ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ!
Team Udayavani, Aug 1, 2023, 3:30 PM IST
ವಿಜಯಪುರ: ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ನವದಂತಿ ಬಿದ್ದು ಮೃತಪಟ್ಟಿದ್ದಾರೆ.
ಇದು ಆತ್ಮಹತ್ಯೆಯೋ ಇಲ್ಲವೇ ಆಕಸ್ಮಿಕ ಘಟನೆಯೇ ಎಂಬುದು ತಿಳಿದು ಬಂದಿಲ್ಲ. ಕೆರೆಕೋಡಿ ನಿವಾಸಿ ರಮೇಶ್ (26) ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತರು ಎಂದು ಗುರುತಿಸಲಾಗಿದೆ.
ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರು ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ಐದು ತಿಂಗಳ ಹಿಂದೆ ಮದುವೆಯಾಗಿದ್ದರು. ಐದು ದಿನಗಳ ಹಿಂದೆ ಬಿಜ್ಜವಾರದ ಸಂಬಂಧಿಕರ ಮನೆಗೆ ಬಂದಿದ್ದರು. ಬಿಜ್ಜವಾರದ ಅಶ್ವತ್ಥನಾರಾಯಣ ಎಂಬುವರ ತೋಟದ ಕೃಷಿ ಹೊಂಡದಲ್ಲಿ ಸೋಮವಾರ ಬೆಳಗ್ಗೆ ಇಬ್ಬರ ಮೃತದೇಹಗಳು ಕಂಡು ಬಂದಿವೆ.
ತಕ್ಷಣ ತೋಟದ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ವಿಜಯಪುರ ಪೊಲೀಸರು, ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆ ಸಂಬಂಧ ದೂರು ದಾಖಲಿಸಲಾಗಿದ್ದು, ತನಿಖೆ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.