Kukke Shri Subrahmanya Swami ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭೇಟಿ
Team Udayavani, Jul 30, 2023, 11:39 PM IST
ಸುಬ್ರಹ್ಮಣ್ಯ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಕಾರ್ಯದರ್ಶಿ ಜಯ್ ಶಾ ರವಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ಆಶ್ಲೇಷಾ ಬಲಿ ಸೇವೆ ಸಮರ್ಪಿಸಿದರು. ಪತ್ನಿ ರಿಷಿತಾ ಶಾ ಮತ್ತು ಕುಟುಂಬಸ್ಥರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.
ಆಶ್ಲೇಷಾ ಬಲಿ ಪ್ರಸಾದ ಸ್ವೀಕರಿಸಿದ ಅವರಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯ ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪೂಜೆ ಸಲ್ಲಿಸಿದರು. ಶಾ ಕುಟುಂಬಸ್ಥರು ಪ್ರಸಾದ ಭೋಜನ ಸ್ವೀಕರಿಸಿದರು. ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರ ಹೆಸರಿನಲ್ಲಿ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದರು.
ದೇಗುಲದ ವತಿಯಿಂದ ಗೌರವಾರ್ಪಣೆ
ದೇಗುಲದ ಆಡಳಿತ ಕಚೇರಿಗೆ ಭೇಟಿ ನೀಡಿದ ಜಯ್ ಶಾ ಅವರಿಗೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪ ಲತಾ ರಾವ್, ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್., ಮನೋಜ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ದರುಶನದಿಂದ ಅತೀವ ಸಂತಸ
ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆಗೆ ಬಂದು ಶ್ರೀ ದೇವರ ದರುಶನ ಪಡೆದುದು ಅತೀವ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಆಗಮಿಸುವ ಕನಸಿದೆ. ಅದನ್ನು ದೇವರು ನೆರವೇರಿಸುವ ನಂಬಿಕೆಯಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.