Sagara ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿನಿಯರಿಗೆ ಶಾಕ್!
Team Udayavani, Aug 2, 2023, 3:44 PM IST
ಸಾಗರ: ತಾಲೂಕಿನ ಸಿಗಂದೂರು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಕರೆಂಟ್ ಶಾಕ್ ತಗುಲಿದ ಘಟನೆ ಬುಧವಾರ ನಡೆದಿದೆ.
ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕ ಎದುರಿನಲ್ಲಿ ಬರುತ್ತಿದ್ದ ಬೈಕನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಬಸ್ ತೆಗೆದು ಕೊಂಡಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ವಿದ್ಯುತ್ ತಂತಿ ತುಂಡಾಗಿ ಬಸ್ ಮೇಲೆ ಬಿದ್ದು ಬಸ್ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಇಬ್ಬರು ವಿದ್ಯಾರ್ಥಿನಿಯರು ಎಚ್ಚರ ತಪ್ಪಿದ್ದಾರೆ.
ತಕ್ಷಣ ವಿದ್ಯಾರ್ಥಿನಿಯರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ.
ಬಸ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ತಕ್ಷಣ ಸ್ಥಳೀಯರು ಕಾರ್ಯಪ್ರವೃತ್ತರಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಜೊತೆಗೆ ರಕ್ಷಣಾ ಕಾರ್ಯ ಕೈಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಬಸ್ನಲ್ಲಿ35ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಯಾರಿಗೂ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.