Bajpe: ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ… ಓರ್ವನ ಬಂಧನ, ಸೊತ್ತು ವಶ
Team Udayavani, Aug 2, 2023, 11:05 PM IST
ಬಜಪೆ:ಮಂಗಳೂರು ನಗರದಾದ್ಯಂತ “ಮಾದಕ ವ್ಯಸನ ಮುಕ್ತ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಧ್ಯಾಹ್ನ 3.15ರ ಸಮಯಕ್ಕೆ ನಂಬರ್ ಫ್ಲೆಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆಯಿತು.
ತತ್‌ಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಸೂರಿಂಜೆ ಕಿನ್ನಿಗುಡ್ಡೆ ಹೌಸ್ ನಿವಾಸಿ ಅಬ್ದುಲ್ ಅಝೀಜ್ (34)ನನ್ನು ವಶಕ್ಕೆ ಪಡೆದರು. ಕಾರನ್ನು ಪರಿಶೀಲನೆ ಮಾಡಿದಾಗ 250 ಗ್ರಾಂ ತೂಕದ ಮಾದಕ ವಸ್ತು ಚರಸ್ ಪತ್ತೆಯಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಆತನ ಬಗ್ಗೆ ವಿಚಾರಿಸಿದಾಗ ಮೂಡುಬಿದಿರೆ ತೋಡಾರು ನಿವಾಸಿ ಕ್ಯಾಬರೇ ಫೈಜಲ್ ಎಂದು ತಿಳಿದು ಬಂದಿದೆ. ಆತನ ಪತ್ತೆಗಾಗಿ ಪೊಲೀಸರು ವ್ಯಾಪಕ ಕಾರ್ಯಚರಣೆ ನಡೆಸುತ್ತಿದ್ದಾರೆ. ಆರೋಪಿಯಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಬಜಪೆ ಠಾಣಾ ಪಿ.ಐ. ಪ್ರಕಾಶ್ ನೇತೃತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.