ಭಾರತ ವಿರುದ್ಧ ಟಿ20 ಸರಣಿಗೆ ತಂಡ ಪ್ರಕಟ: ಸ್ಟಾರ್ ಆಟಗಾರರನ್ನು ಕರೆಸಿದ ವಿಂಡೀಸ್
Team Udayavani, Aug 1, 2023, 1:00 PM IST
ಟ್ರನಿಡಾಡ್: ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಇಂದು ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಗುರುವಾರದಿಂದ ಟಿ20 ಸರಣಿ ಆರಂಭವಾಗಲಿದೆ.
ಐದು ಪಂದ್ಯಗಳ ಸರಣಿಗೆ ವಿಂಡೀಸ್ 15 ಮಂದಿಯ ತಂಡ ಪ್ರಕಟಿಸಿದ್ದು, ಸ್ಟಾರ್ ಆಟಗಾರರು ಸ್ಕ್ವಾಡ್ ಗೆ ಮರಳಿದ್ದಾರೆ. ಇತ್ತೀಚೆಗಷ್ಟೇ ಎಂಎಲ್ ಸಿ ಕೂಟದ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ನಿಕೋಲಸ್ ಪೂರನ್ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.
ಏಕದಿನ ನಾಯಕ ಶಾಯ್ ಹೋಪ್ ಮತ್ತು ವೇಗಿ ಒಶಾನೆ ಥೋಮಸ್ ಅವರು ಟಿ20 ಮಾದರಿಗೆ ಮರಳಿದ್ದಾರೆ. ಥಾಮಸ್ 2021ರ ಡಿಸೆಂಬರ್ ನಲ್ಲಿ ಶಾಯ್ ಹೋಪ್ 2022ರ ಫೆಬ್ರವರಿಯಲ್ಲಿ ಭಾರತದ ವಿರುದ್ದ ಕೊನೆಯ ಟಿ20 ಪಂದ್ಯವಾಡಿದ್ದರು.
ಮುಂದಿನ ಐಸಿಸಿ ಪುರುಷರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲಾಗಿದೆ. ನಾವು ಸರಿಯಾದ ಸಂಯೋಜನೆಗಳನ್ನು ಹುಡುಕಲು ಪ್ರಯತ್ನಿಸುತ್ತಿರುವಾಗ ನಾವು ವಿವಿಧ ಯೋಜನೆಗಳನ್ನು ನೋಡುತ್ತಿದ್ದೇವೆ. ನಮ್ಮ ತಂಡದಲ್ಲಿ ನಾವು ಕೆಲವು ಮ್ಯಾಚ್ ವಿನ್ನರ್ ಗಳನ್ನು ಹೊಂದಿದ್ದೇವೆ. ಭಾರತದ ವಿರುದ್ಧದ ಸರಣಿಯಿಂದ ನಾವು ತಯಾರಿ ಆರಂಭಿಸುತ್ತೇವೆ ಎಂದು ಪ್ರಮುಖ ಆಯ್ಕೆಗಾರ ಡೆಸ್ಮಂಡ್ ಹೇನ್ಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೆಸ್ಟ್ ಇಂಡೀಸ್ ತಂಡ
ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ನಿಕೋಲಸ್ ಪೂರಾನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ ಮತ್ತು ಒಶಾನೆ ಥೋಮಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.