![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 31, 2023, 12:33 PM IST
ವಿಜಯಪುರ: ಸರ್ಕಾರ ರಚನೆ ಬಳಿಕ ಸಂಪುಟದ ಹಿರಿಯ ಸಚಿವರು, ನಾಯಕರನ್ನು ವರಿಷ್ಠರು ದೆಹಲಿಗೆ ಕರೆದಿದ್ದಾರೆ. ಆದರೆ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ ಬರೆದ ಪತ್ರಕ್ಕೂ, ಸಚಿವರ ದೆಹಲಿ ಭೇಟಿಗೂ ಸಂಬಂಧವಿಲ್ಲ. ಇದು ಕಾಕತಾಳೀಯ ಅಷ್ಟೇ ಎಂದು ಸಕ್ಕರೆ, ಜವಳಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಲವು ಶಾಸಕರು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಕುರಿತು ಸಮಜಾಯಿಷಿ ನೀಡಿದರು. ಸರ್ಕಾರ ರಚನೆಯಾದ ಬಳಿಕ ಸಚಿವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಕೇರಳ ಮಾಜಿ ಮುಖ್ಯಮಂತ್ರಿ ನಿಧನದ ಹಿನ್ನೆಲೆಯಲ್ಲಿ ಭೇಟಿ ರದ್ದಾಗಿತ್ತು. ಹೀಗಾಗಿ ಇದೀಗ ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿ ಭೇಟಿ ಆಗಲಿದ್ದೇವೆ ಎಂದರು.
ಸಚಿವರ ದೆಹಲಿ ಭೇಟಿಗೂ, ಬಿ.ಆರ್.ಪಾಟೀಲ ಸೇರಿದಂತೆ ಶಾಸಕರು ಬರೆದಿರುವ ಪತ್ರಕ್ಕೂ ಸಂಬಭವಿಲ್ಲ. ಅದು ಕಾಕತಾಳೀಯ ಅಷ್ಟೇ ಎಂದರು.
ಇದನ್ನೂ ಓದಿ:Tamannaah: “ಈ ಸಿನಿಮಾ ಸೋಲುತ್ತದೆ ಎಂದು ಶೂಟಿಂಗ್ ಸಮಯದಲ್ಲೇ ನನಗೆ ಗೊತ್ತಿತ್ತು”: ತಮನ್ನಾ
ಶಾಸಕರಿಗೆ ಅಧಿಕಾರಿಗಳ ಬದಲಾವಣೆ ಸೇರಿದಂತೆ ಕ್ಷೇತ್ರದಲ್ಲಿ ಕೆಲಸಗಳಾಗಬೇಕು ಎಂಬ ಬಯಕೆ ಇರುತ್ತದೆ. ಶೇ.6 ಕ್ಕಿಂತ. ಹೆಚ್ಚು ವರ್ಗಾವಣೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿಗಳೇ ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಮನವರಿಕೆ ಮಾಡಿದ್ದಾರೆ ಎಂದರು.
ಶಾಸಕಾಂಗ ಸಭೆಯಲ್ಲಿ ಶಾಸಕರು ಎತ್ತಿದ ಸಮಸ್ಯೆ ಬಗ್ಗೆ ಪರಿಹಾರ ಕಂಡುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸಭೆಯಲ್ಲಿ ನಡೆಯುವ ಮುಕ್ತ ಚರ್ಚೆಯನ್ನು ಅಸಮಾಧಾನ ಎನ್ನಲಾಗದು. ಆಂತರಿಕ ಚರ್ಚೆಯನ್ನು ಭಿನ್ಯಮತ ಎಂದೂ ವ್ಯಾಖ್ಯಾನಿಸುವುದು ಸರಿಯಲ್ಲ ಎಂದು ಹೇಳಿದರು.
136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು ಯಾರಾದಾರೂ ಏಕೆ ಸರ್ಕಾರ ಪತನಕ್ಕೆ ಯತ್ನಿಸುತ್ತಾರೆ. ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ಹೇಳಿದ್ದು, ಸರ್ಕಾರ ಪತನ ಎಂಬುದು ಕೇವಲ ಊಹಾಪೋಹ ಮಾತ್ರ ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.