ವೀಡಿಯೋ ಪ್ರಕರಣ: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಿತೇಂದ್ರ ಭೇಟಿ
Team Udayavani, Jul 31, 2023, 11:19 PM IST
ಉಡುಪಿ: ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆಯಲ್ಲಿ ಹಾಗೂ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ಅವರು ಆಗಮಿಸಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರಲ್ಲದೇ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದರು.
ಬೆಳಗ್ಗೆ 12ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು, ಸಂಜೆ 5.30 ಗಂಟೆಯವರೆಗೂ ಮಾಹಿತಿ ಸಂಗ್ರಹಿಸಿದರು. ಪೊಲೀಸರು ಈಗಾಗಲೇ ಕಾಲೇಜಿ ನಲ್ಲಿ ಅಳವಡಿಕೆ ಮಾಡಿದ್ದ ಕೆಮರಾದ 6 ತಿಂಗಳ ಡಿವಿಆರ್, ವೀಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯರ ಕಾಲ್ ಡೀಟೈಲ್ಸ್ಗಳನ್ನು ಪಡೆದುಕೊಂಡಿದ್ದಾರೆ. ಈಗಾಗಲೇ ಘಟನೆಯ ಬಗ್ಗೆ ಸಾಕ್ಷ್ಯ ಹೇಳಿಕೆಗಳನ್ನು ಹಲವಾರು ಮಂದಿಯಿಂದ ಪಡೆದುಕೊಂಡಿದ್ದಾರೆ. ಈ ಎಲ್ಲ ವಿಚಾರಗಳನ್ನು ಅವರಿಗೆ ನೀಡಲಾಯಿತು.
ಜಿಲ್ಲಾ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕಾರವಾರ ಜಿಲ್ಲೆಯ ಎಸ್ಪಿ ಎನ್.ವಿಷ್ಣುವರ್ಧನ್, ಉಡುಪಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ದಿನಕರ, ತನಿಖಾಧಿಕಾರಿ ಬೆಳ್ಳಿಯಪ್ಪ, ಮಲ್ಪೆ ಠಾಣೆಯ ನಿರೀಕ್ಷಕ ಮಂಜುನಾಥ ಗೌಡ ಮತ್ತಿತರ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.