ಕದ್ದ ಮೊಬೈಲ್ ಮಾರಿ ಬೆಟ್ಟಿಂಗ್, ಮೋಜು
Team Udayavani, Aug 1, 2023, 11:30 PM IST
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಹಾಗೂ ಮೋಜು-ಮಸ್ತಿಗಾಗಿ ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿದ್ದಾಪುರ ನಿವಾಸಿ ಮುತ್ತು (19) ಬಂಧಿತ ಆರೋಪಿ. ಈತನಿಂದ 3.5 ಲಕ್ಷ ರೂ. ಮೌಲ್ಯದ 23 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರ ಮೊಬೈಲ್ ಕಳವು ಮಾಡುತ್ತಿದ್ದ.
ಅವುಗಳನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಿ, ಬಂದ ಹಣದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಮೋಜು-ಮಸ್ತಿ, ಪಾರ್ಟಿ, ಯುವತಿಯರ ಜತೆ ಸುತ್ತಾಡಲು ಬಳಸುತ್ತಿದ್ದ. ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದು, ಚಾಮರಾಜಪೇಟೆ, ಮೈಸೂರು ರಸ್ತೆ, ಕೆ.ಆರ್.ಮಾರ್ಕೆಟ್, ಕಲಾಸಿಪಾಳ್ಯ, ಕೆ.ಜಿ.ನಗರ ಠಾಣೆ ವ್ಯಾಪ್ತಿಯ ಪಾರ್ಕ್, ಮಾರುಕಟ್ಟೆ ,ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರ ಮೊಬೈಲ್ ದೋಚಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ಹನುಮಂತ ಭಜಂತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.