ಧಾರವಾಡ: ಬದುಕಿನ ವಿಧಾನ ತಿಳಿಸುವಲಿ ಚಿತ್ರಕಲೆ ಮುಖ್ಯ ಪಾತ್ರ
ವಿದ್ಯಾರ್ಥಿಗಳಲ್ಲಿ ನೈತಿಕತೆ ಬೆಳೆದಾಗ ಅವರೆಂದೂ ನಕಲು ಮಾಡುವುದಿಲ್ಲ
Team Udayavani, Aug 2, 2023, 9:46 AM IST
ಧಾರವಾಡ: ಒಂದು ಕಾಲದ ಬದುಕಿನ ವಿಧಾನ ತಿಳಿಸುವಲ್ಲಿ ಚಿತ್ರಕಲೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಹೇಳಿದರು. ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ನಗರದ ಆಯುಕ್ತರ ಕಚೇರಿಯಿಂದ “ಶಾಲಾ ವಿದ್ಯಾರ್ಥಿಗಳಿಗೆ ನಕಲು ಮುಕ್ತ ಪರೀಕ್ಷೆ ಹಾಗೂ ವಿದ್ಯಾರ್ಥಿಗಳಲ್ಲಿ ಮಾನವೀಯ
ಮೌಲ್ಯ’ ಎಂಬ ವಿಷಯವಾಗಿ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಶಿಕ್ಷಕರ 5 ದಿನಗಳ ಕಲಾಕೃತಿ ರಚನಾ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರಕಲೆ ಜಗತ್ತಿನ ಎಲ್ಲ ರಾಷ್ಟ್ರಗಳ ಗಡಿಯನ್ನು ದಾಟಿದೆ. ಹೀಗಾಗಿ ವಿಶ್ವ ಭಾಷೆಯ ಹಿರಿಮೆ ಇದೆ. ನಕಲು ಮುಕ್ತ ಪರೀಕ್ಷೆಗಳು ನಡೆದಾಗಲೇ ವಿದ್ಯಾರ್ಥಿಗಳ ನಿಖರವಾದ ಜ್ಞಾನಾರ್ಜನೆಯ ಕಲಿವಿನ ಫಲದ ಮಟ್ಟ ಗೋಚರವಾಗುತ್ತದೆ. ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತಾಗ ಅವರು ರಾಷ್ಟ್ರ ಬಯಸುವ ಸತøಜೆಗಳಾಗಲು ಸಾಧ್ಯವಾಗುತ್ತದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕಿ ಮಮತಾ ನಾಯಕ ಮಾತನಾಡಿ, ಎಲ್ಲಾ ಪರೀಕ್ಷೆಗಳ ಕುರಿತು ಇಲಾಖೆಗೆ ಗಂಭೀರ ಚಿಂತನೆ ಇದೆ.
ವಿದ್ಯಾರ್ಥಿಗಳಲ್ಲಿ ನೈತಿಕತೆ ಬೆಳೆದಾಗ ಅವರೆಂದೂ ನಕಲು ಮಾಡುವುದಿಲ್ಲ. ವಿದ್ಯಾರ್ಥಿಗಳ ಮನದ ಭಾವನೆಗಳ ಅಭಿವ್ಯಕ್ತಿಗೆ ಚಿತ್ರಕಲೆ ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು. ಇಲಾಖೆಯ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಮಾತನಾಡಿ, ಚಿತ್ರಕಲೆ ಮನಸ್ಸಿನ ಏಕಾಗ್ರತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ವಿಜ್ಞಾನ, ಸಮಾಜ ವಿಜ್ಞಾನ ಹಾಗೂ ಗಣಿತ ವಿಷಯಗಳಲ್ಲಿ ಚಿತ್ರಕಲೆಯನ್ನು ಪಠ್ಯಪೂರಕವಾಗಿ ಬಳಸಿಕೊಂಡಾಗ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳನ್ನು ಸಂಪಾದಿಸಲು ಸಾಧ್ಯವಾಗುತ್ತದೆ ಎಂದರು.
ಉಪನಿರ್ದೇಶಕ ಸಂಜೀವ ಬಿಂಗೇರಿ, ಸರಕಾರಿ ಚಿತ್ರಕಲಾ ಕಾಲೇಜು ಪ್ರಾಚಾರ್ಯ ಡಾ|ಬಿ.ಎಚ್. ಕುರಿ, ಹಿರಿಯ ಚಿತ್ರಕಲಾ ವಿಷಯ ಪರಿವೀಕ್ಷಕ ಪಿ.ಆರ್. ಬಾರಕೇರ, ವೃತ್ತಿಶಿಕ್ಷಣದ ಹಿರಿಯ ಸಹಾಯಕ ನಿರ್ದೇಶಕ ಬಿ.ವೈ. ಭಜಂತ್ರಿ, ಹಿರಿಯ ಸಹಾಯಕ ನಿರ್ದೇಶಕಿ ಪಾರ್ವತಿ ವಸ್ತ್ರದ ಇನ್ನಿತರರಿದ್ದರು. ಇ-ಆಡಳಿತಾಧಿಕಾರಿ ಶಾಂತಾ ಮೀಸಿ ಸ್ವಾಗತಿಸಿದರು.
ಸಾರ್ವಜನಿಕ ಸಂಪರ್ಕಾಧಿಕಾರಿ ಸುಜಾತಾ ತಿಮ್ಮಾಪುರ ವಂದಿಸಿದರು. ಕುರುಬಗಟ್ಟಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಚಿಕ್ಕೋಡಿ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳ ಸರಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆಗಳ ಒಟ್ಟು 50 ಜನ ಚಿತ್ರಕಲಾ ಶಿಕ್ಷಕರು ಆ. 5ರವರೆಗೆ ನಡೆಯುವ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.