ʼಜೈಲರ್ʼ, ʼಕ್ಯಾಪ್ಟನ್ ಮಿಲ್ಲರ್ʼ ಬಳಿಕ ಮಾಲಿವುಡ್ನ ಈ ಸ್ಟಾರ್ ಜೊತೆ ಶಿವಣ್ಣ ನಟನೆ?
Team Udayavani, Aug 1, 2023, 6:45 PM IST
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಿದ್ದವಾಗಿದೆ. ಈ ನಡುವೆಯೂ ಶಿವಣ್ಣ ಬೇರೆ ಭಾಷೆಯ ಸಿನಿಮಾದಲ್ಲಿ ಖಡಕ್ ನಟನಾಗಿ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ.
ʼಜೈಲರ್ʼ ಸಿನಿಮಾದಲ್ಲಿ ಶಿವರಾಜ್ ಕುಮಾರ್ ರಜಿನಿಕಾಂತ್ ಅವರೊಂದಿಗೆ ನಟಿಸಿದ್ದಾರೆ. ಈ ಸಿನಿಮಾದ ಜೊತೆಗೆ ಕಾಲಿವುಡ್ ನಲ್ಲಿ ಧನುಷ್ ಅವರೊಂದಿಗೆ ʼಕ್ಯಾಪ್ಟನ್ ಮಿಲ್ಲರ್ʼ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಎರಡು ಸಿನಿಮಾದಲ್ಲಿನ ಶಿವರಾಜ್ ಕುಮಾರ್ ಲುಕ್ ನೋಡಿ ಸ್ಯಾಂಡಲ್ ವುಡ್ ಹಾಗೂ ಕಾಲಿವುಡ್ ಮಂದಿ ಫಿದಾ ಆಗಿದ್ದಾರೆ.
ಈ ಎರಡು ಸಿನಿಮಾದ ನಡುವೆ ಈಗ ಮತ್ತೊಂದು ಸಿನಿಮಾದಲ್ಲಿ ಮಾಲಿವುಡ್ ನ ಖ್ಯಾತ ನಟನೊಂದಿಗೆ ಅವರು ನಟಿಸಲಿದ್ದಾರೆ ಎನ್ನುವ ಬಗ್ಗೆ ವರದಿಯೊಂದು ಹೊರಬಿದ್ದಿದೆ.
ಈಗಾಗಲೇ ಹೊಂಬಾಳೆ ಫಿಲ್ಮ್ಸ್ ನ ಸಿನಿಮಾದಲ್ಲಿ ಗುರುತಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್ ಅವರು ಶಿವರಾಜ್ ಕುಮಾರ್ ಅವರೊಂದಿಗೆ ದೊಡ್ಡ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Actrees : ಸಂಬಂಧ ಬೆಳೆಸಿ ಖಾಸಗಿ ವಿಡಿಯೋ ಲೀಕ್; ಖ್ಯಾತ ನಿರ್ಮಾಪಕನ ವಿರುದ್ಧ ನಟಿ ದೂರು
“ಪೃಥ್ವಿರಾಜ್ ಸುಕುಮಾರನ್ ಅವರೊಂದಿಗೆ ನಟಿಸುವ ಸಿನಿಮಾದ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನು ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಹೋದರು, ಕೂಡಲೇ ಶೀಘ್ರದಲ್ಲೇ ಈ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ. ಬೇರೆ ಭಾಷಾ ಸಿನಿಮಾರಂಗದಿಂದ ಕೆಲ ಆಫರ್ ಗಳು ಬರುತ್ತಿದೆ” ಎಂದು ಸಂದರ್ಶನವೊಂದರಲ್ಲಿ ಶಿವರಾಜ್ ಕುಮಾರ್ ಹೇಳಿರುವುದಾಗಿ ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
ಸಾಧ್ಯ ಶಿವರಾಜ್ ಕುಮಾರ್ ಶ್ರೀನಿ ಅವರ ʼಘೋಸ್ಟ್ʼ, ಅರ್ಜುನ್ ಜನ್ಯ ಅವರ ʼ45ʼ ಹಾಗೂ ಯೋಗರಾಜ್ ಭಟ್ ಅವರ ʼಕರಟಕ ದಮನಕʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಪ್ರಭುದೇವ ಅವರು ಕೂಡ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.