Karkala: ಕಲ್ಲು ಕೋರೆ ಕಾರ್ಮಿಕ ಸಾವು
Team Udayavani, Aug 1, 2023, 10:46 PM IST
ಕಾರ್ಕಳ: ಕಾರ್ಕಳದ ನಿಟ್ಟೆ ಗ್ರಾಮದ ಗುಂಡ್ಯಡ್ಕ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಅವಘಡ ಸಂಭವಿಸಿ ಕಲ್ಲು ಕ್ವಾರೆಯ ಕಾರ್ಮಿಕನೋರ್ವ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಆ. 1ರಂದು ಸಂಭವಿಸಿದೆ. ಮೃತ ಕಾರ್ಮಿಕ ಬಾಗಲಕೋಟೆ ಮೂಲದ ವೆಂಕಟೇಶ್ (32) ಎಂದು ಗುರುತಿಸಲಾಗಿದೆ.
ಕಾರ್ಮಿಕ ಕೆಲಸ ಮಾಡುತ್ತಿದ್ದ ವೇಳೆ ಕಲ್ಲು ಬಿದ್ದು ಮೃತಪಟ್ಟಿದ್ದಾಗಿ ಹೇಳಲಾಗುತಿದ್ದರೂ ಸ್ಥಳಿಯರು ಕ್ರಶರ್ನಲ್ಲಿ ಸ್ಫೋಟ ನಡೆದು ಮೃತಪಟ್ಟಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ. ಕ್ವಾರೆಯಲ್ಲಿ ಭಾರಿ ನ್ಪೋಟದ ಶಬ್ದ ಕೇಳಿ ಬಂದಿದ್ದಾಗಿ ತಿಳಿಸಿದ್ದಾರೆ. ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದ್ದು, ಅಲ್ಲಿ ಮೃತಪಟ್ಟರು. ಘಟನ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ ತಾಲೂಕಿನಲ್ಲಿರುವ ನೂರಾರು ಕಲ್ಲುಕೋರೆಗಳಲ್ಲಿ ಅಸುರಕ್ಷಿತವಾಗಿ ಹೊರ ರಾಜ್ಯ, ಜಿಲ್ಲೆಗಳ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ ಎನ್ನುವ ದೂರುಗಳಿದ್ದು, ಕಲ್ಲುಕೋರೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೂ ಯಾವುದೇ ಸುರಕ್ಷತೆ ಇಲ್ಲದೆ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಸ್ಥಳಿಯರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.