ್ಚಿದಾಗ ಈ ವೈರಾಣುಗಳು ಕಣ್ಣಿನ ಮೇಲೆ ಪರಿಣಾಮ ಉಂಟು ಮಾಡುತ್ತವೆ. ಜತೆಗೆ ಜನರು ಸ್ವತ್ಛತೆಗೆ ಒತ್ತು ನೀಡದಿರುವುದು ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ಮದ್ರಾಸ್ ಐ ಸೋಂಕು ವ್ಯಾಪಕವಾಗಿ ಹರಡಲು ಕಾರಣ ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಮುನ್ನೆಚ್ಚರಿಕೆ ಕ್ರಮಗಳೇನು?
ಈ ಸೋಂಕು ಬಹುಬೇಗ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಸೋಂಕುಪೀಡಿತ ವ್ಯಕ್ತಿ ಬಳಸಿದ ವಸ್ತುಗಳನ್ನು ಮತ್ತೂಬ್ಬರು ಬಳಸಬಾರದು. ರೋಗಿಗಳು ಕಣ್ಣುಗಳಿಂದ ಸೋರುವ ನೀರು, ಇತರ ಅಂಶಗಳನ್ನು ಶುಚಿಗೊಳಿಸಲು ಪೇಪರ್ ನ್ಯಾಪ್‌ಕಿನ್‌ಗಳನ್ನು ಮಾತ್ರ ಬಳಸಬೇಕು. ಅದನ್ನು ಮರು ಬಳಕೆ ಮಾಡಬಾರದು. ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು. ಸೋಂಕು ಪೀಡಿತರು ಶಾಲೆಗಳು, ಕಚೇರಿಗಳು ಅಥವಾ ಜನಸಂದಣಿ ಇರುವ ಪ್ರದೇಶಗಳಿಗೆ ಹೋಗಬಾರದು.
ಮನೆ ಮದ್ದು ಬೇಡ
ಕಾಂಜಂಕ್ಟಿವಿಟಿಸ್ ಎಂಬ ವೈರಾಣುವಿನಿಂದ ಉಂಟಾಗುವ ಮದ್ರಾಸ್ ಕಣ್ಣು ರೋಗಕ್ಕೆ ಮನೆಯಲ್ಲಿ ಸ್ವತಃ ಔಷಧ ಬಳಕೆ ಮಾಡಬಾರದು. ಕಣ್ಣಿನಲ್ಲಿ ಬಹಳ ಸಮಯದವರೆಗೆ ನೀರು ಸುರಿಯುತ್ತಿದ್ದರೆ ಹಾಗೂ ತುರಿಕೆ, ಅಸಹಜತೆ ಕಂಡುಬರುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
ಏನು ಮಾಡಬೇಕು?
*ಸ್ವತ್ಛ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು
* ಸೋಂಕು ಕಂಡುಬಂದ ತತ್‌ಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು
* ಸೋಂಕುಪೀಡಿತ ವ್ಯಕ್ತಿ ಪೌಷ್ಟಿಕ ಆಹಾರ ಸೇವಿಸಬೇಕು
* ಸೋಂಕುಪೀಡಿತ ವ್ಯಕ್ತಿ ಬಳಸಿದ ಬಟ್ಟೆ ಹಾಗೂ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.
ಏನು ಮಾಡಬಾರದು?
*ಕೈಗಳಿಂದ ಪದೇ ಪದೆ ಕಣ್ಣುಗಳನ್ನು ಮುಟ್ಟಬಾರದು
* ಸ್ವಯಂ ಚಿಕಿತ್ಸೆ ವಿಧಾನಗಳನ್ನು ಅನುಸರಿಸಬಾರದು
* ಸೋಂಕುಪೀಡಿತರಿಂದ ಅಂತರ ಕಾಯ್ದುಕೊಳ್ಳಬೇಕು
* ಸೋಂಕುಪೀಡಿತ ವ್ಯಕ್ತಿ ಬಳಸಿದ ವಸ್ತುಗಳನ್ನು ಮುಟ್ಟಬಾರದು.
ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮಧುಮೇಹ ಸೇರಿದಂತೆ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಅಲ್ಸರ್ ಉಂಟಾಗುವ ಅಥವಾ ಕಣ್ಣಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟು ಬೇರೆಯವರು ಬಳಸಿದ ವಸ್ತುಗಳನ್ನು ಬಳಸದೆ ಇರುವುದು ಉತ್ತಮ.
-ಡಾ| ರೋಹಿತ್ ಶೆಟ್ಟಿ, ಅಧ್ಯಕ್ಷ, ನಾರಾಯಾಣ ನೇತ್ರಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.