ಹರ್ಯಾಣ ಶಾಸಕನ ಮನೆಗೆ ಇ.ಡಿ ದಾಳಿ: 4 ಕೋಟಿ ಮೌಲ್ಯದ ಐಷಾರಾಮಿ ಕಾರು, ಚಿನ್ನಾಭರಣ ವಶ
Team Udayavani, Jul 31, 2023, 5:40 PM IST
ಹೊಸದಿಲ್ಲಿ: ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಹರ್ಯಾಣದ ಕಾಂಗ್ರೆಸ್ ಶಾಸಕ ಧರಂ ಸಿಂಗ್ ಚೋಕರ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಮನೆ ಖರೀದಿದಾರರಿಗೆ ವಂಚನೆ ಮಾಡಿದ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಧರಂ ಸಿಂಗ್ ಮತ್ತು ಅವರ ಮಾಲೀಕತ್ವದ ಮತ್ತು ನಿಯಂತ್ರಣದಲ್ಲಿರುವ ಕಂಪನಿಗಳ ಮೇಲೆ ಸೋಮವಾರ ದಾಳಿ ನಡೆಸಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.
ಸಮಲ್ಖಾ, ಗುರುಗ್ರಾಮ್ ಮತ್ತು ದೆಹಲಿಯಲ್ಲಿ ಹರಡಿರುವ 11 ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಡಿ ನಾಲ್ಕು ಐಷಾರಾಮಿ ಕಾರುಗಳು, 14.5 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು ಮತ್ತು 4.5 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ.
ಪಾಣಿಪತ್ ಜಿಲ್ಲೆಯ ಸಮಲ್ಖಾ ಶಾಸಕರಾಗಿರುವ ಧರಂ ಸಿಂಗ್ ಚೋಕರ್ ಅವರು ತಮ್ಮ ಮಕ್ಕಳಾದ ಸಿಕಂದರ್ ಸಿಂಗ್ ಮತ್ತು ವಿಕಾಸ್ ಚೋಕರ್ ಅವರೊಂದಿಗೆ ಮಹಿರಾ ರಿಯಲ್ ಎಸ್ಟೇಟ್ ಗುಂಪಿನ ‘ಮಾಲೀಕರು ಮತ್ತು ಪ್ರವರ್ತಕರು’ ಎಂದು ಹೇಳಲಾಗುತ್ತದೆ.
ಇದನ್ನೂ ಓದಿ:ಬಾಲಿವುಡ್,ಟಾಲಿವುಡ್ ಸಿನಿಮಾದ ಮುಂದೆ ಮುಗ್ಗರಿಸದ ಹಾಲಿವುಡ್: 2ನೇ ವಾರವೂ ಕಲೆಕ್ಷನ್ ಜೋರು
M/s ಸಾಯಿ ಐನಾ ಫಾರ್ಮ್ಸ್ ಪ್ರೈವೇಟ್ ಲಿಮಿಟೆಡ್ ಗುರುಗ್ರಾಮದ ಸೆಕ್ಟರ್ 68 ರಲ್ಲಿ ಮನೆಗಳನ್ನು ಒದಗಿಸುವ ಭರವಸೆಯ ಮೇರೆಗೆ ಕೈಗೆಟುಕುವ ವಸತಿ ಯೋಜನೆಯಡಿ 1497 ಮನೆ ಖರೀದಿದಾರರಿಂದ ಸುಮಾರು 360 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.
ವಂಚನೆ ಮತ್ತು ನಕಲಿಗಾಗಿ M/s ಸಾಯಿ ಐನಾ ಫಾರ್ಮ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಗುರುಗ್ರಾಮ್ ಪೊಲೀಸರು ದಾಖಲಿಸಿದ ಎಫ್‌ಐಆರ್‌ಗಳನ್ನು ಆಧರಿಸಿ ಇಡಿ ತನಿಖೆಯನ್ನು ಪ್ರಾರಂಭಿಸಿತು.
ಮನೆ ಖರೀದಿದಾರರು ಮಹಿರಾ ಗ್ರೂಪ್ ವಿರುದ್ಧ ಒಂದು ವರ್ಷದಿಂದ ವಾಗ್ದಾನ ಮಾಡಿದ ಮನೆಗಳನ್ನು ಶೀಘ್ರವಾಗಿ ವಿತರಿಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.