ಬೆಂಗಳೂರು: ಪತ್ನಿ, ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್
ಎಂಟು ತಿಂಗಳ ಮಗು ಸೇರಿ ಇಬ್ಬರು ಹೆಣ್ಣು ಮಕ್ಕಳ ದಾರುಣ ಅಂತ್ಯ...!
Team Udayavani, Aug 3, 2023, 8:51 PM IST
ಬೆಂಗಳೂರು: ವೈಟ್‌ಫೀಲ್ಡ್‌ನಲ್ಲಿ ಇಂಜಿನಿಯರ್ ಒಬ್ಬ ತನ್ನ ಮನೆಯಲ್ಲಿ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಹಿಸುಕಿ ಹತ್ಯೆಗೈದ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಮೃತರನ್ನು ವೀರಾರ್ಜುನ ವಿಜಯ್(31), ಪತ್ನಿ ಹೈಮಾವತಿ (29) ಮತ್ತು ಪುತ್ರಿಯರಾದ ಮೋಕ್ಷ ಮೇಘನಯನ (2) ಮತ್ತು ಎಂಟು ತಿಂಗಳ ಮಗು ಶ್ರುತಿ ಸುನಯನ ಎಂದು ಗುರುತಿಸಲಾಗಿದೆ.
ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ, ಈ ರೀತಿ ಕಠಿಣ ನಿರ್ಧಾರ ತಳೆಯಲು ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಜುಲೈ 31 ರಂದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಕೊಂದು ಅದೇ ದಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ಗುರುವಾರ ಸತ್ಯಸಾಯಿ ಲೇಔಟ್‌ನಲ್ಲಿರುವ ಹೈಮಾವತಿ ಅವರ ಸಹೋದರ ನಿವಾಸಕ್ಕೆ ಭೇಟಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಹಲವು ಬಾರಿ ಬಾಗಿಲು ತಟ್ಟಿದರೂ ಯಾರೂ ಸ್ಪಂದಿಸದಿದ್ದಾಗ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಮ್ಮ ತಂಡ ಸ್ಥಳಕ್ಕೆ ತಲುಪಿ ಬಾಗಿಲು ಒಡೆದಿದೆ. ವ್ಯಕ್ತಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ನಾವು ನೋಡಿದ್ದೇವೆ, ಅವರ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಮನೆಯ ಕೋಣೆಯಲ್ಲಿ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ. ಮಹಿಳೆ ಮತ್ತು ಇಬ್ಬರು ಮಕ್ಕಳ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳನ್ನು ನಾವು ಗಮನಿಸಿದ್ದೇವೆ ಎಂದು ಅವರು ಹೇಳಿದರು.
ಕಳೆದ ಕೆಲವು ದಿನಗಳಿಂದ ವ್ಯಕ್ತಿ ಮತ್ತು ಅವರ ಪತ್ನಿ ಸಂಪರ್ಕದಲ್ಲಿ ಇರಲಿಲ್ಲ.ಅದಕ್ಕಾಗಿ ನೋಡಲೆಂದು ಬಂದೆ ಎಂದು ಹೈಮಾವತಿಯ ಸಹೋದರ ಹೇಳಿದ್ದಾರೆ. ದಂಪತಿ ಆರು ವರ್ಷಗಳ ಹಿಂದೆ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.