“ನನ್ನ ಮಣ್ಣು, ನನ್ನ ದೇಶ”; “ಸ್ವಾತಂತ್ರ್ಯ”ದ ಅಭಿಯಾನ- ಮನ್ ಕಿ ಬಾತ್‌ನಲ್ಲಿ ಮೋದಿ ಘೋಷಣೆ
- ಸ್ವಾತಂತ್ರ್ಯ ದಿನಾಚರಣೆ ನಿಟ್ಟಿನಲ್ಲಿ ದೇಶಾದ್ಯಂತ ಕಾರ್ಯಕ್ರಮ
Team Udayavani, Jul 31, 2023, 7:19 AM IST
ನವದೆಹಲಿ: ಹುತಾತ್ಮ ಯೋಧರನ್ನು ಗೌರವಿಸುವ ನಿಟ್ಟಿನಲ್ಲಿ ದೇಶಾದ್ಯಂತ “ಮೇರಿ ಮಾಟಿ ಮೇರಾ ದೇಶ್'(ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ಆಯೋಜಿಸಲಾಗುತ್ತಿದ್ದು, ಇದರಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿರುವುದಾಗಿಯೂ ಅವರು ಹೇಳಿದ್ದಾರೆ.
ಭಾನುವಾರ ನಡೆದ ತಮ್ಮ 103ನೇ ಆವೃತ್ತಿಯ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದಲ್ಲಿ ಈ ವಿಚಾರ ತಿಳಿಸಿದ ಅವರು, “ಈಗಾಗಲೇ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ದೇಶಾದ್ಯಂತ ಇದು ಅನುರಣಿಸುತ್ತಿದೆ. ಈವರೆಗೆ ಸುಮಾರು 2 ಲಕ್ಷದಷ್ಟು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆ.15 ಸಮೀಪಿಸುತ್ತಿದೆ. ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿರುವ ಹುತಾತ್ಮರ ಸ್ಮರಣಾರ್ಥವಾಗಿ ಮೇರಿ ಮಾಟಿ ಮೇರಾ ದೇಶ್ ಎಂಬ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. ಅದರಂತೆ, ದೇಶದ ಮೂಲೆ ಮೂಲೆಗಳಿಂದಲೂ ಮೃತ್ತಿಕೆ ಸಂಗ್ರಹಿಸಿ, ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದ ಸಮೀಪದಲ್ಲೇ ಆ ಮಣ್ಣಿನಲ್ಲಿ ಗಿಡಗಳನ್ನು ನೆಟ್ಟು “ಅಮೃತ್ ಉದ್ಯಾನ’ ನಿರ್ಮಿಸಲಾಗುವುದು. ಈ ಉದ್ಯಾನವು ಏಕ ಭಾರತ ಶ್ರೇಷ್ಠ ಭಾರತದ ಸಂಕೇತವಾಗಿ ಹೊರಹೊಮ್ಮಲಿದೆ’ ಎಂದು ತಿಳಿಸಿದ್ದಾರೆ.
ಹರ್ ಘರ್ ತಿರಂಗಾ:
ಇದೇ ವೇಳೆ, ಕಳೆದ ವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನದಂದು “ಮನೆ ಮನೆ ತಿರಂಗಾ’ ಅಭಿಯಾನ ನಡೆಸೋಣ ಎಂದು ಕರೆ ನೀಡಿದ ಮೋದಿ, ಎಲ್ಲರ ಮನೆಗಳಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ನಾವು ನಮ್ಮ ಕರ್ತವ್ಯಗಳನ್ನು ಅರಿಯೋಣ, ದೇಶದ ಸ್ವಾತಂತ್ರ್ಯಕ್ಕಾಗಿ ಆಗಿರುವ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯದ ಮೌಲ್ಯವನ್ನು ಅರ್ಥಮಾಡಿಕೊಳ್ಳೋಣ. ಈ ಅಭಿಯಾನದಲ್ಲಿ ದೇಶದ ಪ್ರತಿಯೊಬ್ಬರೂ ಭಾಗಿಯಾಗೋಣ ಎಂದೂ ಹೇಳಿದ್ದಾರೆ.
ಏನೇನು ಕಾರ್ಯಕ್ರಮ?
– ಹುತಾತ್ಮ ಯೋಧರ ಸ್ಮರಣಾರ್ಥ ಪಂಚಾಯತ್‌ಗಳಲ್ಲಿ ವಿಶೇಷ ಶಾಸನಗಳ ಕೆತ್ತನೆ
– ಅಭಿಯಾನದಡಿ “ಅಮೃತ್ ಕಲಶ ಯಾತ್ರೆ’ ಆಯೋಜನೆ
– ದೇಶದ ಮೂಲೆ ಮೂಲೆಗಳಿಂದ 7,500 ಮಡಿಕೆಗಳಲ್ಲಿ ಮೃತ್ತಿಕೆ ಸಂಗ್ರಹಿಸಿ, ರಾಷ್ಟ್ರ ರಾಜಧಾನಿಗೆ ಒಯ್ಯುವುದು
– ಈ ಮಣ್ಣಿನಲ್ಲಿ ಸಸ್ಯಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ನೆಟ್ಟು, ಅಮೃತ್ ವಾಟಿಕಾವನ್ನು ನಿರ್ಮಿಸುವುದು
– ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯಂದು ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.